Sunday, June 22, 2025
No menu items!
HomeAgricultureGKVK Bengaluru-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ 59 ನೇ ಘಟಿಕೋತ್ಸವ!13 ಚಿನ್ನದ ಪದಕ ಪಡೆದ ದೀಪ್ತಿ!

GKVK Bengaluru-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ 59 ನೇ ಘಟಿಕೋತ್ಸವ!13 ಚಿನ್ನದ ಪದಕ ಪಡೆದ ದೀಪ್ತಿ!

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು(Agriculture University,Bengaluru) ತನ್ನ 60 ವರ್ಷಗಳ ಸುದೀರ್ಘ ಸೇವೆಯನ್ನು ಪೂರ್ಣಗೊಳಿಸಿ ವಜ್ರ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ 59ನೇ ಘಟಿಕೋತ್ಸವವನ್ನು ವಿಶೇಷವಾಗಿ ಮೇ 15 ರಂದು ಬೆಳಗ್ಗೆ 11.00 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ ಎಂದು ಕುಲಪತಿಗಳಾದ ಡಾ.ಎಸ್.ವಿ.ಸುರೇಶ ಅವರು ತಿಳಿಸಿದರು.

ಇಂದು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ(University of agricultural sciences) ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕೃಷಿ ಸಚಿವರು ಹಾಗೂ ಕೃಷಿ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಎನ್. ಚಲುವರಾಯಸ್ವಾಮಿ ಅವರು ಉಪಸ್ಥಿತರಿರುವರು. ನವದೆಹಲಿಯ ಇಪ್ಕೋ ವ್ಯವಸ್ಥಾಪಕ ನಿರ್ದೆಶಕರಾದ ಡಾ. ಯು.ಎಸ್. ಅವಸ್ಥಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವದ ಭಾಷಣ ಮಾಡಲಿರುವರು.

ಇದನ್ನೂ ಓದಿ: Diploma Courses- ತಿಂಗಳಿಗೆ ರೂ. 2,500/- ಶಿಷ್ಯವೇತನದೊಂದಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ!

59ನೇ ಘಟಿಕೋತ್ಸವದಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಒಟ್ಟಾರೆ 1271 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುವುದು. ಅದರಲ್ಲಿ, 871 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು(Bsc Agri), 311 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು(Msc Agri) ಹಾಗೂ 89 ವಿದ್ಯಾರ್ಥಿಗಳು ಡಾಕ್ಟೊರಲ್ ಪದವಿಗಳನ್ನು(Phd) ಪಡೆಯಲಿದ್ದಾರೆ.

ಸಮಾರಂಭದಂದು, ಡಾಕ್ಟರ್ ಆಫ್ ಫಿಲಾಸೊಫಿ ಪದವಿಯಲ್ಲಿ ಒಟ್ಟು 30 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 13 ವಿದ್ಯಾರ್ಥಿನಿಯರು ಹಾಗೂ 03 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ 14 ಚಿನ್ನದ ಪದಕಗಳನ್ನು, 10 ದಾನಿಗಳ ಚಿನ್ನದ ಪದಕಗಳು, 05 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರ ಹಾಗೂ 01 ಆವರಣದ ಚಿನ್ನದ ಪದಕಗಳನ್ನು ಹಂಚಿಕೊಂಡಿರುತ್ತಾರೆ.

ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 62 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಇದರಲ್ಲಿ 23 ವಿದ್ಯಾರ್ಥಿನಿಯರು ಹಾಗೂ 05 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 17 ಚಿನ್ನದ ಪದಕಗಳು ಹಾಗೂ 07 ಆವರಣದ ಚಿನ್ನದ ಪದಕಗಳನ್ನು, 25 ದಾನಿಗಳ ಚಿನ್ನದ ಪದಕಗಳು ಹಾಗೂ 13 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಇದನ್ನೂ ಓದಿ: Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

ಇದಲ್ಲದೆ, ಸ್ನಾತಕ ಪದವಿಯಲ್ಲಿ ಒಟ್ಟು 58 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಇದರಲ್ಲಿ 13 ವಿದ್ಯಾರ್ಥಿನಿಯರು ಹಾಗೂ 06 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 06 ಚಿನ್ನದ ಪದಕಗಳು, 04 ಆವರಣದ ಚಿನ್ನದ ಪದಕಗಳು, 01 ಕೃವಿವಿಯ ಕ್ರೀಡಾ ಚಿನ್ನದ ಪದಕ, 41 ದಾನಿಗಳ ಚಿನ್ನದ ಪದಕಗಳು ಹಾಗೂ 06 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಸಮಾರಂಭದಲ್ಲಿ ಒಟ್ಟಾರೆ 150 ಚಿನ್ನದ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳು ಪಡೆಯಲಿದ್ದು ಅದರಲ್ಲಿ 49 ವಿಧ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯದ 29 ಚಿನ್ನದ ಪದಕ, 66 ದಾನಿಗಳ ಚಿನ್ನದ ಪದಕ, 09 ಆವರಣದ ಚಿನ್ನದ ಪದಕ ಹಾಗೂ 19 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಅದರಂತೆ 14 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 08 ಚಿನ್ನದ ಪದಕ, 10 ದಾನಿಗಳ ಚಿನ್ನದ ಪದಕ ಹಾಗೂ 05 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು, 03 ಆವರಣದ ಚಿನ್ನದ ಪದಕಗಳು ಹಾಗೂ 01 ಕೃವಿವಿಯ ಕ್ರೀಡಾ ಚಿನ್ನದ ಪದಕಗಳನ್ನು ವಿತರಿಸಲಾಗುವುದು.

ಇದನ್ನೂ ಓದಿ: Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

gkvk

University of agricultural sciences Bangalore-13 ಚಿನ್ನದ ಪದಕ ಪಡೆದ ಕುಮಾರಿ ದೀಪ್ತಿ:

ಒಟ್ಟು 63 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 50 ಚಿನ್ನದ ಪದಕಗಳನ್ನು, 76 ದಾನಿಗಳ ಚಿನ್ನದ ಪದಕಗಳನ್ನು (50+76=126) ಹಾಗೂ 24 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಬಿ.ಎಸ್ಸಿ (ಆನರ್ಸ್), ಕೃಷಿ ಪದವಿಯಲ್ಲಿ ಕೃಷಿ ಕಾಲೇಜು, ಜಿಕೆವಿಕೆ, ಬೆಂಗಳೂರಿನ ವಿದ್ಯಾರ್ಥಿನಿಯಾದ ಕುಮಾರಿ. ದೀಪ್ತಿ ಟಿ ಎಲ್ ಅತಿ ಹೆಚ್ಚು ಅಂದರೆ 13 ಚಿನ್ನದ ಪದಕಗಳು ಹಾಗೂ 4 ದಾನಿಗಳ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿರುತ್ತಾರೆ.

ಕೃಷಿ ವಿ.ವಿ. ಬೆಂಗಳೂರಿನ 59 ನೇ ಘಟಿಕೋತ್ಸವಕ್ಕೆ ವಿಶ್ವವಿದ್ಯಾನಿಲಯ ಸಕಲ ರೀತಿಯಲ್ಲಿ ಸಜ್ಜಾಗಿದ್ದು ಕಾರ್ಯಕ್ರಮದಲ್ಲಿ ವಿ.ವಿ.ಆಡಳಿತ ಮಂಡಳಿ ಸದಸ್ಯರು, ವಿಶೇಷ ಆಹ್ವಾನಿತರು, ಅಧಿಕಾರಿಗಳು, ಶಿಕ್ಷಣ ಪರಿಷತ್ ಸದಸ್ಯರು, ವಿಶ್ರಾಂತ ಕುಲಪತಿಗಳು, ಪೋಷಕರು ಮತ್ತು ವಿಶ್ವವಿದ್ಯಾನಿಲಯದ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

ಚಿನ್ನದ ಪದಕ ವಿತರಣೆ:
  • ಡಾಕ್ಟರ್ ಆಫ್ ಫಿಲಾಸೊಫಿ: 30 ಚಿನ್ನದ ಪದಕಗಳು, ಇದರಲ್ಲಿ 13 ವಿದ್ಯಾರ್ಥಿನಿಯರು ಮತ್ತು 3 ವಿದ್ಯಾರ್ಥಿಗಳು 14 ವಿಶ್ವವಿದ್ಯಾನಿಲಯ ಚಿನ್ನದ ಪದಕ, 10 ದಾನಿಗಳ ಚಿನ್ನದ ಪದಕ, 5 ದಾನಿಗಳ ಪ್ರಮಾಣ ಪತ್ರ ಮತ್ತು 1 ಆವರಣದ ಚಿನ್ನದ ಪದಕವನ್ನು ಪಡೆಯಲಿದ್ದಾರೆ.
  • ಸ್ನಾತಕೋತ್ತರ ಪದವಿ: 62 ಚಿನ್ನದ ಪದಕಗಳು, ಇದರಲ್ಲಿ 23 ವಿದ್ಯಾರ್ಥಿನಿಯರು ಮತ್ತು 5 ವಿದ್ಯಾರ್ಥಿಗಳು 17 ವಿಶ್ವವಿದ್ಯಾನಿಲಯ ಚಿನ್ನದ ಪದಕ, 7 ಆವರಣದ ಚಿನ್ನದ ಪದಕ, 25 ದಾನಿಗಳ ಚಿನ್ನದ ಪದಕ ಮತ್ತು 13 ದಾನಿಗಳ ಪ್ರಮಾಣ ಪತ್ರಗಳನ್ನು ಹಂಚಿಕೊಳ್ಳಲಿದ್ದಾರೆ.
  • ಸ್ನಾತಕ ಪದವಿ: 58 ಚಿನ್ನದ ಪದಕಗಳು, ಇದರಲ್ಲಿ 13 ವಿದ್ಯಾರ್ಥಿನಿಯರು ಮತ್ತು 6 ವಿದ್ಯಾರ್ಥಿಗಳು 6 ವಿಶ್ವವಿದ್ಯಾನಿಲಯ ಚಿನ್ನದ ಪದಕ, 4 ಆವರಣದ ಚಿನ್ನದ ಪದಕ, 1 ಕೃವಿವಿ ಕ್ರೀಡಾ ಚಿನ್ನದ ಪದಕ, 41 ದಾನಿಗಳ ಚಿನ್ನದ ಪದಕ ಮತ್ತು 6 ದಾನಿಗಳ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್- Click here

RELATED ARTICLES
- Advertisment -

Most Popular

Recent Comments