2025-26 ನೇ ಸಾಲಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ಇದರ ಅಡಿಯಲ್ಲಿ ಅರಿವು ಶೈಕ್ಷಣಿಕ ಸಾಲ(Arivu Education Loan) ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶೇ. 2% ರ ಬಡ್ಡಿದರಲ್ಲಿ 1.0 ಲಕ್ಷ ಶಿಕ್ಷಣ ಸಾಲವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶೈಕ್ಷಣಿಕ ಸಹಾಯದ ರೂಪದಲ್ಲಿ ಶಿಕ್ಷಣ ಸಾಲಗಳ(Study Loan Scheme) ಮಹತ್ವವು ಹೆಚ್ಚಿನ ಪಾತ್ರವನ್ನು ವಹಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೇರಣೆಯಾಗಿದೆ. ವಿದ್ಯಾರ್ಥಿಗಳು ಯಾವುದೇ ಕೋರ್ಸ್ಗಾಗಿ ಬಳಸಬಹುದಾದ ಈ ಸಾಲದ ಮೂಲಕ ತಮ್ಮ ಕನಸುಗಳ ಶಿಕ್ಷಣವನ್ನು ನಿರಂತರವಾಗಿಸಲು ಸಹಾಯಕಾರಿಯಾಗಿದೆ.
ಇದನ್ನೂ ಓದಿ: Nursing scholarship-ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!
ಈ ವಿದ್ಯಾರ್ಥಿವೇತನದ ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ಹಂತಗಳು? ಅರ್ಜಿಯನ್ನು ಸಲ್ಲಿಸಲು ಬೇಕಾದ ಅಗತ್ಯ ದಾಖಲಾತಿಗಳು? ಕೊನೆಯ ದಿನಾಂಕ ? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Who Can Apply-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
ಅರ್ಜಿದಾರರು ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರರುನಮೂನೆ-ಜಿ ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದೊಳಗಿನವರಾಗಿರಬೇಕು.
ಇದನ್ನೂ ಓದಿ: IDFC Bank Scholarship-ಐಡಿಎಫ್ಸಿ ಬ್ಯಾಂಕ್ ನಿಂದ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!
ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಮತ್ತು ಶೇ.5ರಷ್ಟು ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಒಂದು ಕುಟುಂಬದಲ್ಲಿ ಎರಡು ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರಿಂದ ನಿಗಧಿಪಡಿಸಿರುವ ಸಿ.ಇ.ಟಿ ಫೀ, ಪ್ರವೇಶ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ, ಪುಸ್ತಕ, ಲ್ಯಾಪ್ಟಾಪ್, ಪರೀಕ್ಷಾ ಶುಲ್ಕ ಇತ್ಯಾದಿ ಶುಲ್ಕಗಳಿಗಾಗಿ ವಾರ್ಷಿಕ ರೂ.1,00,000/-ಗಳ ಮಿತಿಯೊಳಗೆ ಸಾಲ ನೀಡಲಾಗುತ್ತದೆ.
ಸಿ.ಇ.ಟಿ / ನೀಟ್ ಮುಖಾಂತರ ಪ್ರವೇಶ ಪಡೆದ ಕಾಲೇಜಿನ ಪ್ರಾಂಶುಪಾಲರಿಂದ ಧೃಡೀಕೃತ ಫೀ ಸ್ಟ್ರಕ್ಚರ್ ಅನ್ವಯ ಸಾಲ ನೀಡಲಾಗುತ್ತದೆ.
ಇದನ್ನೂ ಓದಿ: Mobile Canteen Scheme-₹5 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟಿನ್ ತೆರೆಯಲು ಅರ್ಜಿ!
Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2025
ಅರ್ಜಿದಾರರಿಗೆ ವಿಶೇಷ ಸೂಚನೆಗಳು:
ಮೊಬೈಲ್ ಸಂಖ್ಯೆಯು ಆಧಾರ್ಗೆ ಜೋಡಣೆಯಾಗಿರಬೇಕು
ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್/ಸೀಡಿಂಗ್ ಆಗಿರಬೇಕು.
Education Loan Amount Details-ಎಷ್ಟು ಶಿಕ್ಷಣ ಸಾಲ ನೀಡಲಾಗುತ್ತದೆ?
ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ, ಸ್ನಾತಕೋತ್ತರ ಮತ್ತು ಪಿ.ಎಚ್.ಡಿ., ಕೋರ್ಸ್ ಗಳಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ.1,00,000/-ಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡಲಾಗುತ್ತದೆ.
ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿಯೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಪ್ರಾಂಶುಪಾಲರು ಅಥವಾ ಹಾಸ್ಟೆಲ್ ವಾರ್ಡನ್ ರವರಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 36 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ವಿದ್ಯಾರ್ಥಿಯು ವ್ಯಾಸಂಗ ಪೂರ್ಣಗೊಂಡ 4ನೇ ತಿಂಗಳಿಂದ ಮರು ಪಾವತಿಸಬೇಕು, ಇದರಲ್ಲಿ 4 ತಿಂಗಳು ವಿರಾಮ ಅವಧಿ ಇರುತ್ತದೆ ಎಂದು ಅಧಿಕೃತ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: Girl child scheme-18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1.50 ಲಕ್ಷ ಸಹಾಯಧನ!
Online Application Link-ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
Step-1: ಪ್ರಥಮದಲ್ಲಿ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: Fasal Bhima Yojane-ಬೆಳೆ ವಿಮೆ ನೊಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ!
Required Documents-ಅರ್ಜಿ ಸಲ್ಲಿಸಲು ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ.
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಪೋಟೋ.
- ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್.
- ಪ್ರಾಂಶುಪಾಲರು ದೃಢೀಕರಿಸಿದ ಪ್ರಸ್ತುತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ.
- ಕಾಲೇಜಿನಲ್ಲಿಯೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಪ್ರಾಂಶುಪಾಲರು ಅಥವಾ ಹಾಸ್ಟೆಲ್ ವಾರ್ಡನ್ ರವರಿಂದ ದೃಢೀಕರಣ ಪ್ರತಿ ಸಲ್ಲಿಸಬೇಕು.
Website-ಇನ್ನು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ- Click Here
Helpline-ಸಹಾಯವಾಣಿ- 9448451111