Saturday, July 19, 2025
No menu items!
HomeNewsFree Hostel Application-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ!

Free Hostel Application-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ!

ಕರ್ನಾಟಕ ಸರ್ಕಾರವು 2025-2026 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ(Government Hostel Scheme)ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಸತಿ ಯೋಜನೆಯು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ(Post-Matric Hostel Admission)ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯವಾಗುವಂತೆ ಹಾಸ್ಟೆಲ್ ವ್ಯವಸ್ಥೆಯನ್ನು ನೀಡಲಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಆಹಾರ ಹಾಗೂ ಇನ್ನಿತರ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: PM Dhan Dhanya Yojana-ಕೇಂದ್ರದಿಂದ ಪಿಎಂ ಧನ್ ಧಾನ್ಯ ಕೃಷಿ ನೂತನ ಯೋಜನೆ ಜಾರಿ!

ಪ್ರಸ್ತುತ ಈ ಲೇಖನದಲ್ಲಿ ಈ ವ್ಯವಸ್ಥೆಯ ಸೌಲಭ್ಯವನ್ನು ಪಡೆದುಕೊಳ್ಳಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ವಿಧಾನಗಳು? ಅರ್ಜಿಗೆ ಸಂಬಂದಿಸಿದ ಅಗತ್ಯ ದಾಖಲಾತಿಗಳು? ಇತರೆ ಅಗತ್ಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Important Dates-ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು:

ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 14-08-2025
ಅರ್ಜಿಯ ತಾಲ್ಲೂಕ್ ಮಟ್ಟದ ಪರೀಶೆಲನೆಯ ಕೊನೆಯ ದಿನಾಂಕ: 19-08-2025
ವಿದ್ಯಾರ್ಥಿಗಳ ಪ್ರವೇಶಕ್ಕೆ ಕೊನೆಯ ದಿನಾಂಕ: 30-08-2025

ಇದನ್ನೂ ಓದಿ: Banking Job-ಸರ್ಕಾರಿ ಬ್ಯಾಂಕ್‌ಗಳಲ್ಲಿ 6,215 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Who Can Apply-ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು?

ಅರ್ಜಿದಾರರ ವಯಸ್ಸು 18-25 ರ ಮಿತಿಯಲ್ಲಿರಬೇಕು.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-1, ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ನಿಗದಿಪಡಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ (PUC, ITI, ಡಿಪ್ಲೊಮಾ, ಪದವಿ) ಓದುತ್ತಿರುವವರು ಅರ್ಜಿಯನ್ನು ಸಲ್ಲಿಸಲು ಅರ್ಹರು.

ಪ್ರವರ್ಗ 1, ಪ್ರವರ್ಗ 2, 2A, 2B, 3A, 3B, ಹಾಗೂ ಪರಿಶಿಷ್ಟ ಜಾತಿ(SC), ಪರಿಶಿಷ್ಟ ಪಂಗಡ(ST) ದ ವರ್ಗಕ್ಕೆ ಸೇರಿದವರು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Documents Reqiured-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು?

ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card

ವಿದ್ಯಾರ್ಥಿಯ SSP ಐಡಿ/SSP ID

ಕಳೆದ ವರ್ಷದ ಅಂಕಪಟ್ಟಿ/Marks Card

ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ/Income Certificate

ಜಾತಿ ಪ್ರಮಾಣ ಪತ್ರ/Caste Certificate

ನಿವಾಸಿ ದೃಢೀಕರಣ ಪತ್ರ/Resident certificate

ಮೊಬೈಲ್ ನಂಬರ್/Mobile Number

ಫೋಟೊ/Photocopy

ಇದನ್ನೂ ಓದಿ: Horticulture Department-MIDH ಯೋಜನೆಯಡಿ ವೀಡ್ ಮ್ಯಾಟ್ ಖರೀದಿಸಲು 1 ಲಕ್ಷ ಸಹಾಯಧನ!

free hostel application

ಇದನ್ನೂ ಓದಿ: Scholorship Application-NEET ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ:

ವಿದ್ಯಾರ್ಥಿ ನಿಲಯದ ಸೌಲಭ್ಯವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿಯೆ ಆನ್ಲೈನ್ ಮೂಲಕವೇ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸುವ ಅವಕಾಶವಿರುತ್ತದೆ.

ಇದನ್ನೂ ಓದಿ: Ration Card-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Step-1: ಮೊದಲಿಗೆ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಬಿಸಿಡಬ್ಲ್ಯೂಡಿ ಹಾಸ್ಟೆಲ್ ಪೋರ್ಟಲ್ ಗೆ ಭೇಟಿ ಮಾಡಬೇಕು.

Step-2: ವೆಬ್ಸೈಟ್ ಗೆ ಭೇಟಿ ಮಾಡಿದ ನಂತರ ಅದೇ ಪೇಜ್ ನ ಎಡಬದಿಯಲ್ಲಿ ಕಾಣುವ “Pre Matric” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ ಈ ಪೇಜ್ ನಲ್ಲಿ “Do you have State Scholarship Account? Yes/NO ಎಂದು ಪ್ರಶ್ನೆಯನ್ನು ಕೇಳುತ್ತದೆ ಇದಕ್ಕೆ ಉತ್ತರಿಸಿ ಮುಂದಿನ ಪೇಜ್ ನಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ಬಳಿಕ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Muskaan Scholarship-ಪ್ರೌಢ ಶಾಲಾ & ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

For More Information-ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read More

 

RELATED ARTICLES
- Advertisment -

Most Popular

Recent Comments