2025-2026 ನೇ ಸಾಲಿನ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳ(Cow purchase subsidy) ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ 50 ರಷ್ಟು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಇಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹಸು ಎಮ್ಮೆ ಸಾಕುವುದು(Government cattle scheme) ಪ್ರಮುಖ ಆದಾಯದ ಪ್ರಮುಖ ಭಾಗವಾಗಿದೆ. ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರ ಆರ್ಥಿಕತೆಗೆ ಸಹಾಯವಾಗಿದೆ. ಅರ್ಹ ಫಲಾನುಭವಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಈ ಯೋಜನೆಯ ಉಪಯೋಗ ಪಡೆಯಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: Police Constable Training-ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
ಇಂದಿನ ಈ ಲೇಖನದಲ್ಲಿ ಈ ಯೋಜನೆಯ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಈ ಯೋಜನೆಯನ್ನು ಜಾರಿಗೆ ತರಲು ಪ್ರಮುಖ ಉದ್ದೇಶವೇನು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳಾವುವು? ಅರ್ಜಿಯನ್ನು ಸಲ್ಲಿಸಲು ಅನುಸರಿಸ ಬೇಕಾದ ಹಂತಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Subsidy Amount-ಈ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ?
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ 50 ರಷ್ಟು ಸಹಾಯಧನ ಅಥವಾ 1.25 ಲಕ್ಷ ಸಬ್ಸಿಡಿಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ಇದನ್ನೂ ಓದಿ: Land Ownership Scheme-ಭೂಮಿ ಖರೀದಿಸಲು 25 ಲಕ್ಷ ರೂ ಸಹಾಯಧನ! ಇಲ್ಲಿದೆ ಸಂಪೂರ್ಣ ಮಾಹಿತಿ!
Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2025
Who Can Apply For This Scheme-ಯಾರು ಅರ್ಜಿ ಸಲ್ಲಿಸಲು ಅರ್ಹರು?
ಅರ್ಜಿದಾರ ಅಭ್ಯರ್ಥಿಯು ಸ್ವಂತ ಜಮೀನನ್ನು ಹೊಂದಿರಬೇಕು.
ಸಮಾಜ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಿದ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಅಭ್ಯರ್ಥಿಯು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸದಸ್ಯತ್ವ ಹೊಂದಿರಬೇಕು.
ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷ ಮೀರಿರಬಾರದು.
ಇಂದಿನ ವರ್ಷಗಳಲ್ಲಿ ಸರ್ಕಾರದ ಇತರೆ ಹಸು-ಎಮ್ಮೆ ಖರೀದಿ ಸಹಾಯಧನ ಯೋಜನೆಯಿಂದ ಪ್ರಯೋಜನ ಪಡೆದಿರಬಾರದು.
ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಯೋಜನೆಯ 20 ನೇ ಕಂತಿನ ಹಣ ನಿಮ್ಮ ಖಾತೆಗೆ ಬಂದಿದೆಯಾ? ಚೆಕ್ ಮಾಡಿ!
ಯಾವೆಲ್ಲ ನಿಗಮದ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ?
ಸಮಾಜ ಕಲ್ಯಾಣ ಇಲಾಖೆಯಡಿ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಸಮುದಾಯದವರು ಈ ಕೆಳಗೆ ತಿಳಿಸಿರುವ ನಿಗಮದ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
- ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ
ಇದನ್ನೂ ಓದಿ: PMSBY Scheme-ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ವರ್ಷಕ್ಕೆ ₹12 ರೂ ಗೆ ₹2 ಲಕ್ಷ ವಿಮೆ!
What are the Documents-ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲಾತಿಗಳಾವುವು?
ಅರ್ಜಿದಾರರ ಆಧಾರ್ ಕಾರ್ಡ್/Aadhar Card
ರೇಷನ್ ಕಾರ್ಡ್/Ration Card
ಜಮೀನು ದಾಖಲೆ/RTC
ಬ್ಯಾಂಕ್ ಪಾಸ್‌ಬುಕ್/Bank Passbook
ಫೋಟೋ/Photocopy
ಹಾಲು ಸಹಕಾರಿ ಸಂಘದ ಸದಸ್ಯತ್ವ ಪ್ರಮಾಣ ಪತ್ರ/Milk Cooperative Society Membership Certificate
ನಿವಾಸಿ ದೃಢೀಕರಣ ಪತ್ರ
ಇದನ್ನೂ ಓದಿ: Labour Scholorship-ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?
Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾಸಿಂಧು ವೆಬ್ಸೈಟ್ ಗೆ ಭೇಟಿ ಮಾಡಬೇಕು.
ಇದನ್ನೂ ಓದಿ: Constable Recruitment 2025-SSLC & ITI ಪಾಸಾದವರಿಗೆ 3,588 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!
ಇದನ್ನೂ ಓದಿ: PM Surya Ghar Scheme-ಪಿಎಂ ಸೂರ್ಯ ಘರ್ ಯೋಜನೆಯಡಿ ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ ಅರ್ಜಿ!
Step-2: ಇದಾದ ಬಳಿಕ ಈ ಪೇಜ್ ನಲ್ಲಿ ಇಲಾಖೆಯನ್ನು ಸರ್ಚ್ ಮಾಡಿ ಯೋಜನೆಯನ್ನು ಆಯ್ಕೆ ಮಾಡಿಕೊಂಡು “Apply Online” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬಿಅಲ್ ನಂಬರ್ ಮತ್ತು OTP ಅನ್ನು ನಮೂದಿಸಿ ಲಾಗಿನ್ ಅಗಬೇಕು.
Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.