ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ಯುವಕ / ಯುವತಿಯರಿಗೆ ಉಚಿತವಾಗಿ ಜಿಮ್ ಟ್ರೈನರ್(Gym trainer) ಮತ್ತು ನಿರೂಪಣಾ ಮತ್ತು ವಾಚಕರ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್(Free Gym trainer Training) ತರಬೇತಿ ಹಾಗೂ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಕೊನೆಯ ದಿನಾಂಕ ಮುಕ್ತಾಯ ಆಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
ಇದನ್ನೂ ಓದಿ: Labor Marriage scheme- ಕಾರ್ಮಿಕ ಇಲಾಖೆಯಡಿ ಮದುವೆಗೆ ₹60,000 ರೂ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Gym trainer Training Date-ತರಬೇತಿ ನಡೆಯುವ ದಿನಾಂಕ:
ಜಿಮ್ ತರಬೇತಿ ಶಿಬಿರವನ್ನು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 27 ಜನವರಿ 2025 ರಿಂದ 10 ಫೆಬ್ರವರಿ 2025 ರವರೆಗೆ 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.
How Can Apply For Gym Trainer Training-ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು:
ಅರ್ಜಿದಾರರ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಇಲಾಖೆಯಿಂದ ನಿಗದಿಪಡಿಸಿರುವ ವರ್ಗಕ್ಕೆ ಸೇರಿದವರಾಗಿರಬೇಕು.
ತರಬೇತಿ ಪಡೆಯ ಬಯಸುವವರು ಕನಿಷ್ಟ 18 ವರ್ಷ, ಗರಿಷ್ಟ 40 ವರ್ಷ ವಯಸ್ಸಿನೊಳಗಿರಬೇಕು.
ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಇದನ್ನೂ ಓದಿ: Pension Application-60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಮಾಸಿಕ ₹3000 ರೂ ಪಿಂಚಣಿ ಸೌಲಭ್ಯ!

2) ನಿರೂಪಣಾ ಮತ್ತು ವಾಚಕ ತರಬೇತಿ ಶಿಬಿರ:
ನಿರೂಪಣಾ ಮತ್ತು ವಾಚಕ ತರಬೇತಿ ಶಿಬಿರವನ್ನು ಯವನಿಕ ಸಭಾಂಗಣದಲ್ಲಿ ಫೆಬ್ರವರಿ 11 ರಿಂದ 18 ರವೆರೆಗೆ 8 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಕನಿಷ್ಟ 18 ವರ್ಷ, ಗರಿಷ್ಟ 40 ವರ್ಷ ವಯಸ್ಸಿನೊಳಗಿರಬೇಕು. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: Land Documents- ಜಮೀನು ಖರೀದಿ ಹಾಗೂ ಮಾರಾಟ ಮಾಡುವ ಮುನ್ನ ಈ ದಾಖಲೆಗಳು ಸರಿಯಾಗಿರುವುದು ಕಡ್ಡಾಯ!
ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯಿಂದ ನಡೆಯಲಿದ್ದು, ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಲಘು ಉಪಹಾರ ಒದಗಿಸಲಾಗುವುದು. ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು. ಹೊರ ಜಿಲ್ಲೆಗಳಿಂದ ಭಾಗವಹಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಜನ್ಮ ದಿನಾಂಕಗಳ ದಾಖಲೆಗಳೊಂದಿಗೆ ಉಪನಿರ್ದೇಶಕರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶಾಖೆ, ಕೇಂದ್ರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಇಲಾಖೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Department of Excise-ಅಬಕಾರಿ ಇಲಾಖೆಯಲ್ಲಿನ ವರ್ಗಾವಣೆಗೆ ನೂತನ ನಿಯಮ: ಸಚಿವ ಆರ್.ಬಿ.ತಿಮ್ಮಾಪೂರ!
Documents-ಅಗತ್ಯ ದಾಖಲಾತಿಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar
2) ಜಾತಿ ಪ್ರಮಾಣ ಪತ್ರ/Caste Certificate
3) ವಿದ್ಯಾರ್ಹತೆ ಪ್ರಮಾಣ ಪತ್ರ/Education Certificate
4) ಮೊಬೈಲ್ ನಂಬರ್/Mobile Number
ಇದನ್ನೂ ಓದಿ: Ration Card e-KYC: ರೇಶನ್ ಕಾರ್ಡ್ ಇ-ಕೆವೈಸಿ ಮಾಡಲು ಇನ್ನೂ12 ದಿನ ಮಾತ್ರ ಬಾಕಿ!
ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ(Helpline) 155265 ಅಥವಾ ಮೊಬೈಲ್ ಸಂಖ್ಯೆ 9731251411 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಸ್‍ಸಿಎಸ್‍ಪಿ-ಟಿಎಸ್‍ಪಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.