ರಾಜ್ಯದ ಮಹಿಳಾ ಸ್ವ-ಸಹಾಯ ಸಂಘಗಳ (Swasaya Sanga Subsidy Loan) ಸದಸ್ಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಆಕರ್ಷಕ ಸಹಾಯಧನ ಯೋಜನೆ! “ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ” ಅಡಿಯಲ್ಲಿ ₹2.5 ಲಕ್ಷದವರೆಗೆ ಸಾಲ ಮತ್ತು ಸಹಾಯಧನ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈ ಲೇಖನದಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? (Swasaya Sanga Subsidy Loan Scheme)ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ಹಂತಗಳಾವುವು? ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: Free Hostel Application-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!
Last Date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಈ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ಸಹಾಯಧನವನ್ನು ಪಡೆಯಲು 10 ಸೆಪ್ಟೆಂಬರ್ 2025 ಈ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Subsidy Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?
ಸಹಾಯಧನ ಮೊತ್ತ: ಪ್ರತಿ ಸದಸ್ಯರಿಗೆ ₹25,000 (₹15,000 ಸಹಾಯಧನ + ₹10,000 ಸಾಲ).
ಗುಂಪಿನ ವೆಚ್ಚ: ಕನಿಷ್ಠ 10 ಜನರ ಸಂಘಕ್ಕೆ ₹2.5 ಲಕ್ಷದವರೆಗೆ.
ಮರುಪಾವತಿ: 36 ಕಂತುಗಳಲ್ಲಿ 4% ಬಡ್ಡಿ ದರದೊಂದಿಗೆ.
ಇದನ್ನೂ ಓದಿ: Free Sheep And Poultry Training-ರುಡ್ ಸೆಟ್ ವತಿಯಿಂದ ಉಚಿತ ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!
Who Can Apply For This Scheme-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?
- ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿದಾರ ಅಭ್ಯರ್ಥಿಯು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಅರ್ಜಿದಾರ ಅಭ್ಯರ್ಥಿಯ ವಯಸ್ಸು ಕನಿಷ್ಟ 21 ರಿಂದ 60 ವರ್ಷ ಮೀರಿರಬಾರದು.
- ಅರ್ಜಿದಾರರು ಅಥವಾ ಕುಟುಂಬದ ಸದಸ್ಯರು ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರಬಾರದು.
- ಅರ್ಜಿದಾರರು ಅಥವಾ ಅವರ ಕುಟುಂಬದವರು ಕಳೆದ ಬಾರಿ ನಿಗಮದಿಂದ ಯಾವುದೇ ಸೌಲಭ್ಯವನ್ನು ಪಡೆದಿರಬಾರದು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ 1.5 ಲಕ್ಷದ ಒಳಗಿರಬೇಕು.
- ನಗರ ಪ್ರದೇಶದಲ್ಲಿರುವವರಿಗೆ ರೂ 2.00 ಲಕ್ಷದ ಒಳಗಿರಬೇಕು.
- ಸಂಘದ ಸದಸ್ಯರು ಪಡಿತರ ಚೀಟಿಯನ್ನು ಹೊಂದಿರಬೇಕು.
ಇದನ್ನೂ ಓದಿ: Borewell Subsidy-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!
Required Documents For This Scheme-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?
- ಅರ್ಜಿದಾರರ ಆಧಾರ್ ಕಾರ್ಡ್/Aadhar Card
- ಅರ್ಜಿದಾರರ ಆಹಾರ ಪಡಿತರ ಚೀಟಿ/Ration Card
- ಅರ್ಜಿದಾರರ ಚುನಾವಣಾ ಗುರುತಿನ ಚೀಟಿ/Voter ID
- ಸಂಘದ ಬ್ಯಾಂಕ್ ಪಾಸ್ ಪುಸ್ತಕ/Bank Pass Book
- ಚಾಲ್ತಿಯಲ್ಲಿರುವ ಸಂಘದ ನೊಂದಣಿ ಪತ್ರ/Registration Certificate
- ಜಾತಿ ಪ್ರಮಾಣ ಪತ್ರ /Caste Certificate
- ಆದಾಯ ಪ್ರಮಾಣಪತ್ರ/Income Certificate
- ಫೋಟೊ/Photo
ಇದನ್ನೂ ಓದಿ: LIC Recruitment 2025-LIC ಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಅವಕಾಶ! ಬರೋಬ್ಬರಿ 841 ಹುದ್ದೆಗಳಿಗೆ ಅರ್ಜಿ ಆಹ್ವಾನ!

How To Apply For This Scheme-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಇದನ್ನೂ ಓದಿ: Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Step-1: ಅರ್ಜಿದಾರ ಅರ್ಹ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ “Online Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಭೇಟಿ ಮಾಡಬೇಕು.
Step-2: ತದನಂತರ ಅದೇ ಪುಟದಲ್ಲಿ ಕಾಣುವ “ಇಲಾಖೆಗಳು ಮತ್ತು ಸೇವೆಗಳು” ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ ಈ ಪೇಜ್ ನಲ್ಲಿ “Search” ಬಟನ್ ಮೇಲೆ ಕ್ಲಿಕ್ ಮಾಡಿ “ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ” ಎಂದು ಟೈಪ್ ಮಾಡಿ “Search” ಬಟನ್ ಮೇಲೆ ಕ್ಲಿಕ್ ಮಾಡಿ ಸರ್ಚ್ ಮಾಡಿದಾಗ ಆನ್ಲೈನ್ ಅರ್ಜಿ ನಮೂನೆ ಓಪನ್ ಆಗುತ್ತದೆ.
Step-3: ನಂತರ ಅಲ್ಲಿ ಕೆಳಗೆ ಕಾಣುವ “ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ID ಮತ್ತು Password ಅನ್ನು ನಮೂದಿಸಿ ಲಾಗಿನ್ ಅಗಿ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: Mobile kitchen Subsidy-ಮೊಬೈಲ್ ಕಿಚನ್ ಪ್ರಾರಂಭಿಸಲು ₹4.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
More Information-ಈ ಯೋಜನೆಯ ಬಗ್ಗೆ ಹೆಚ್ಚಿನ ಉಪಯುಕ್ತ ಮಾಹಿತಿಯನ್ನು ಪಡೆಯಲು ಇಲಾಖೆಯ ವೆಬ್ಸೈಟ್ ಗೆ ಭೇಟಿ ಮಾಡಿ:
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read More
Helpline Number-ಸಹಾಯವಾಣಿ- 9482300400