2025-2026 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆಯ(Udyogini Yojana Loan)ಅಡಿಯಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭ ಮಾಡಲು ₹3.00 ಲಕ್ಷದವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಇಂದಿನ ಈ ಅಂಕಣದಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಈ ಯೋಜನೆಯ ಉದ್ದೇಶಗಳೇನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ? ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: IDFC First Bank Scholarship-IDFC First ಬ್ಯಾಂಕ್ ನಿಂದ ₹1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Purpose Of This Scheme-ಈ ಯೋಜನೆಯ ಉದ್ದೇಶಗಳಾವುವು?
ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರನ್ನು ಸ್ವಂತ ಉದ್ಯೋಗ ಮಾಡಲು ಪ್ರೋತ್ಸಾಹಿಸುವುದು.
ಮಹಿಳೆಯರು ಉದ್ಯಮ ಪ್ರಾರಂಭ ಮಾಡಲು ಬೇಕಾದ ಬಂಡವಾಳಕ್ಕಾಗಿ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಲು ಸಹಾಯಕಾರಿಯಾಗಿದೆ.
ಮಹಿಳೆಯರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ತರಬೇತಿ ನೀಡುವುದು.
Subsidy Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು?
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮದ ಅಡಿಯಲ್ಲಿ ಉದ್ಯೋಗಿನಿ ಯೋಜನೆಯ ಮಹಿಳಾ ಉದ್ಯಮಿಗಳಿಗೆ ಸ್ವಯಂ ಉದ್ಯೋಗವನ್ನು ಪ್ರಾರಂಭ ಮಾಡಲು ಸಬ್ಸಿಡಿ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಗರಿಷ್ಠ ₹3.00 ಲಕ್ಷದವರೆಗೆ ಸಾಲ ನೀಡುತ್ತದೆ ಹಾಗೂ 50 % ಸಬ್ಸಿಡಿಯನ್ನು ನೀಡಲಾಗುತ್ತದೆ.
- ಸಾಮಾನ್ಯ ವರ್ಗದ ಮಹಿಳೆಯರಿಗೆ ಗರಿಷ್ಠ ₹3.00 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಹಾಗೂ 30% ಸಬ್ಸಿಡಿ ನೀಡಲಾಗುತ್ತದೆ.
ಇದನ್ನೂ ಓದಿ: Solar Power Subsidy-ಸೋಲಾರ್ ಪವರ್ ಜನರೇಟರ್ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Who Can Apply For This Scheme-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
ಅರ್ಜಿದಾರ ಮಹಿಳೆಯು ಕನಿಷ್ಟ18 ರಿಂದ 55 ವರ್ಷದೊಳಗಿನವರಾಗಿರಬೇಕು.
ಅರ್ಜಿದಾರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಸಾಮಾನ್ಯವಾಗಿ ₹1.5 ಲಕ್ಷ ಮೀರಿರಬಾರದು.
ಬಡವರ್ಗ (BPL), ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ವಿಧವೆಯರು, ಅರ್ಜಿಯನ್ನು ಸಲ್ಲಿಸಬಹುದು(ಅಂಗವಿಕಲೆಯರಿಗೆ ವಿಶೇಷ ಆದ್ಯತೆ).
ಸಣ್ಣ ಉದ್ಯಮಿಗಳು,ಕೃಷಿ ಆಧಾರಿತ ಉದ್ಯಮಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
What Are The Documents Required-ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅಗತ್ಯ ದಾಖಲಾತಿಗಳಾವುವು?
ಆಧಾರ್ ಕಾರ್ಡ್/Aadhar Card.
ಮತದಾರ ಗುರುತಿನ ಚೀಟಿ/Identity Card.
ಆದಾಯ ಪ್ರಮಾಣ ಪತ್ರ/Income Certificate.
ಜಾತಿ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)/Caste Certificate.
ಬ್ಯಾಂಕ್ ಖಾತೆ ಪಾಸ್‌ಬುಕ್/Bank Passbook.
ಉದ್ಯಮಕ್ಕೆ ಸಂಬಂಧಿಸಿದ ಪ್ರಾಜೆಕ್ಟ್ ವರದಿ/Project Report.
ಇದನ್ನೂ ಓದಿ: Godown Subsidy Scheme-ಕೃಷಿಕರಿಗೆ ಸಿಹಿ ಸುದ್ದಿ!ಗೋಡೌನ್ ನಿರ್ಮಾಣಕ್ಕೆ ಶೇ 33% ಸಹಾಯಧನ ಪಡೆಯಲು ಅರ್ಜಿ!
ಇದನ್ನೂ ಓದಿ: Scholorship Application-DXC ಟೆಕ್ನಾಲಜಿಯ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
How To Apply-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.
Step-1: ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿದಾರರು ಮೊದಲಿಗೆ ಈ ಲಿಂಕ್ ಮೇಲೆ “Apply Now” ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
Step-2: ಅಧಿಕೃತ ವೆಬ್ಸೈಟ್ ಗೆ ಭೇಟಿ ನಂತರ log in ಆಪ್ಷನ್ ಮೇಲೆ ಕ್ಲಿಕ್ ಮಾಡಿದ ನಂತರ “E-mail ID” ಮತ್ತು “Password” ನ್ನು ಭರ್ತಿ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ: Karmika Card Benefits-ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಪ್ರಯೋಜನ ಪಡೆಯಲು ಇಲ್ಲಿದೆ ಸಂಪೂರ್ಣ ಮಾಹಿತಿ!
Step-3: ತದನಂತರ ಅಲ್ಲಿ ಕೇಳಿರುವ ಎಲ್ಲಾ ಅವಶ್ಯಕ ದಾಖಲಾತಿಗಳ ವಿವರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.