Sunday, June 22, 2025
No menu items!
HomeNewsFree Sewing Machine- ಹೊಲಿಗೆ ಯಂತ್ರಕ್ಕೆ ಸಹಾಯಧನ! ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Machine- ಹೊಲಿಗೆ ಯಂತ್ರಕ್ಕೆ ಸಹಾಯಧನ! ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

ಸರ್ಕಾರವು ಸ್ವಯಂ ಉದ್ಯೋಗ ಮತ್ತು ಮಹಿಳಾ ಸಬಲಿಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಉಚಿತ ಹೊಲಿಗೆ(Free Tailoring Training) ತರಬೇತಿ ಯೋಜನೆಯನ್ನು ಪ್ರಾರಂಭ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಒಂದು ತಿಂಗಳ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಆಸಕ್ತ ಅಭ್ಯರ್ಥಿಗಳು ಉಚಿತವಾಗಿ ಹೊಲಿಗೆ ಕೌಶಲ್ಯವನ್ನು(Holige Yantra Subsidy Yojane) ಕಲಿಯುವುದರ ಜೊತೆಗೆ ಸಬ್ಸಿಡಿಯ ದರದಲ್ಲಿ ಹೊಲಿಗೆ ಯಂತ್ರವನ್ನು ಪಡೆಯುವ ಅವಕಾಶವೂ ಸಹ ಇದಗಿರುತ್ತದೆ.

ಇದನ್ನೂ ಓದಿ: Mobile Repair Training-ಮೊಬೈಲ್ ರಿಪೇರಿ ಶಾಪ್ ತೆರೆಯುವವರಿಗೆ ಇಲ್ಲಿದೆ ಸುವರ್ಣಾವಕಾಶ!

ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೇನು? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Tailoring Training Date- ಹೊಲಿಗೆ ತರಬೇತಿಯ ಪ್ರಾರಂಭದ ದಿನಾಂಕ:

ಉಚಿತ ಹೊಲಿಗೆ ತರಬೇತಿಯು ದಿನಾಂಕ 02 ಜೂನ್ 2025 ರಿಂದ ಪ್ರಾರಂಭವಾಗಿ ದಿನಾಂಕ: 02-07-2025 ರವರೆಗೆ ಅಂದರೆ ಒಟ್ಟು 31 ದಿನಗಳ ಕಾಲ ನಡೆಯುತ್ತದೆ.

Free Tailoring Training- ಯಾರೆಲ್ಲ ಉಚಿತ ಹೊಲಿಗೆ ತರಬೇತಿಯಲ್ಲಿ ಭಾಗವಹಿಸಬಹುದು?

1) ಅರ್ಜಿದಾರ ಅಭ್ಯರ್ಥಿಯು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.

2) ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 45 ವರ್ಷ ಮೀರಿರಬಾರದು.

3) ಅರ್ಜಿದಾರರು ಕನಿಷ್ಠ 7ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

4) ಅಭ್ಯರ್ಥಿಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ದಾಯವಾಗಿ ಬರಬೇಕು.

5) ಎಲ್ಲಾ ವರ್ಗದವರಿಗೂ ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

6) ಪ್ರಸ್ತುತ ತರಬೇತಿಯು ಪುರುಷರಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Adike Krishi-ಅಡಿಕೆ ಸಸಿಯನ್ನು ಬೆಳೆಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

subsidy sewing machine

Training Center Address- ಹೊಲಿಗೆ ತರಬೇತಿಯು ಎಲ್ಲಿ ನಡೆಯುತ್ತದೆ?

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆಯಲ್ಲಿ ಏರ್ಪಡಿಸಲಾಗಿದೆ.

Free Tailoring Training Application-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದನೇ ವಿಧಾನ ಆನ್ಲೈನ್ ಮೂಲಕ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ

ನೇರವಾಗಿ ಇಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ತರಬೇತಿ ಪ್ರಾರಂಭವಾಗುವ ದಿನ ತರಬೇತಿ ಕೇಂದ್ರಕ್ಕೆ ಭೇಟಿ ಮಾಡಿ ತರಬೇತಿಯಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ: Bangalore Rain Forecast-ರಾಜ್ಯದ ಮಳೆ ಮುನ್ಸೂಚನೆ! 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

How to apply- ಹೇಗೆ ಅರ್ಜಿಯನ್ನು ಸಲ್ಲಿಸಬಹುದು?

ಆಸಕ್ತ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಗೆ ಭೇಟಿ ಮಾಡಿ ಅಗತ್ಯ ದಾಖಲೆಗಳ ಸಿದ್ದಪಡಿಸಿ ಆನ್ಲೈನ್ ಮೂಲಕವೇ ಅಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಥವಾ
ನಿಮ್ಮ ಹತ್ತಿರದಲ್ಲಿರುವ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಅಥವಾ ನಾಗರಿಕ ಸೇವಾ ಕೇಂದ್ರಕ್ಕೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Documents for Training-ಅಗತ್ಯ ದಾಖಲೆಗಳು:

ಅಭ್ಯರ್ಥಿಯ ಆಧಾರ್ ಕಾರ್ಡ/Aadhar card

ರೇಶನ್ ಕಾರ್ಡ ಪ್ರತಿ/Ration Card

ಅಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್/Bank passbook

ಅಭ್ಯರ್ಥಿಯ ಮೊಬೈಲ್ ಸಂಖ್ಯೆ/ Mobile number

ಇದನ್ನೂ ಓದಿ: Mobile Repair Training- 30 ದಿನದ ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ!

Subsidy Schemes-ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ:

ಹೊಲಿಗೆ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಸ್ವಂತ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಸಬ್ಸಿಡಿಯೊಂದಿಗೆ ಪಡೆಯಲು ಅವಕಾಶವಿರುತ್ತದೆ. ಜೊತೆಗೆ, ಬ್ಯಾಂಕ್‌ಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯಲು ಸಹ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಈ ಯೋಜನೆಗಳು ಮಹಿಳೆಯರಿಗೆ, ಕುಶಲಕರ್ಮಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ಗುರಿಯನ್ನು ಹೊಂದಿವೆ. ಕೆಲವು ಪ್ರಮುಖ ಸಬ್ಸಿಡಿ ಯೋಜನೆಗಳು ಮತ್ತು ಸಾಲ ಸೌಲಭ್ಯದ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ಸಬ್ಸಿಡಿ ಯೋಜನೆಗಳು:

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Scheme):

ಈ ಯೋಜನೆಯಡಿ, ಹೊಲಿಗೆ ಕಸುಬಿನಲ್ಲಿ ತೊಡಗಿರುವವರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳಿಗೆ ₹15,000 ಮೌಲ್ಯದ ಇ-ವೋಚರ್‌ಗಳು ಅಥವಾ ಇ-ರುಪಿಯನ್ನು ನೀಡಲಾಗುತ್ತದೆ, ಇದನ್ನು ಯಂತ್ರ ಖರೀದಿಗೆ ಬಳಸಬಹುದು.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ (PMEGP):

ಈ ಕಾರ್ಯಕ್ರಮದಡಿ, ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಖರೀದಿಗೆ ಸಬ್ಸಿಡಿಯೊಂದಿಗೆ ಸಾಲ ಸೌಲಭ್ಯವನ್ನು ಪಡೆಯಬಹುದು. ಗ್ರಾಮೀಣ ಪ್ರದೇಶಗಳಲ್ಲಿ 35% ಮತ್ತು ನಗರ ಪ್ರದೇಶಗಳಲ್ಲಿ 25% ಸಬ್ಸಿಡಿಯನ್ನು ಸರ್ಕಾರವು ಒದಗಿಸುತ್ತದೆ.

ಇದನ್ನೂ ಓದಿ: Farm Pond Subsidy- ಶೇ 90% ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ!

ರಾಜ್ಯ ಸರ್ಕಾರದ ನಿಗಮಗಳ ಯೋಜನೆಗಳು:

ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳು ಹೊಲಿಗೆ ಯಂತ್ರ ಖರೀದಿಗೆ ಸಹಾಯಧನವನ್ನು ಒದಗಿಸುತ್ತವೆ. ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿತ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಿ.

ಜಿಲ್ಲಾ ಕೈಗಾರಿಕಾ ಕೇಂದ್ರಗಳ (DIC) ಯೋಜನೆಗಳು:

ಜಿಲ್ಲಾ ಕೈಗಾರಿಕಾ ಕೇಂದ್ರಗಳ ಮೂಲಕ ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದ ಯೋಜನೆಗಳಡಿ ಸಬ್ಸಿಡಿಯೊಂದಿಗೆ ಹೊಲಿಗೆ ಯಂತ್ರವನ್ನು ಪಡೆಯಬಹುದು. ಇದಕ್ಕಾಗಿ ತಾಲೂಕು ಅಥವಾ ಜಿಲ್ಲಾ ಮಟ್ಟದ ಕೈಗಾರಿಕಾ ಕಚೇರಿಗಳಿಂದ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ: Diploma Textile- ಡಿಪ್ಲೋಮಾ ಟೆಕ್ಸ್‌ಟೈಲ್ ಟೆಕ್ನಾಲಜಿ ಕೋರ್ಸ್‌ಗೆ ಅರ್ಜಿ ಆಹ್ವಾನ!

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ. ಹಾಗೂ ಈ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿ: 9449860007, 9538281989, 9916783825, 888044612

RELATED ARTICLES
- Advertisment -

Most Popular

Recent Comments