ದಾವಣಗೆರೆ; ಡಿ. 8 : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕುಂಕುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ರೂ.9,000 ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತರಿರುವ 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಂಕುವ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ. 26 ಕೊನೆಯ ದಿನವಾಗಿರುತ್ತದೆ.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂ.sಸಂ.08192 263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹೊನ್ನಾಳಿ, ಮೊ. 9886366809 ಗೆ ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್ ತಿಳಿಸಿದ್ದಾರೆ.