ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಲ್ಲಿ ನೋಂದಣಿಯಾಗಿ ತರಬೇತಿ ಕೇಂದ್ರ ಮತ್ತು ಜಾಬ್ ರೋಲ್‍ಗಳಿಗೆ ಮಾನ್ಯತೆ ಪಡೆದ ಸ್ವಯಂ ಸೇವಾ ತರಬೇತಿ ಸಂಸ್ಥೆಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತ ಸಂಸ್ಥೆಗಳು ನಗರದ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಂ.ಸಿ.ಸಿ. ಬಿ. ಬ್ಲಾಕ್, 14ನೇ ಮುಖ್ಯರಸ್ತೆ, ಕುವೆಂಪುನಗರ ಈ ವಿಳಾಸ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ನವಂಬರ್ 29 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಉಪನಿರ್ದೇಶಕರ ಕಚೇರಿ, (ಮೊ.ಸಂ. 9449447711) ಇವರನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.