Thursday, December 12, 2024
HomeJobಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ ಡಿ.12:ಧಾರವಾಡ ಕೃಷಿ ಮಹಾವಿದ್ಯಾಲಯ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿವಾಗಿ 179 ದಿನಗಳ ಅವಧಿಗೆ ಮೀರದಂತೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಡಿಸೆಂಬರ್ 15 ರಂದು ಬೆಳಿಗ್ಗೆ 11 ಘಂಟೆಗೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ಜೆರಾಕ್ಸ್ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕು.

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಹಾಜರಾಗಬೇಕು. ಸದರಿ ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಕಾರಣ ತಿಳಿಸದೇ ಕೆಲಸದಿಂದ ತೆಗೆಯಬಹುದು. ಇದು ಕೃಷಿ ವಿಶ್ವವಿದ್ಯಾಲಯದ ಯಾವುದೇ ಖಾಯಂ ನೇಮಕಾತಿ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ಕೃಷಿ ಮಹಾವಿದ್ಯಾಲಯಲದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments