ಕರ್ನಾಟಕ ಮಳೆ ಪ್ರಮಾಣ ನಕ್ಷೆಯ ಮಾಹಿತಿಯ(Weather Forecast) ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಹೆಬ್ಬಣಿ ವ್ಯಾಪ್ತಿಯಲ್ಲಿ ಅತ್ಯಧಿಕ 22 ಮಿಮೀ ಮಳೆ ದಾಖಲಾಗಿದ್ದು, ಉಳಿದಂತೆ ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬೆಂಗಳೂರು ಮತ್ತು ತುಮಕೂರು, ಮಂಡ್ಯ, ಕೊಡಗು ಜಿಲ್ಲೆಯ ಅಲ್ಲಲ್ಲಿ ಮಳೆ ದಾಖಲಾಗಿರುತ್ತದೆ.
ರಾಜ್ಯ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ನಾಳೆ ರಾಜ್ಯ್ದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿಂದ(male munsuchane) ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಮೈಸೂರು, ಹಾಗೂ ಬೆಂಗಳೂರು, ಕೋಲಾರ, ಚಿಕ್ಕಮಂಗಳೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆ ಮುನ್ಸೂಚನೆ ಸೂಚಿಸಲಾಗಿದೆ.
ಇದನ್ನೂ ಓದಿ: PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!
Next 3 Days weather forecast-ಮುಂದಿನ 3 ದಿನದ ಮಳೆ ಮುನ್ಸೂಚನೆ:
ದಿನಾಂಕ: 13 ರಿಂದ 16 ರ ವರೆಗೆ ರಾಜ್ಯದಲ್ಲಿ ಮೊದಲ ದಿನ ಅಂದರೆ ದಿನಾಂಕ 13-12-2024 ರಂದು ರಾಜ್ಯದ ಪ್ರಮುಖ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಉಳಿದಂತೆ 14,15,16 ರಂದು ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇರುವುದಿಲ್ಲ.
ಇದನ್ನೂ ಓದಿ: Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!
Tomorrow weather in bangalore- ನಾಳೆ(14 ಡಿಸೆಂಬರ್ 2024)ರ ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ ಹೀಗಿದೆ:-
ಕರಾವಳಿ ಜಿಲ್ಲೆ ಮಳೆ ಮುನ್ಸೂಚನೆ:
ಕರ್ನಾಟಕದ ಕರಾವಳಿ ಜಿಲ್ಲೆಯಾದ ಕಾಸರಗೋಡು ವ್ಯಾಪ್ತಿಯಲ್ಲಿ ದಿನವಿಡೀ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇರುತ್ತದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉಳಿದ ಭಾಗಗಳಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ದಿನದ ಬಹುಪಾಲು ಮೋಡದ ವಾತಾವರಣದ ಮುನ್ಸೂಚನೆ ಇರುತ್ತದೆ.
ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು. ಈಗಿನಂತೆ ಡಿಸೆಂಬರ್ 14ರಿಂದ ಕರಾವಳಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, ಡಿಸೆಂಬರ್ 17ರಿಂದ ಮತ್ತೆ ಮೋಡದ ವಾತಾವರಣದ ಲಕ್ಷಣಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!
ಮಲೆನಾಡು ಭಾಗದ ಹವಾಮಾನ ಮುನ್ಸೂಚನೆ:
ಕೊಡಗು ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ಚಿಕ್ಕಮಗಳೂರು,ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇರುತ್ತದೆ. ಮಳೆಯ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಪ್ರಸ್ತುತ ಹವಾಮಾಣ ಮುನ್ಸೂಚನೆಯ ಪ್ರಕಾರ ಡಿಸೆಂಬರ್ 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, ಡಿಸೆಂಬರ್ 17ರಿಂದ ಮೋಡ ಹಾಗೂ ಸಣ್ಣ ಪ್ರಮಾಣದ ಮಳೆಯ ಲಕ್ಷಣಗಳಿವೆ.
Karnataka weather forecast-ಕರ್ನಾಟಕ ಒಳನಾಡು ಜಿಲ್ಲೆಗಳ ಮಾಹಿತಿ:
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ.
ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!
ವಾಯುಭಾರ ಕುಸಿತದ ಮಾಹಿತಿ ಹೀಗಿದೆ:
ಶ್ರೀಲಂಕಾ ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಮತ್ತಷ್ಟು ದಕ್ಷಿಣಕ್ಕೆ ಚಲಿಸಿದ್ದು, ನಾಳೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಂದರ್ಭದಲ್ಲಿ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಡಿಸೆಂಬರ್ 17ರ ಸುಮಾರಿಗೆ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಒತ್ತಡದ ಪ್ರಮಾಣವು 1005hPa ಸನೀಹ ಇರುವುದರಿಂದ ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಮಾಹಿತಿ ಕೃಪೆ: ಸಾಯಿ ಶೇಖರ್ ಬಿಽ KSNDC, Bengalore