Tuesday, July 1, 2025
No menu items!
HomeNewsFree Hostel- ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Free Hostel- ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ 2025-26ನೇ ಸಾಲಿನಲ್ಲಿ(Free Hostel Admission) ಕಾರ್ಯನಿರತದಲ್ಲಿರುವ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಮಾಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಈ ಹಾಸ್ಟೆಲ್ ವ್ಯವಸ್ಥೆಯ ಅಡಿಯಲ್ಲಿರುವ ವಿದ್ಯಾರ್ಥಿಗಳಿಗೆ(Free Hostel Application) ಉಚಿತ ವಸತಿ, ಆಹಾರ, ಅಧ್ಯಯನದ ಶಿಸ್ತಿನ ವಾತಾವರಣ, ಮೌಲ್ಯಾಧಾರಿತ ಶಿಕ್ಷಣ ಹಾಗೂ ಸಂಪೂರ್ಣ ಸುರಕ್ಷಿತ ಪರಿಸರವನ್ನು ಒದಗಿಸುವ ಉದ್ದೇಶವಿದಾಗಿದೆ. ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: Scholorship-B.Sc ಮತ್ತು B.Tec ವಿದ್ಯಾರ್ಥಿನಿಯರಿಗೆ 2.4 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ವಿದ್ಯಾರ್ಥಿಗಳು ಉಚಿತ ಹಾಸ್ಟೆಲ್ ವ್ಯವಸ್ಥೆಯ ಪ್ರವೇಶಕ್ಕಾಗಿ ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶವಿದೆ? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಪ್ರಾರಂಭ ಮತ್ತು ಕೊನೆಯ ದಿನಾಂಕ:

ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ- 27-05-2025

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 31-08-2025

ಇದನ್ನೂ ಓದಿ: BMTC Tour Packages-ಬಿಎಂಟಿಸಿಯಿಂದ ಒಂದು ದಿನದ ಪ್ಯಾಕೇಜ್ ಟೂರ್ ಆರಂಭ!

List Of Free Hostel – ಯಾವ ಯಾವ ಜಿಲ್ಲೆಯಲ್ಲಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಅವಕಾಶವಿದೆ:

ಈಗ ನೀವು ನಿಮ್ಮ ಜಿಲ್ಲೆ ಮತ್ತು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿನಿಲಯಗಳ ಪಟ್ಟಿ, ಲಭ್ಯವಿರುವ ಸೀಟಿಗಳ ಸಂಖ್ಯೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ. ಮೊದಲು ಈ ಲಿಂಕ್ ಮೇಲೆ Karnataka Free Hostel List ಅಧಿಕೃತ ವೆಬ್‌ಸೈಟ್ ಲಿಂಕ್‌ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು ಆಯ್ಕೆಮಾಡಿಕೊಂಡು, ಆ ಪ್ರದೇಶದಲ್ಲಿರುವ ಎಲ್ಲಾ ವಿದ್ಯಾರ್ಥಿನಿಲಯಗಳ ಪಟ್ಟಿ ಹಾಗೂ ಸೀಟ್ ಲಭ್ಯತೆ ಕುರಿತು ಸಂಪೂರ್ಣ ಮಾಹಿತಿಯನ್ನು ನೋಡಬಹುದಾಗಿದೆ.

Documenst -ಅರ್ಜಿ ಸಲ್ಲಿಸಲು ದಾಖಲೆಗಳು:

ವಿದ್ಯಾರ್ಥಿಯ ಎಸ್ ಎಸ್ ಪಿ ಐಡಿ ಸಂಖ್ಯೆ/SSP Student ID

ಆದಾಯ ಪ್ರಮಾಣ ಪತ್ರ/Income RD Number

ಶಾಲಾ ದಾಖಲಾತಿ/University Registration Number

ಜಾತಿ ಪ್ರಮಾಣ ಪತ್ರ/Caste RD Number

ನಿವಾಸ ದೃಡೀಕರಣ/Contact Address

ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Diesel Pump Scheme-ಡಿಸೇಲ್ ಪಂಪ್ ಪಡೆಯಲು ಶೇ 90% ಸಬ್ಸಿಡಿಯಲ್ಲಿ ಅರ್ಜಿ ಆಹ್ವಾನ!

free hostel

ಇದನ್ನೂ ಓದಿ: Free Hostel Application-ಉಚಿತ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Online Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

Step-1: ಮೊದಲಿಗೆ ಅರ್ಹ ವಿದ್ಯಾರ್ಥಿಗಳು ಈ ಲಿಂಕ್ CLICK HERE ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಇಲ್ಲಿ ಮೇಲೆ ಕಾಣುವ “2025-26ನೇ ಸಾಲಿನ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ.

Step-2: ತದನಂತರ ಅದೇ ಪೇಜ್ ನಲ್ಲಿ ವಿದ್ಯಾರ್ಥಿಯು ತಮ್ಮ SWD ID ಮತ್ತು Password ಅನ್ನು ಹಾಕಿ “LOG IN” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ಒಂದು ವೇಳೆ ನಿಮ್ಮ ಹತ್ತಿರ SWD ID ಇಲ್ಲದಿದ್ದರೆ “Register” ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಂಡು ಅಭ್ಯರ್ಥಿಯು SWD ID ಅನ್ನು ಸಿದ್ದ ಮಾಡಿಕೊಂಡು ಲಾಗಿನ್ ಮಡಬೇಕು.

ಇದನ್ನೂ ಓದಿ: Crop Insurance-ಬೆಳೆ ವಿಮೆ ಯೋಜನೆಯ ಕುರಿತು ಇಲ್ಲಿದೆ ಅಗತ್ಯ ಮಾಹಿತಿ!

Step-3: ಲಾಗಿನ್ ಅದ ನಂತರ ಅರ್ಜಿ ನಮೂನೆ Open ಆಗುತ್ತದೆ. ಅಲ್ಲಿ ಕೇಳಿರುವ ಎಲ್ಲಾ ಸಂಪೂರ್ಣ ಅಗತ್ಯ ವಿವರಗಳು ಮತ್ತು ದಾಖಲೆಗಳನ್ನು”UPLOAD” ಮಾಡಿ ಕೊನೆಗೆ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಮುಕ್ತಾಯಗೊಳ್ಳುತ್ತದೆ.

Karanataka Admission- ಯಾವ ಯಾವ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ?

ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿನಿಲಯ.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯ.

ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ.

ಇದನ್ನೂ ಓದಿ: Horticulture Department- ತೋಟಗಾರಿಕೆ ಇಲಾಖೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯಗಳ

ಈ ಮೇಲಿನ ಎಲ್ಲಾ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

RELATED ARTICLES
- Advertisment -

Most Popular

Recent Comments