Sunday, June 22, 2025
No menu items!
HomeNewsFree Tailoring Machine-ಉಚಿತ ಟೈಲರಿಂಗ್ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Tailoring Machine-ಉಚಿತ ಟೈಲರಿಂಗ್ ಯಂತ್ರ ಪಡೆಯಲು ಅರ್ಜಿ ಆಹ್ವಾನ!

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ಸ್ವಯಂ ಉದ್ಯೋಗದ ಅವಕಾಶ ಒದಗಿಸುವ ಉದ್ದೇಶದಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ(Free sewing machine)ವಿತರಣೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆ ಮುಖ್ಯವಾಗಿ ಮಧ್ಯಮ ಮತ್ತು ಬಡ ಕುಟುಂಬಗಳ ಜನರ ಅಲ್ಪ ಆದಾಯದ ಮಹಿಳೆಯರಿಗಾಗಿ(Free Tailoring Machine)ರೂಪಿಸಲಾಗಿದ್ದು, ಬಹುತೇಕ ಮಹಿಳೆಯರು ಉದ್ಯೋಗಕ್ಕಾಗಿ ಪರದಾಡುತ್ತಿರುವ ಈ ದಿನಗಳಲ್ಲಿ ಈ ಯೋಜನೆಯ ಸಹಾಯದಿಂದ ತಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗುವ ಅವಕಾಶವನ್ನು ಹೊಂದಬಹುದು.

ಇದನ್ನೂ ಓದಿ: Scholorship Application-ಮಿರೇ ಅಸೆಟ್ ಫೌಂಡೇಶನ್ ನಿಂದ ₹50,000 ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

ಈ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರಿರುತ್ತಾರೆ? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿಸ್ತರಿಸಲಾಗಿದೆ.

last date-ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-06-2025

ಇದನ್ನೂ ಓದಿ: Ration Card List-ಪರಿಷ್ಕೃತ ಅನರ್ಹ ರೇಷನ್ ಕಾರ್ಡ್‌ದಾರರ ಪಟ್ಟಿ ಬಿಡುಗಡೆ!

Who Can Apply- ಉಚಿತ ಹೊಲಿಗೆ ಯಂತ್ರ ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು?

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು.

ಕಳೆದ ವರ್ಷ ಈ ಯೋಜನೆಯಡಿ ಉಚಿತ ಹೊಲಿಗೆ ಯಂತ್ರವನ್ನು ಪಡೆದಿರಬಾರದು.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದಲ್ಲಿರುವವ್ರಿಗೆ ರೂ.98,000/-ಗಳ ಒಳಗಿರಬೇಕು.

ಪಟ್ಟಣ ಪುದೇಶದಲ್ಲಿರುವವರಿಗೆ ರೂ.1,20,000/-ಗಳು ಮೀರಿರಬಾರದು.

ಇದನ್ನೂ ಓದಿ: Karnataka Dam Water Level-ಪ್ರಸ್ತುತ ರಾಜ್ಯದ ಡ್ಯಾಂ ಗಳಲ್ಲಿ ಎಷ್ಟು ನೀರು ಸಂಗ್ರಹವಾಗಿದೆ?

sewing machine

ಇದನ್ನೂ ಓದಿ: Gruha Arogya Yojane-ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ ಜಾರಿ!

Required documents- ಯಂತ್ರ ಪಡೆಯಲು ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು?

  • ಆಧಾರ್ ಕಾರ್ಡ/Aadhar card
  • ರೇಷನ್ ಕಾರ್ಡ/Ration card
  • ಜಾತಿಪ್ರಮಾಣ ಪತ್ರ /Cast Certificate
  • ಬ್ಯಾಂಕ್ ಖಾತೆ/Bank pass book
  • ಆದಾಯ ಪ್ರಮಾಣ ಪತ್ರ/Income Certificate
  • ಹೊಲಿಗೆ ಯಂತ್ರ ತರಬೇತಿ ಪ್ರಮಾಣ ಪತ್ರ/Training certificate
  • ಪೋಟೋ/photo copy
  • ಮೊಬೈಲ್ ನಂಬರ್/Mobile number

ಇದನ್ನೂ ಓದಿ: Poultry farming-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

How To Apply- ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಅರ್ಹ ಫಲಾನುಭವಿಗಳು ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಈ ಕೆಳಗೆ ನೀಡುರುವ ವಿಧಾನಗಳನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೆ ಅರ್ಜಿಯನ್ನು ಸಲ್ಲಿಸಬಹುದು.

ಹಂತ-೧: ಪ್ರಥಮದಲ್ಲಿ ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Free Hostel- ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

ಹಂತ-೨: ತದನಂತರ ಅರ್ಜಿದಾರರು ID ಮತ್ತು Password ಅನ್ನು ಹಾಕಿ ಲಾಗಿನ್ ಆಗಬೇಕು. ಒಂದು ವೇಳೆ ಐಡಿ ಮತ್ತು ಪಾಸ್ವರ್ಡ್ ಇಲ್ಲದ್ದಿದ್ದಲ್ಲಿ ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರ್ ಸಹಾಯದಿಂದ ಐಡಿ ಅನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕು.

ಹಂತ-೩: ಲಾಗಿನ್ ಆದ ನಂತರ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

 

RELATED ARTICLES
- Advertisment -

Most Popular

Recent Comments