Friday, February 14, 2025
No menu items!
HomeAgricultureಕೃಷಿ ಇಲಾಖೆ :ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

ಕೃಷಿ ಇಲಾಖೆ :ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

ಧಾರವಾಡ : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ರೈತರಿಂದ ಮತ್ತು ರೈತ ಮಹಿಳೆಯರಿಂದ ತಮ್ಮ ಜಮೀನುಗಳಲ್ಲಿ ತುಂತುರು ನೀರಾವರಿ ಘಟಕಗಳನ್ನು (ಸ್ಪೀಂಕ್ಲರ್) ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಆಧಾರ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ (ಜಾತಿ ಪ್ರಮಾಣ ಪತ್ರ), ರೂ.20/- ಛಾಪಾ ಕಾಗದದ (ನೋಟರಿಯೊಂದಿಗೆ) ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್. ದಾಖಲಾತಿಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕಳೆದ 7 ವರ್ಷದ ಅವಧಿಯಲ್ಲಿ ತುಂತುರು ನೀರಾವರಿ ಘಟಕ ಪಡೆಯದ ರೈತರು ಮಾತ್ರ ಅರ್ಜಿ ಸಲ್ಲಿಸಬೇಕು.

ತುಂತುರು ನೀರಾವರಿ ಘಟಕಗಳ ಸವಲತ್ತು ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಫ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

RELATED ARTICLES
- Advertisment -

Most Popular

Recent Comments