Friday, July 4, 2025
No menu items!
HomeNewsAgri Diploma Admission-ಕೃಷಿ ಡಿಪ್ಲೊಮಾ ವಿಶ್ವವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Agri Diploma Admission-ಕೃಷಿ ಡಿಪ್ಲೊಮಾ ವಿಶ್ವವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

ರಾಜ್ಯದಲ್ಲಿರುವ ವಿವಿಧ ಕೃಷಿ ವಿಶ್ವವಿದ್ಯಾಲಯದಲ್ಲಿ(Agriculture University) 2025-26ನೇ ಸಾಲಿಗೆ 2 ವರ್ಷದ ಕೃಷಿ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಲೇಖನದಲ್ಲಿ ಯಾವೆಲ್ಲ ವಿಶ್ವವಿದ್ಯಾಲಯಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ? ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಡಿಪ್ಲೊಮಾ(Agri Diploma) ಪ್ರವೇಶಕ್ಕೆ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು ಯಾವುದು ಹಾಗೂ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Home Loan Schems-PMAY 2.0 ಯೋಜನೆಯಡಿ ₹ 2.50 ಲಕ್ಷ ಸಹಾಯಧನಕ್ಕೆ ಅರ್ಜಿ! 

ಕೃಷಿ ಡಿಪ್ಲೊಮಾ(Agri Diploma Admission-2025) ಪ್ರವೇಶಕ್ಕೆ ಪ್ರತಿ ವರ್ಷದಂತೆ ಈ ವರ್ಷವು ಸಹ ಕೃಷಿ ವಿಶ್ವವಿದ್ಯಾಲಯದಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಕೃಷಿ ಕ್ಷೇತ್ರದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವವರು ಹಾಗೂ ಕೃಷಿಯಲ್ಲಿ ಉತ್ತಮ ತಾಂತ್ರಿಕ ಶಿಕ್ಷಣವನ್ನು ಪಡೆದು ಕೃಷಿ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು.

ಯಾವೆಲ್ಲ ವಿಶ್ವವಿದ್ಯಾಲಯಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಕೃಷಿ ವಿಶ್ವವಿದ್ಯಾಲಯ, ಧಾರವಾಡ
ಕೃಷಿ ವಿಶ್ವವಿದ್ಯಾಲಯ, ರಾಯಚೂರು
ಕೃಷಿ ವಿಶ್ವವಿದ್ಯಾಲಯ, ಶಿವಮೊಗ್ಗ

ಇದನ್ನೂ ಓದಿ: E Khata-ಸರ್ಕಾರದಿಂದ ಮನೆ ಬಾಗಿಲಿಗೆ ಇ-ಖಾತಾ ವಿತರಿಸುವ ಯೋಜನೆ ಜಾರಿ!

Diploma Agriculture Admission Eligibility-ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು:

ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಲು ವಿಶ್ವವಿದ್ಯಾಲಯದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿವರ ಹೀಗಿದೆ.

1) ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು:

ಕೃಷಿ ವಿಶ್ವವಿದ್ಯಾಲಯ, ಧಾರವಾಡ- 21 ಜುಲೈ 2025
ಕೃಷಿ ವಿಶ್ವವಿದ್ಯಾಲಯ, ರಾಯಚೂರು- 28 ಜುಲೈ 2025

Diploma Agriculture Application-ಈ ವರ್ಗದ ಮಕ್ಕಳಿಗೆ ಶೇ. 50ರಷ್ಟು ಮೀಸಲಾತಿ:

ಕೃಷಿಕರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಕೃಷಿ ಡಿಪ್ಲೊಮಾ ಪ್ರವೇಶದಲ್ಲಿ ಶೇ. 50% ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Application Download link-ಅರ್ಜಿ ನಮೂನೆ:

  • ಕೃಷಿ ವಿಶ್ವವಿದ್ಯಾಲಯ, ಧಾರವಾಡ- Download Now
  • ಕೃಷಿ ವಿಶ್ವವಿದ್ಯಾಲಯ, ರಾಯಚೂರು- Download Now

ಇದನ್ನೂ ಓದಿ: Free Fodder cutter-ಪಶುಪಾಲನಾ ಇಲಾಖೆಯಿಂದ ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ!

Application Fee Pay Method-ಪ್ರವೇಶದ ಶುಲ್ಕ ಪಾವತಿಗೆ ಡಿಡಿ ತೆಗೆಯುವ ವಿಳಾಸದ ಮಾಹಿತಿ ಹೀಗಿದೆ:

ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿ ಮಾಡಬೇಕಾಗುತ್ತದೆ ಇದಕ್ಕಾಗಿ ಡಿ.ಡಿ ತೆಗೆಯುವ ವಿಳಾಸದ ವಿವರ ಹೀಗಿದೆ:

ಕೃಷಿ ವಿಶ್ವವಿದ್ಯಾಲಯ, ಧಾರವಾಡ- “The Comptroller, UAS Dharwad”
ಕೃಷಿ ವಿಶ್ವವಿದ್ಯಾಲಯ, ರಾಯಚೂರು- “The Comptroller, UAS Raichur” ಈ ಹೆಸರಿನಲ್ಲಿ ಡಿಡಿಗಳನ್ನು ಪಡೆದು ಡಿಡಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರೊಳಗೆ ಅಂಚೆ ವಿಳಾಸಕ್ಕೆ ಕಳುಹಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: NLM Yojana-ಕೋಳಿ ಕುರಿ ಮೇಕೆ ಸಾಕಾಣಿಕೆಗೆ ಜಾನುವಾರು ಮಿಷನ್ ಯೋಜನೆಯಡಿ ₹25.00 ಲಕ್ಷ ಸಬ್ಸಿಡಿ!

How to Apply For Agri Diploma-ಅರ್ಜಿ ಸಲ್ಲಿಸುವುದು ಹೇಗೆ?

  • ಕೃಷಿ ಡಿಪ್ಲೊಮಾ ಪ್ರವೇಶ ಪಡೆಯಲು ಅರ್ಜಿದಾರ ಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಡಿಡಿಯನ್ನು ಲಗತ್ತಿಸಿ “ಕುಲಸಚಿವರು, ಕೃಷಿ ವಿಶ್ವವಿದ್ಯಾಲಯ, ಕೃಷಿನಗರ, ಧಾರವಾಡ-580005 ಇವರಿಗೆ ದಿನಾಂಕ: 21-07-2025 (ಸಂಜೆ 04.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಕೃಷಿ ವಿಶ್ವವಿದ್ಯಾಲಯ, ರಾಯಚೂರು ಅರ್ಜಿ ಸಲ್ಲಿಸಲು ವಿಳಾಸದ ವಿವರ ಹೀಗಿದೆ: “ಕುಲಸಚಿವರು, ಕೃಷಿ ಇಜ್ನಾನಗಳ ವಿಶ್ವವಿದ್ಯಾಲಯ ಲಿಂಗಸೂರು ರಸ್ತೆ ರಾಯಚೂರು-584104 ಇಲ್ಲಿಗೆ ದಿನಾಂಕ: 28-07-2025 (ಸಂಜೆ 04.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಕಳುಹಿಸಬೇಕು.

ಇದನ್ನೂ ಓದಿ: Uchita Holige Yantra-ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇನ್ನು 2 ದಿನ ಬಾಕಿ!

Application Fee-ಪ್ರವೇಶ ಪಡೆಯಲು ಅರ್ಜಿ ಶುಲ್ಕದ ವಿವರ ಹೀಗಿದೆ:

ಸಾಮಾನ್ಯ ವರ್ಗದ ವಿದ್ಯಾರ್ಥಿಗೆ- ರೂ. 500/- ಪ.ಜಾ./ಪ.ಪಂ./ಪ್ರವರ್ಗದ ವಿದ್ಯಾರ್ಥಿಗೆ- ರೂ. 250/-

Required Documents-ಅರ್ಜಿ ಸಲ್ಲಿಸಲು ದಾಖಲೆಗಳು:

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಅಭ್ಯರ್ಥಿಯ ಪೋಟೋ
  • ಅಭ್ಯರ್ಥಿಯ SSLC ಅಂಕಪಟ್ಟಿ ಪ್ರತಿ
  • ಕನ್ನಡ ಮತ್ತು ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹೈದ್ರಾಬಾದ ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರ
  • ಅರ್ಜಿದಾರ ವಿದ್ಯಾರ್ಥಿಯು ರೈತರ ಕುಟುಂಬಕ್ಕೆ ಸೇರಿದ್ದರೆ ವ್ಯವಸಾಯ ಪ್ರಮಾಣ ಪತ್ರ

Diploma Agriculture Selection Method-ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ವಿಧಾನ:

ಸಲ್ಲಿಕೆಯಾದ ಒಟ್ಟು ಅರ್ಜಿಯನ್ನು ಪರಿಶೀಲಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಬಳಿಕ ಮೆರಿಟ್ ಆಧಾರದ ಮೇಲೆ ಕೌನ್ಸಿಲಿಂಗ್ ಮೂಲಕ ಅರ್ಹ ವಿದ್ಯಾರ್ಥಿಗೆ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ.

For More Information-ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಲಿಂಕ್:

UAS Dharwad-ಕೃಷಿ ವಿಶ್ವವಿದ್ಯಾಲಯ, ಧಾರವಾಡ- Click Here
UAS Raichur-ಕೃಷಿ ವಿಶ್ವವಿದ್ಯಾಲಯ, ರಾಯಚೂರು- Click Here

RELATED ARTICLES
- Advertisment -

Most Popular

Recent Comments