Friday, August 1, 2025
No menu items!
HomeNewsScholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

Scholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

ಹೀರೋ ಗ್ರೂಪ್‌ನಿಂದ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್(Raman Kant Foundation) ರವರ ಅಡಿಯಲ್ಲಿ 2025-2026 ನೇ ಸಾಲಿನಲ್ಲಿ ಪದವಿ ಕೋರ್ಸ ಗಳ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು 5,50,000 ದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಕರೆಯಲಾಗಿದೆ.

ಬಿಬಿಎ, ಬಿಕಾಂ (ಇಕಾನಾಮಿಕ್ಸ್), ಬಿಎಫ್‌ಐಎ, ಬಿಎಂಎಸ್, ಐಪಿಎಂ, ಬಿಎ, ಬಿಬಿಎಸ್ ಹಾಗು ಇತರ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳ ಮೊದಲ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಂಪರ್ ಸೌಲಭ್ಯ! (UG Students Support) ಈ ವಿದ್ಯಾರ್ಥಿಗಳು ತಮ್ಮ ಪದವಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ವರ್ಷಕ್ಕೆ ₹5.5 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ಮುಂದಿನ ಮೂರು ವರ್ಷಗಳವರೆಗೆ ಪಡೆಯಲು ಅರ್ಹರಾಗಿರುತ್ತಾರೆ. ಈ ಯೋಜನೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶವನ್ನು ಸುಲಭಗೊಳಿಸಲು ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ: RTC Aadhar Link Status-ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಲಿಂಕ್ ಅಗಿರುವುದನ್ನು ಈಗಲೇ ಪರಿಶೀಲಿಸಿ!

ಪ್ರಸ್ತುತ ಇಂದಿನ ಲೇಖನದಲ್ಲಿ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ರಾಮನ್ ಕಾಂತ್ ಕಾರ್ಯಕ್ರಮದ ಬಗ್ಗೆ ಮಾಹಿತಿ, ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ವಿಧಾನ? ಅವಶ್ಯಕ ದಾಖಲಾತಿಗಳೇನು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತನದ ನೀಡಲಾಗುತ್ತದೆ?

ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಲು ಮೂರು ವರ್ಷಗಳವರೆಗೆ ವರ್ಷಕ್ಕೆ 40,000 ನಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Family tree certificate-ವಂಶವೃಕ್ಷ ಪ್ರಮಾಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!

Last Date To Apply For Scholorship-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31-07-2025

Who Can Apply For This Scholorship-ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರು?

  1. ವಿದ್ಯಾರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
  2. ವಿದ್ಯಾರ್ಥಿಯು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.
  3. ವಿದ್ಯಾರ್ಥಿಯು ಪಿಡಬ್ಲ್ಯೂಡಿ ಯಲ್ಲಿ ಕನಿಷ್ಠ ಶೇಕಡಾವಾರು 70% ಅಂಕಗಳು ಪಡೆದಿರಬೇಕು.
  4. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀತಿಯಲ್ಲಿರಬೇಕು.
  5. ಬಿಬಿಎ, ಬಿಎಫ್‌ಐಎ, ಬಿ.ಕಾಂ,ಬಿಎಂಎಸ್, ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ), ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ಅಥವಾ ಯಾವುದೇ ಇತರೆ ಸಂಬಂಧಿತ ಪದವಿ ಕೋರ್ಸ್‌ಗಳ ಮೊದಲ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  6. ಈ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪಟ್ಟಿಯನ್ನು ವೀಕ್ಷಣೆ ಮಾಡಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: Ganga Kalyana Scheme-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು 8 ದಿನ ಬಾಕಿ!

Documents Required For Scholorship-ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳಾವುವು?

  • ಆಧಾರ್ ಕಾರ್ಡ್/Aadhar card
  • 10 ಮತ್ತು 12 ನೇ ತರಗತಿಯ ಅಂಕಪಟ್ಟಿ/10 & 12 marks card
  • ಪ್ರಸ್ತುತ ವರ್ಷದ ಪ್ರವೇಶ ಪತ್ರ/Entrance Certificate
  • ಪೋಷಕರ ಬ್ಯಾಂಕ್ ಖಾತೆ ಪ್ರತಿ/Bank Passbook
  • ಪೋಷಕರ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ/Income Certificate
  • ಕಾಲೇಜು ಶುಲ್ಕ ರಶೀದಿ/College Fee Recept
  • ಪೋಟೊ/Photocopy
  • ಮೊಬೈಲ್ ನಂಬರ್/Mobirl Number

How To Apply This Scholorship-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Karnataka Labour Scheme-ಕಾರ್ಮಿಕ ಮಂಡಳಿಯಿಂದ ಪರಿಹಾರ ಧನ 8 ಲಕ್ಷಕ್ಕೆ ಏರಿಕೆ!

scholorship application

ಇದನ್ನೂ ಓದಿ: Karnataka Weather-ಜು.27 ರವರೆಗೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ! ಇಲ್ಲಿದೆ ರಾಜ್ಯ ಮಳೆ ಮುನ್ಸೂಚನೆ!

Step-1: ಪ್ರಥಮದಲ್ಲಿ ಈ ಲಿಂಕ್ “Raman Kant Munjal Scholarships”ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಬಳಿಕ ಮೊದಲ ಬಾರಿಗೆ ಈ ಜಾಲತಾಣವನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ಸಿದ್ದಪಡಿಸಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಗೆ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

Step-4: ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Bharti Airtel Scholarship-ಏರ್‌ಟೆಲ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇನ್ನೂ 11 ದಿನ ಬಾಕಿ!

For More Information-ಹೆಚ್ಚಿನ ಸಂಪೂರ್ಣ ಉಪಯುಕ್ತ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Click Here

RELATED ARTICLES
- Advertisment -

Most Popular

Recent Comments