ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(KSOU) ಸಹಯೋಗದಲ್ಲಿ ಉನ್ನತ ಶಿಕ್ಷಣವನ್ನು(Free Diploma Courses) ಪಡೆಯಲು ಆಸಕ್ತಿಯಿರುವ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕವನ್ನು ಪಾವತಿ ಮಾಡಿ ಸಂಪೂರ್ಣ ಉಚಿತ ಶಿಕ್ಷಣವನ್ನು ಪಡೆಯಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಉನ್ನತ ಶಿಕ್ಷಣ ವಂಚಿತರಾದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ “ಉಚಿತ ಉನ್ನತ ಶಿಕ್ಷಣ ಯೋಜನೆ” ಜಾರಿಗೊಳಿಸಿದೆ. 2025-26 ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಯುಜಿಸಿ ಅನುಮೋದಿತ ಸ್ನಾತಕ, ಸ್ನಾತಕೋತ್ತರ(Free degree courses) ಹಾಗೂ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
ಪ್ರಸ್ತುತ ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅಗತ್ಯ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Who Can Apply-ಯಾರೆಲ್ಲ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು?
ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ವರ್ಗಕ್ಕೆ ಸೇರಿದವರಾಗಿರಬೇಕು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ ಎಂದು ತಿಳಿಸಲಾಗಿದೆ.
Free Courses Benefits-ಏನಿಲ್ಲ ಸೌಲಭ್ಯ ದೊರೆಯಲಿದೆ?
ಅರ್ಜಿ ಸಲ್ಲಿಸಿ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಶೈಕ್ಷಣಿಕ ಕೋರ್ಸ್‍ನ ಪ್ರವೇಶಾತಿ ಮತ್ತು ಪರೀಕ್ಷಾ ಶುಲ್ಕವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೇರವಾಗಿ ಪಾವತಿಸುತ್ತದೆ. ಇದರಿಂದ ಉಚಿತವಾಗಿ ವಿವಿಧ ಕೋರ್ಸ್ ಗಳಿಗೆ ಪ್ರವೇಶವನ್ನು ಪಡೆಯಲು ಸಾಧ್ಯವಾಗುತ್ತದೆ.
ಇದನ್ನೂ ಓದಿ: Home Grant Scheme-ಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ!
Last Date For Application-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ಉಚಿತ ಪ್ರವೇಶವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 01 ಜುಲೈ 2025 ರಿಂದ ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು 20 ಆಗಸ್ಟ್ 2025 ಕೊನೆಯ ದಿನಾಂಕವಾಗಿರುತ್ತದೆ.
How To Apply-ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Scholorship Application:1-10 ನೇ ತರಗತಿ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
- ಆಧಾರ್ ಕಾರ್ಡ/Aadhar
- ವಿದ್ಯಾರ್ಥಿಯ ಪೋಟೋ/Photo
- ಶೈಕ್ಷಣಿಕ ವಿದ್ಯಾರ್ಹತೆ ಪ್ರಮಾಣ ಪತ್ರ/Education Certificate
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And income Certifucate
- ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
- ಮೊಬೈಲ್ ನಂಬರ್/Mobile Number
- ಇ-ಮೆಲ್ ವಿಳಾಸ/Email
ಇದನ್ನೂ ಓದಿ: Labour Card-ಕಾರ್ಮಿಕ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805-26439 / 90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬಾಪೂಜಿನಗರ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSOU Website-ಅಧಿಕೃತ ವೆಬ್ಸೈಟ್-Click Here
ಯಾವೆಲ್ಲ ಕೋರ್ಸ್ ಗಳಿಗೆ ಪವೇಶವನ್ನು ಪಡೆಯಬಹುದು ಎನ್ನುವ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ-Download Now