ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ(Pradhan Mantri Awas Yojana) ಸ್ವಂತ ಮನೆ ಕಟ್ಟಲು ₹ 2.50 ಲಕ್ಷ ಸಹಾಯಧನವನ್ನು ಪಡೆದುಕೊಳ್ಳಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ 1 ಕೋಟಿ ನಗರ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ (Home loan schems) ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮೂಲಕ ನಗರ ಪ್ರದೇಶಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ಆರ್ಥಿಕ ನೆರವು ನೀಡಲಾಗುವುದು. ಈ ಯೋಜನೆಯನ್ನು ಸೆಪ್ಟೆಂಬರ್ 1, 2024 ರಿಂದ ಮುಂದಿನ 5 ವರ್ಷಗಳಲ್ಲಿ ಅಂದರೆ 2029 ರ ವರೆಗೆ ಈ ಯೋಜನೆಯು ಜಾರಿಗೆ ಬರಲಿದೆ.
ಇದನ್ನೂ ಓದಿ: E Khata-ಸರ್ಕಾರದಿಂದ ಮನೆ ಬಾಗಿಲಿಗೆ ಇ-ಖಾತಾ ವಿತರಿಸುವ ಯೋಜನೆ ಜಾರಿ!
ಪ್ರಸ್ತುತ ಈ ಅಂಕಣದಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ವಿಧಾನ? ಅದಕ್ಕೆ ಸಂಭದಿಸಿದ ದಾಖಲಾತಿಗಳೇನು? ಇನ್ನಿತರ ಹೆಚ್ಚಿನ ಸಂಪೂಣ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Who can apply for PMAY 2.0-ಅರ್ಜಿ ಸಲ್ಲಿಸಲು ಅರ್ಹರು:
- ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು
- ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ಸರ್ಕಾರದಿಂದ ಮನೆ ಪಡೆದಿರಬಾರದು.
- ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರು ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.
- ಈಗಾಗಲೇ ಸ್ವಂತ ಮನೆಯನ್ನು ಹೊಂದಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಬರುವುದಿಲ್ಲ.
- ವಿಧವೆಯರು, ಒಂಟಿ ಮಹಿಳೆಯರು, ವಿಕಲಾಂಗರು, ಹಿರಿಯ ನಾಗರಿಕರು, ಟ್ರಾನ್ಸ್‌ಜೆಂಡರ್‌ಗಳು, SC/ST ಸಮುದಾಯಗಳು, ದಿನಗೂಲಿಗಳು, ಬೀದಿ ವ್ಯಾಪಾರಿಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಇದನ್ನೂ ಓದಿ: Scholorship Application-ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!
- ಕುಟುಂಬದ ವಾರ್ಷಿಕ ಆದಾಯವು:
1) ಆರ್ಥಿಕವಾಗಿ ದುರ್ಬಲರಿಗೆ(Economically Weaker Section) ವಾರ್ಷಿಕ ಆದಾಯವು ₹3 ಲಕ್ಷ ಇರಬೇಕು.
2) ಕಡಿಮೆ ಆದಾಯದ ಕುಟುಂಬದವರಿಗೆ(Low-Income Group) ವಾರ್ಷಿಕ ಆದಾಯ ₹3 ಲಕ್ಷದಿಂದ ₹6 ಲಕ್ಷದವರೆಗೆ ಇರಬೇಕು.
3) ಮಧ್ಯಮ ವರ್ಗ ಕುಟುಂಬದವರಿಗೆ(Middle-Income Group) ವಾರ್ಷಿಕ ಆದಾಯ ₹6 ಲಕ್ಷದಿಂದ ₹9 ಲಕ್ಷ ಇರಬೇಕು.
Required Documents-ಅರ್ಜಿ ಸಲ್ಲಿಸಲು ದಾಖಲೆಗಳು?
- ಅರ್ಜಿದಾರರ ಆಧಾರ್ ಕಾರ್ಡ/Aadhar Card
- ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
- ಜಾತಿ ಪ್ರಮಾಣ ಪತ್ರ/Caste Certificate
- ಆದಾಯ ಪ್ರಮಾಣ ಪತ್ರ/Income Certificate
- ಪೋಟೋ/Photo
- ಮೊಬೈಲ್ ನಂಬರ್/Mobile Number
ಇದನ್ನೂ ಓದಿ: Free Fodder cutter-ಪಶುಪಾಲನಾ ಇಲಾಖೆಯಿಂದ ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ!
PMAY 2.0 Application-ಅರ್ಜಿಯನ್ನು ಸಲ್ಲಿಸುವ ವಿಧಾನ?
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (PMAY) ಪ್ರಯೋಜನ ಪಡೆಯಲು ಎರಡು ವಿಧಾನದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
- ಅರ್ಜಿದಾರ ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್ (Grama One)/ಸಿಎಸ್‌ಸಿ ಕೇಂದ್ರ (CSC Centre)/ಸ್ಥಾನೀಯ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ಮಾಡಿ ಅಧಿಕಾರಿಗಳ ಸಹಾಯದಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
- ಅರ್ಜಿದಾರ ಅಭ್ಯರ್ಥಿಗಳು ನೇರವಾಗಿ PMAY 2.0 ಯೋಜನೆಯ ಅಧಿಕೃತ ಜಾಲತಾಣವನ್ನು (https://pmaymis.gov.in) ಭೇಟಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: NLM Yojana-ಕೋಳಿ ಕುರಿ ಮೇಕೆ ಸಾಕಾಣಿಕೆಗೆ ಜಾನುವಾರು ಮಿಷನ್ ಯೋಜನೆಯಡಿ ₹25.00 ಲಕ್ಷ ಸಬ್ಸಿಡಿ!
Online Apply Method- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
Step-1: ಮೊದಲು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಪಿಎಂ ಆವಾಸ್ 2.0 ಯೋಜನೆಯ ತಂತ್ರಾಂಶವನ್ನು ಭೇಟಿ ಮಾಡಬೇಕು.
ಇದನ್ನೂ ಓದಿ: Bele Vime-ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಇದನ್ನೂ ಓದಿ: Uchita Holige Yantra-ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇನ್ನು 2 ದಿನ ಬಾಕಿ!
Step-2: ತದನಂತರ ಈ ಪೇಜ್ ನಲ್ಲಿ “APPLY PMAY-U 2.0” ಬಟನ್ ಮೇಲೆ ಕ್ಲಿಕ್ ಮಾಡಿ “CLICK TO PROCEED” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ “PROCEED” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-3: ನಂತರ ನಿಮ್ಮ ರಾಜ್ಯ/State, ಮತ್ತು ಅರ್ಜಿದಾರರ ವಾರ್ಷಿಕ ಆದಾಯ ವನ್ನು ನಮೂದಿಸಿ ನಂತರ “Select Mission Component” ಆಯ್ಕೆ ಮಾಡಿಕೊಂಡು ಇಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಗಳಿಗೆ ಟಿಕ್ ಮಾಡಿ ಕೇಳಗೆ ಕಾಣವ “ELIGIBLITY CHECK” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4: ಬಳಿಕ ಅದೇ ಪೇಜ್ ನಲ್ಲಿ ಅರ್ಜಿದಾರರ Aadhar Card Number ಹಾಗೂ ಆಧಾರ್ ನಲ್ಲಿರುವಂತೆ ಹೆಸರನ್ನು ಹಾಕಿ “Generare OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಯನ್ನು ನಮೂದಿಸಿ ಇಲ್ಲಿ ಕೇಳುವ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: Karmika Card-ಕಾರ್ಮಿಕ ಮಂಡಳಿಯಿಂದ ಪ್ರತಿ ತಿಂಗಳಿಗೆ ರೂ ₹2000/- ಪಿಂಚಣಿ!
For More Information- ಅರ್ಜಿದಾರರು ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಲು Click Here ಬಟನ್ ಮೇಲೆ ಕ್ಲಿಕ್ ಮಾಡಬೇಕು.