ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಕ್ಷೇತ್ರವು ಭಾರತದ ಸಾಂಪ್ರದಾಯಿಕ ಕಲೆ ಮತ್ತು ಆಧುನಿಕ ತಂತ್ರಜ್ಞಾನದ ಸಂಯೋಜಿತವಾಗಿದ್ದು, ಇದು ವಿದ್ಯಾರ್ಥಿಗಳಿಗೆ ವೃತ್ತಿಪರ ಭವಿಷ್ಯವನ್ನು ಕಟ್ಟಿಕೊಡುವ ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಈ ಕೋರ್ಸ್‌ನಲ್ಲಿ ತಿಂಗಳಿಗೆ ₹2,500 ಶಿಷ್ಯವೇತನದೊಂದಿಗೆ ಉತ್ತಮ ಶಿಕ್ಷಣ ಮತ್ತು ವಸತಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಕೈಮಗ್ಗ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಕ-ಯುವತಿಯರಿಗೆ ಈ ಕೋರ್ಸ್ ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯಕವಾಗಿದೆ.
ಇದನ್ನೂ ಓದಿ: Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!
2025-26ನೇ ಶೈಕ್ಷಣಿಕ ವರ್ಷಕ್ಕೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ (DHTT) ಕೋರ್ಸ್‌ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಪ್ರಮುಖ ವಿವರಗಳು:
ಶಿಷ್ಯವೇತನ: ಕೋರ್ಸ್ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ₹2,500/- ಶಿಷ್ಯವೇತನವನ್ನು ನೀಡಲಾಗುತ್ತದೆ.
ವಸತಿಗೃಹ ಸೌಲಭ್ಯ: ಪುರುಷ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯ ಮೇಲೆ ವಸತಿಗೃಹದ ಸೌಕರ್ಯವನ್ನು ನೀಡಲಾಗುತ್ತದೆ.
ಇದನ್ನೂ ಓದಿ: Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!
ವಿದ್ಯಾಭ್ಯಾಸ:
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ (01-07-2025 ರಂತೆ):
ಸಾಮಾನ್ಯ ವರ್ಗ: 15 ರಿಂದ 23 ವರ್ಷದ ಒಳಗಿರಬೇಕು.
ಪ.ಜಾತಿ/ಪ.ಪಂಗಡ: 15 ರಿಂದ 25 ವರ್ಷಗಳು.
ಆಯ್ಕೆ ಪ್ರಕ್ರಿಯೆ: ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಆಯ್ಕೆ.

ಕೋರ್ಸ್ ಲಭ್ಯವಿರುವ ಸಂಸ್ಥೆಗಳು:
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ, ಕರ್ನಾಟಕ: 22 ಸೀಟುಗಳು.
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ, ತಮಿಳುನಾಡು: 12 ಸೀಟುಗಳು.
ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ, ನೆಲ್ಲೂರು, ಆಂಧ್ರಪ್ರದೇಶ: 03 ಸೀಟುಗಳು.
ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು, ಕೇರಳ: 02 ಸೀಟುಗಳು.
ಒಟ್ಟು ಸೀಟುಗಳು: 39 ಸೀಟುಗಳು ಲಭ್ಯವಿರುತ್ತದೆ.
ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!
ಪ್ರವೇಶ ಪ್ರಕ್ರಿಯೆ:
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಸಂಸ್ಥೆಗಳಲ್ಲಿ ಕೌನ್ಸೆಲಿಂಗ್‌ಗೆ ಆಹ್ವಾನಿಸಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ:
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು Download Now ಲಿಂಕ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪೂರ್ಣಗೊಂಡ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಸಲ್ಲಿಸಿ:
ಪ್ರಾಂಶುಪಾಲರು, ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06- 2025.
ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು:
1) ಆಧಾರ್ ಕಾರ್ಡ್ ಪ್ರತಿ
2) ಪಾಸ್‌ಪೋರ್ಟ್ ಸೈಜ್ ಫೋಟೊ
3) ಎಸ್.ಎಸ್.ಎಲ್.ಸಿ ಅಂಕಪಟ್ಟಿ
4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5) ದೂರವಾಣಿ ಸಂಖ್ಯೆ
ಹೆಚ್ಚಿನ ಮಾಹಿತಿಗೆ ಸಂಪರ್ಕ:
ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ.
ಮೊಬೈಲ್: 9449162822
ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ!