ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ(Labour Marriage Subsidy) ವತಿಯಿಂದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಮದುವೆ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸರ್ಕಾರವು ನೋಂದಾಯಿತ ಕಾರ್ಮಿಕರಿಗೆ(Government Marriage Support) ಸರ್ಕಾರದಿಂದ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಈ ಯೋಜನೆಯು ಒಂದಾಗಿದ್ದು, ಕಾರ್ಮಿಕರ ಕುಟುಂಬದ ಸದಸ್ಯರ ವಿವಾಹಕ್ಕೆ ಆರ್ಥಿಕ ನೆರವನ್ನು ಪಡೆಯಲು ಸಹಾಯಕಾರಿಯಾಗಿದೆ. ಈ ಮಾಹಿತಿಯು ನಿಮಗೆ ಉಪಯುಕ್ತ ಎನಿಸಿದ್ದಲ್ಲಿ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.
ಪ್ರಸ್ತುತ ಇಂದಿನ ಈ ಲೇಖನದಲ್ಲಿ ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Who Can Apply For This Scheme-ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಕಾರ್ಮಿಕ ಇಲಾಖೆ ಮಂಡಳಿಯಲ್ಲಿ ನೋಂದಾಯಿತವಾಗಿರುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಅರ್ಹರಿರುತ್ತಾರೆ.
- ಈ ಇಲಾಖೆಯಡಿ ಸಹಾಯಧನವನ್ನು ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವ ಪೂರೈಸಿರಬೇಕು.
- ಸಹಾಯಧನವನ್ನು ಪಡೆಯಲು ವಿವಾಹ ನಿಯಮದ ಅಡಿಯಲ್ಲಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.
- ಈ ಯೋಜನೆಯಡಿ ಸಹಾಯಧನ ಪಡೆಯಲು ಮದುವೆ 6 ತಿಂಗಳ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
- ಒಂದು ಕುಟುಂಬವು ಎರಡು ಬಾರಿ ಮಾತ್ರ ಈ ಸೌಲಭ್ಯವನ್ನು ಪಡೆಯಲು ಅವಕಾಶವಿರುತ್ತದೆ.
- ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
- ನೋಂದಾಯಿತ ಕಾರ್ಮಿಕರು ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನವನ್ನು ಪಡೆಯಬಹುದು.
ಇದನ್ನೂ ಓದಿ: Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಸಾಲ! ಇಂದೇ ಅರ್ಜಿ ಸಲ್ಲಿಸಿ!
Required Documents-ಸಹಾಯಧನ ಪಡೆಯಲು ಅವಶ್ಯಕ ದಾಖಲಾತಿಗಳಾವುವು?
ವರ ಮತ್ತು ವಧುವಿನ ಆಧಾರ್ ಕಾರ್ಡ್ ಪ್ರತಿ.
ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ.
ರೇಷನ್ ಕಾರ್ಡ್ ಪ್ರತಿ.
ಉದ್ಯೋಗ ದೃಢೀಕರಣ ಪತ್ರ.
ಸ್ವಯಂ ದೃಢೀಕರಣ ಪತ್ರ.
ವಿವಾಹ ನೋಂದಣಿ ಪತ್ರ.
ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸಬೇಕು.
ಬ್ಯಾಂಕ್ ಪಾಸ್ ಬುಕ್ ಪ್ರತಿ.
ಇದನ್ನೂ ಓದಿ: Free Hostel Application-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!
ಇದನ್ನೂ ಓದಿ: Free Sheep And Poultry Training-ರುಡ್ ಸೆಟ್ ವತಿಯಿಂದ ಉಚಿತ ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!
How to submit an application-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಅರ್ಹರಿರುವ ಫಲಾನುಭವಿಗಳು ನಿಮ್ಮ ಜಿಲ್ಲೆಯ ಕಾರ್ಮಿಕ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
Step-1: ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ ಮೇಲೆ Apply now ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆಯ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
ಇದನ್ನೂ ಓದಿ: LIC Recruitment 2025-LIC ಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಅವಕಾಶ! ಬರೋಬ್ಬರಿ 841 ಹುದ್ದೆಗಳಿಗೆ ಅರ್ಜಿ ಆಹ್ವಾನ!
Step-2: ವೆಬ್ಸೈಟ್ ಅನ್ನು ಭೇಟಿ ಮಾಡಿ “Log in” ಆಗಬೇಕು ಬಳಿಕ ಅದೇ ಪುಟದಲ್ಲಿ ಕಾಣುವ “Registration” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರು Register ಮಾಡಿಕೊಳ್ಳಬೇಕು.
Step-3: ರಿಜಿಸ್ಟರ್ ಮಾಡಿದ ನಂತರ ಅಲ್ಲಿ ಕಾಣುವ “Schemes” ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ “ಮದುವೆ ಸಹಾಯಧನ” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-4: ತದನಂತರ ಅಲ್ಲಿ ಕೇಳಿರುವ ಎಲ್ಲಾ ಅವಶ್ಯಕ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
More Infromation: ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:
ಇದನ್ನೂ ಓದಿ: Borewell Subsidy-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!
ಅರ್ಜಿಯನ್ನು ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now
ಕಾರ್ಮಿಕ ಇಲಾಖೆ ಸಹಾಯವಾಣಿ: 155214
ಅಧಿಕೃತ ವೆಬ್ಸೈಟ್ ಲಿಂಕ್- Click here