Sunday, December 22, 2024
No menu items!
HomeSchemesGruhalakshmi Status- ನಿಮ್ಮ ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ...

Gruhalakshmi Status- ನಿಮ್ಮ ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಗ್ರಾಮೀಣಿ ಮತ್ತು ನಗರ ಭಾಗದ ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಗೃಹಲಕ್ಷ್ಮಿ(Gruhalakshmi Status) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಹೇಗೆ ತಿಳಿಯುವುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಸರಕಾರದಡಿಯಲ್ಲಿ ಕಾರ್ಯನಿರ್ವಹಿಸುವ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(DBT Karnataka mobile app) ಡೌನ್ಲೋಡ್ ಮಾಡಿಕೊಂಡು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ವಿವರವನ್ನು ಪಡೆಯಬಹುದು.

ಇದನ್ನೂ ಓದಿ: Sprinkler set Subsidy- ರೈತರಿಗೆ ಭರ್ಜರಿ ಗುಡ್ ನ್ಯೂಸ್: ಅತೀ ಕಡಿಮೆ ದರದಲ್ಲಿ ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

ಅರ್ಜಿದಾರರ ಆಧಾರ್ ಕಾರ್ಡ ಸಂಖ್ಯೆಯನ್ನು ನಮೂದಿಸಿ ಇಲ್ಲಿಯವರೆಗೆ ಎಷ್ಟು ಕಂತು ಈ ಯೋಜನೆಯಡಿ ಹಣ ನೇರ ನಗದು ವರ್ಗಾವಣೆ(DBT Status) ಮೂಲಕ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಜಮಾ ದಿನಾಂಕ, UTR ನಂಬರ್ ಸೇರಿದಂತೆ ಸಂಪೂರ್ಣ ವಿವರವನ್ನು ಪಡೆಯಬಹುದಾಗಿದೆ.

Gruhalakshmi DBT status-ಪ್ರತಿ ತಿಂಗಳು ಈ ದಿನ ಗೃಹಲಕ್ಷ್ಮಿ ಹಣ ಜಮಾ ಅಗುತ್ತದೆ:

ಸಾಮಾನ್ಯವಾಗಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ದಿನಾಂಕ 10 ರಿಂದ 15 ನೇ ತಾರೀಕಿನ ನಡುವೆ ಎಲ್ಲಾ ಜಿಲ್ಲೆಯ ಫಲಾನುಭಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ.

ಇದನ್ನೂ ಓದಿ: Ration card-ರೇಷನ್ ಕಾರ್ಡಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ!

December Month Gruhalakshmi Amount- ಡಿಸೆಂಬರ್ ತಿಂಗಳ ಈಗಾಗಲೇ ಜಮಾ ಮಾಡಲಾಗಿದೆ:

ಪ್ರತಿ ತಿಂಗಳು ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಸಂಬಂಧಪಟ್ಟ ಇಲಾಖೆಯಿಂದ ಅರ್ಜಿದಾರರ ಬ್ಯಾಂಕ್ ಖಾತೆಗೆ ರೂ 2,000/- ಜಮಾ ಮಾಡಲಾಗುತ್ತದೆ ಇದರಂತೆ ಡಿಸೆಂಬರ್-2024 ರಲ್ಲಿ 11 ಡಿಸೆಂಬರ್ 2024 ರಂದು ಬಹುತೇಕ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.

Gruhalakshmi Status Check-ನಿಮ್ಮ ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ:

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಹಣ ಪಡೆಯುತ್ತಿರುವವರು ತಮ್ಮ 12 ಅಂಕಿಯ ಆಧಾರ್ ನಂಬರ್ ಅನ್ನು ಹಾಕಿ ಇಲ್ಲಿಯವರೆಗೆ ಈ ಯೋಜನೆಯಡಿ ಎಷ್ಟು ಹಣ ನಿಮ್ಮ ಬ್ಯಾಂಕ್ ಖಾತೆಗೆ ಎಂದು ಈ ಕೆಳಗಿನ ವಿಧಾನವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Labor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ!

ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಬಿಡುಗಡೆ ಮಾಡಿರುವ DBT Karnataka ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಭೇಟಿ ಮಾಡಿ ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿದಾರರು ಹಣ ಜಮಾ ಅಗಿರುವ ವಿವರವನ್ನು ಪಡೆಯಬಹುದು.

Step-1: ಇಲ್ಲಿ ಕ್ಲಿಕ್ ಮಾಡಿ Download DBT Karnataka App ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.

Step-2: ಮೇಲಿನ ಲಿಂಕ್ ಬಳಸಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿದ ನಂತರ ಅರ್ಜಿದಾರರ 12 ಅಂಕಿಯ ಅಧಾರ್ ಕಾರ್ಡಿನ ನಂಬರ್ ಅನ್ನು ಹಾಕಿ “OTP ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

gruhalakshmi status check

ಇದನ್ನೂ ಓದಿ: Gold Rate-ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

Step-3: ತದನಂತರ “OTP ಪಡೆಯಿರಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ ಅನ್ನು ನಮೂದಿಸಿ ಇಲ್ಲಿ ಕಾಣುವ ನಿಮ್ಮ ವೈಯಕ್ತಿಕ ವಿವರ ಸರಿ ಇದಿಯಾ ಎಂದು ಚೆಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಹಾಕಿ “ಸರಿ” ಎಂದು ಕ್ಲಿಕ್ ಮಾಡಿ ಕೊನೆಯಲ್ಲಿ ಈ ಅಪ್ಲಿಕೇಶನ್ ಲಾಗಿನ್ ಅಗಲು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕು.

Step-4: ರಚನೆ ಮಾಡಿಕೊಂಡಿರುವ ಪಾಸ್ವರ್ಡ ಅನ್ನು ಒಂದು ಕಡೆ ಬರೆದುಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಅಗಬೇಕು ಇಲ್ಲಿ ನಾಲ್ಕು ಆಯ್ಕೆಗಳು ಕಾಣುತ್ತವೆ ಇದರಲ್ಲಿ “ಪಾವತಿ ಸ್ಥಿತಿ” ಆಯ್ಕೆ ಮೇಲೆ ಕ್ಲಿಕ್ ಮಾಡಿ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ಸಂಪೂರ್ಣ ಹಣ ಜಮಾ ವಿವರ ತೋರಿಸುತ್ತದೆ.

gruhalakshmi

ಪ್ರತಿ ತಿಂಗಳು ಆ ಯೋಜನೆಯಡಿ ಯಾವ ದಿನಾಂಕದಂದು ಹಣ ಜಮಾ ಅಗಿದೆ? ಬ್ಯಾಂಕ್ ಹೆಸರು ಮತ್ತು UTR ನಂಬರ್ ಇತ್ಯಾದಿ ಮಾಹಿತಿಯನ್ನು ನೋಡಬಹುದು.

ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?

Bank Account Adhar Link Status-ಈ ಅಪ್ಲಿಕೇಶನ್ ನಲ್ಲಿ ಆಧಾರ್ ಲಿಂಕ್ ವಿವರವನ್ನು ಸಹ ನೋಡಬಹುದು:

ಈ ಅಪ್ಲಿಕೇಶನ್ ಮುಖಪುಟದಲ್ಲಿ ಕಾಣುವ “Seeding Status of aadhar in bank account” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್ ಅಗಿದರೆ Seeding Status: ನಲ್ಲಿ “Active” ಎಂದು ಗೋಚರಿಸುತ್ತದೆ, ಒಂದೊಮ್ಮೆ ಆಧಾರ್ ಲಿಂಕ್ ಅಗದಿದ್ದರೆ “Inactive” ಎಂದು ತೋರಿಸುತ್ತದೆ. ಇದರ ಜೊತೆಗೆ ಯಾವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್ ಅಗಿದೆ ಎನ್ನುವ ಮಾಹಿತಿಯನ್ನು ಸಹ ಕಾಣಬಹುದು.

RELATED ARTICLES
- Advertisment -

Most Popular

Recent Comments