Monday, June 2, 2025
No menu items!
HomeNewsFree Hostel Application-ಉಚಿತ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Free Hostel Application-ಉಚಿತ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ವಿದ್ಯಾರ್ಥಿನಿಲಯ(BCM Application) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಇಲಾಖೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಲ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್(BCM Online Form)ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Crop Insurance-ಬೆಳೆ ವಿಮೆ ಯೋಜನೆಯ ಕುರಿತು ಇಲ್ಲಿದೆ ಅಗತ್ಯ ಮಾಹಿತಿ!

ಈ ಅಂಕಣದಲ್ಲಿ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಯಾರೆಲ್ಲೆ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈ ಮಾಹಿತಿಯನ್ನು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಅವಶ್ಯವಿರುವ ಫಲಾನುಭವಿಗಳಿಗೆ ಮಾಹಿತಿಯನ್ನು ತಲುಪಿಸಲು ಸಹಕರಿಸಿ.

bcm hostel application

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.

ಪಿಯುಸಿ, ಡಿಪ್ಲೋಮಾ ಮತ್ತು ಐಟಿಐ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.

ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗ ಸೇರಿದವರ ವಾರ್ಷಿಕ ಆದಾಯವು ರೂ 2.50 ಲಕ್ಷದ ಒಳಗಿರಬೇಕು.

2ಎ, 2ಬಿ, 3ಎ, 3ಬಿ ವರ್ಗ ಸೇರಿದವರ ವಾರ್ಷಿಕ ಆದಾಯವು ರೂ 1.0ಲಕ್ಷದ ಒಳಗಿರಬೇಕು.

ಇದನ್ನೂ ಓದಿ: Horticulture Department- ತೋಟಗಾರಿಕೆ ಇಲಾಖೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Last Date- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಜೂನ್ 2025

Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ/Aadhar card
  • ಬ್ಯಾಂಕ್ ಪಾಸ್ ಬುಕ್/Bank passbook
  • ಪೋಟೋ/Photocopy
  • ಶಾಲಾ ಪ್ರವೇಶ ಪತ್ರ/School Certificate
  • ಮೊಬೈಲ್ ನಂಬರ್/Mobile number

ಇದನ್ನೂ ಓದಿ: BPL Card Benefits- BPL Card ಕುಟುಂಬಗಳಿಗೆ ಈ ಸೇವೆ ಉಚಿತವಾಗಿ ಲಭ್ಯ!

How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸವ ವಿಧಾನ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಮೊದಲ ಬಾರಿಗೆ ಈ ಜಾಲತಾಣಕ್ಕೆ ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳು ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ವಿದ್ಯಾರ್ಥಿಗಲು ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Free Aadhaar Update- ಉಚಿತವಾಗಿ ಆಧಾರ್ ಕಾರ್ಡ ಅಪ್ಡೇಟ್ ಕುರಿತು ಮಹತ್ವದ ಪ್ರಕಟಣೆ!

For More Information-ಇನ್ನು ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ ಜಾಲತಾಣ- Click Here
ಸಹಾಯವಾಣಿ-8050770004 ಮತ್ತು 8050770005
ಅನ್ಲೈನ್ ಅರ್ಜಿ ಲಿಂಕ್-Apply Now
ಅಧಿಕೃತ ಪ್ರಕಟಣೆ-Download Now

RELATED ARTICLES
- Advertisment -

Most Popular

Recent Comments