ಧಾರವಾಡ ಡಿ.11: ಇಡಿಸಿಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬೂ. ಅರಳಿಕಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 02 ಗ್ರಾಮ್ ಒನ್ ಕೇಂದ್ರಗಳಿ ಗೆ ಪ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿ.ಯು.ಸಿ., ಐ.ಟಿ.ಐ, ಡಿಪೆÇ್ಲಮಾ, ಪದವಿ, ಸ್ನಾತಕೋತ್ತರ ಪದವಿ ಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳ ಆಸಕ್ತರು, ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಠ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಟ್ಯಾನ್ಸರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆಯೊಂದಿಗೆ ಇಲಾಖೆ ಕಾಲಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಅರ್ಜಿಯನ್ನು ಡಿಸೆಂಬರ್ 15 ರೊಳಗೆ ಸಲ್ಲಿಸಬಹುದಾಗಿದೆ.
ಮಾನದಂಡಳಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.