Wednesday, December 11, 2024
HomeNewsBengaluru Weather-ವಾಯುಭಾರ ಕುಸಿತ ಮುಂದಿನ 10 ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Bengaluru Weather-ವಾಯುಭಾರ ಕುಸಿತ ಮುಂದಿನ 10 ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ರಾಜ್ಯದಲ್ಲಿ ಕರ್ನಾಟಕ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಬೆಂಗಳೂರು ಇವರ ಮಾಹಿತಿಯ ಪ್ರಕಾರ ರಾಜ್ಯದಲ್ಲಿ(Bengaluru Weather) ಕಳೆದ 24 ಗಂಟೆಗಳಲ್ಲಿ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲ್ಲೂಕು ಬೆಳ್ಳಿನೂಡು ವ್ಯಾಪ್ತಿಯಲ್ಲಿ 97.5 ಅತ್ಯಧಿಕ ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲಿ ಉತ್ತಮ ಮಳೆ ದಾಖಲಾಗಿರುತ್ತದೆ.

ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ(Karnataka Weather Report) ಉಂಟಾಗುವ ಸಾಧ್ಯತೆಯ ಪರಿಣಾಮದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

Karnataka Weather Report- ರಾಜ್ಯದಲ್ಲಿನ ಪ್ರಸ್ತುತ ಹವಾಮಾನ ಪರಿಸ್ಥಿತಿ ಮತ್ತು ಪರಿಣಾಮಗಳು:

ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಗಳು ಕಂಡುಬಂದಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ತೀವ್ರಗೊಂಡು ಪಶ್ಚಿಮ-ವಾಯವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ. 2024ರ ಡಿಸೆಂಬರ್ ಶ್ರೀಲಂಕಾ – ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ.

ಡಿಸೆಂಬರ್ 09 ರಿಂದ ಡಿಸೆಂಬರ್ 17 ರವರೆಗೆ ರಾಜ್ಯದ ಮಳೆ ಮುನ್ಸೂಚನೆ (ಮೂಲ: SHAR-ISRO): ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 12 & 13 ರಂದು ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ 11ರಂದು ಹಾಗೂ ಹಾಗೂ ಅಲ್ಲಲ್ಲಿ ಬಾರಿ ಮಳೆ. ಇನ್ನುಳಿದ ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಬೆಂಗಳೂರು ಇವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

Today weather in bengalore-ವಾಯುಭಾರ ಕುಸಿತ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ:

ಬಹುತೇಕ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಯು ಕಟಾವಿಗೆ ಬಂದು ಅರ್ಧ ಹಂತದ ಕಟಾವು ಕಾರ್ಯವು ಪೂರ್ಣಗೊಂಡಿದ್ದು ಇನ್ನು ಉಳಿದ ಕಟಾವಿಗೆ ರೈತರಿಗೆ ವಾಯುಭಾರ ಕುಸಿತದಂತಹ ವಾತಾವರಣ ಬದಲಾವಣೆಗಳು ಹೆಚ್ಚು ಹಾನಿ ಉಂಟು ಮಾಡುತ್ತಿವೆ.

ವಾಯುಭಾರ ಕುಸಿತ ಪರಿಣಾಮದಿಂದ ದಕ್ಷಿಣ ಒಳನಾಡು ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಹಾಗೂ ಕರಾವಳಿ ಜಿಲ್ಲೆ ಕಾರವಾರ, ಉಡುಪಿ, ಮಂಗಳೂರು, ಚಿಕ್ಕಮಂಗಳೂರು, ದಾವಣೆಗೆರೆ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಜಿಲ್ಲೆಯ ಒಂದಿಷ್ಟು ಕಡೆ, ಬೆಳಗಾವಿ, ಮೈಸೂರು, ಬೆಂಗಳೂರು, ಕೊಡಗು, ಹಾಸನ, ಮಂಡ್ಯ, ಕೋಲಾರ,ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!

Karnataka Weather forecast-ನಾಳೆ(10.12.2024) ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆ ಮಾಹಿತಿ ಹೀಗಿದೆ:

ಕರಾವಳಿ ಜಿಲ್ಲೆಗಳಲ್ಲಿ:

ಕರಾವಳಿ ಹಾಗೂ ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಡಿಸೆಂಬರ್ 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿಸೆಂಬರ್ 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

ಮಲೆನಾಡು ಜಿಲ್ಲೆಗಳಲ್ಲಿ:

ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು,
ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು ಜಿಲ್ಲೆಗಳಲ್ಲಿ:

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಮಾಹಿತಿ ಕೃಪೆ: ಸಾಯಿ ಶೇಖರ್ ಬಿ ಮತ್ತು KSNDC, Bengalure

RELATED ARTICLES
- Advertisment -
Google search engine

Most Popular

Recent Comments