Friday, October 10, 2025
No menu items!
HomeNewsAzim Premji Foundation-ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ₹30,000 ಸ್ಕಾಲರ್ಶಿಪ್ ಪಡೆಯಲು ಅರ್ಜಿ!

Azim Premji Foundation-ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ₹30,000 ಸ್ಕಾಲರ್ಶಿಪ್ ಪಡೆಯಲು ಅರ್ಜಿ!

ಭಾರತದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸತತವಾಗಿ ಕೆಲಸ ಮಾಡುತ್ತಿರುವ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್(Azim Premji Foundation) ಒಂದಾಗಿದ್ದು, ಇದರ ಅಡಿಯಲ್ಲಿ ಸಮಾಜದ ಹಿಂದುಳಿದ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಇಂದಿನ ದಿನಗಳಲ್ಲಿ ಶಿಕ್ಷನ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಪ್ರಮುಖ ಅಂಗವಾಗಿದ್ದು,(Azim Premji Foundation scholarship)ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಅಡಚಣೆಯಾಗದೆ ವಿದ್ಯಾಭ್ಯಾಸವನ್ನು ಮುಂದುವರಿಸಲು ಅಜೀಂ ಪ್ರೇಮ್ಜಿ ಫೌಂಡೇಶನ್ ಯೋಜನೆಯನ್ನು ಜಾರಿಗೆ ತಂದಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಕೋರಿದೆ.

ಇದನ್ನೂ ಓದಿ: Udyogini Scheme-ಸ್ವಂತ ವ್ಯವಹಾರ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಲು ಅರ್ಜಿ!

ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು(Azim Premji Scholarship) ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಸಲ್ಲಿಸಲು ಸಲ್ಲಿಸಬೇಕಾದ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

ಅಜೀಂ ಪ್ರೇಮ್ಜಿ ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಯ್ಕೆಯಾದ ಅರ್ಹ ಎಲ್ಲಾ ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ₹30,000 ರೂ ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Last Date For Application-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025

ಇದನ್ನೂ ಓದಿ: IDFC First Bank Scholarship-IDFC First ಬ್ಯಾಂಕ್ ನಿಂದ ₹1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Who Can Apply For Azim Premji Scholarship-ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು?

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಮತ್ತು ಡಿಪ್ಲೋಮಾ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ವಿದ್ಯಾರ್ಥಿನಿಯ ಆಧಾರ್ ಕಾರ್ಡ್/Aadhar Card.

ವಿದ್ಯಾರ್ಥಿಯ ಶಾಲಾ ವ್ಯಾಸಂಗ ಪ್ರಮಾಣ ಪತ್ರ/Study Certificate.

ಪೋಷಕರ ಆದಾಯ ಪ್ರಮಾಣ ಪತ್ರ/Income Certificate.

ಬ್ಯಾಂಕ್ ಪಾಸ್ ಬುಕ್/Bank Pass Book.

ವಿದ್ಯಾರ್ಥಿಯ ಪೋಟೋ/Photo.

ಇದನ್ನೂ ಓದಿ: Solar Power Subsidy-ಸೋಲಾರ್ ಪವರ್ ಜನರೇಟರ್ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಇದನ್ನೂ ಓದಿ: Godown Subsidy Scheme-ಕೃಷಿಕರಿಗೆ ಸಿಹಿ ಸುದ್ದಿ!ಗೋಡೌನ್ ನಿರ್ಮಾಣಕ್ಕೆ ಶೇ 33% ಸಹಾಯಧನ ಪಡೆಯಲು ಅರ್ಜಿ!

How To Apply-ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅಜೀಂ ಪ್ರೇಮ್ಜಿ ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಯ್ಕೆಯಾದ ಅರ್ಹ ಎಲ್ಲಾ ವಿದ್ಯಾರ್ಥಿನಿಯರಿಗೆ ಈ ಕೆಳಗೆ ತಿಳಿಸಿರುವ ಹಂತಗಳನ್ನು ಪಾಲನೆ ಮಾಡಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಮೊದಲು ಈ ಲಿಂಕ್ “Scholarship Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿದ ನಂತರ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯ ಖಾತೆಯನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕು.

Step-3: ತದನಂತರ ಅಲ್ಲಿ ಕೇಳಿರುವ ಅವಶ್ಯವಿರುವ ಎಲ್ಲಾ ದಾಖಲಾತಿಗಳು ಮತ್ತು ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Scholorship Application-DXC ಟೆಕ್ನಾಲಜಿಯ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

RELATED ARTICLES
- Advertisment -

Most Popular

Recent Comments