2025-2026 ನೇ ಸಾಲಿನ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ವತಿಯಿಂದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್(IDFC First Bank Engineeringn Scholarship)ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ಎಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಇಂದಿನ ದಿನಗಳಲ್ಲಿ ಶಿಕ್ಷಣವು ಪ್ರತಿಯೊಬ್ಬರ ಹಕ್ಕು. ಆದರೆ, ಆರ್ಥಿಕ ಹಿನ್ನಲೆಯ ಕೊರತೆಯಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ, ಇಂತಹ ಸಂದರ್ಭದಲ್ಲಿ ಈ ವಿದ್ಯಾರ್ಥಿವೇತನ (Scholarship) ಒಂದು ಪ್ರಮುಖ ಆರ್ಥಿಕ ಸಹಾಯವಾಗಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯಕಾರಿಯಾಗಿದೆ.
ಇದನ್ನೂ ಓದಿ: Solar Power Subsidy-ಸೋಲಾರ್ ಪವರ್ ಜನರೇಟರ್ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
ಪ್ರಸ್ತುತ ಇಂದಿನ ಈ ಲೇಖನದಲ್ಲಿ IDFC First Bank Engineeringn Scholarship ಅನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Last Date For Application-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025
Scholorship Amount-ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?
ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ವಿದ್ಯಾರ್ಥಿವೇತನದ ಅಡಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.
ಇದನ್ನೂ ಓದಿ: Godown Subsidy Scheme-ಕೃಷಿಕರಿಗೆ ಸಿಹಿ ಸುದ್ದಿ!ಗೋಡೌನ್ ನಿರ್ಮಾಣಕ್ಕೆ ಶೇ 33% ಸಹಾಯಧನ ಪಡೆಯಲು ಅರ್ಜಿ!
IDFC First Bank-ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಬಗ್ಗೆ ಮಾಹಿತಿ:
ಐಡಿಎಫ್‌ಸಿ ಬ್ಯಾಂಕ್ ಮತ್ತು ಕ್ಯಾಪಿಟಲ್ ಫಸ್ಟ್ ವಿಲೀನಗೊಂಡ ನಂತರ, ಡಿಸೆಂಬರ್ 2018ರಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಸ್ಥಾಪನೆಯಾಯಿತು. ಈ ಬ್ಯಾಂಕ್ ವ್ಯಕ್ತಿಗಳು, ಸಣ್ಣ ವ್ಯವಹಾರಗಳು ಹಾಗೂ ನಿಗಮಗಳಿಗೆ ವಿವಿಧ ರೀತಿಯ ಹಣಕಾಸು ಸೇವೆಗಳು ಮತ್ತು ಪರಿಹಾರಗಳನ್ನು ಒದಗಿಸುತ್ತದೆ. ದೇಶವ್ಯಾಪಿ ತನ್ನ ಅಸ್ತಿತ್ವವನ್ನು ಹೊಂದಿರುವ ಈ ಬ್ಯಾಂಕ್, ಚಿಲ್ಲರೆ, ಸಗಟು ಹಾಗೂ ಇತರ ಬ್ಯಾಂಕಿಂಗ್ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಈ ಬ್ಯಾಂಕ್ ತನ್ನ 2025-29ರ ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ (CSR) ಯೋಜನೆಯ ಅಂಗವಾಗಿ ಅನುಷ್ಠಾನಗೊಳಿಸುತ್ತಿದೆ.
Who Can Apply For This Scholorship-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
ವಿದ್ಯಾರ್ಥಿಯು ಭಾರತೀಯ ಖಾಯಂ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯು ಬಿ.ಟೆಕ್ ಅಥವಾ ಬಿಇ ವ್ಯಾಸಂಗಕ್ಕೆ ಮೊದಲ ವರ್ಷಕ್ಕೆ 2025-26 ನೇ ಸಾಲಿನಲ್ಲಿ ಪ್ರವೇಶ ಪಡೆದಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕಿಂತ ಒಳಗಿರಬೇಕು.
ವಿದ್ಯಾರ್ಥಿಗಳು ತಮ್ಮ ಎಂಜಿನಿಯರಿಂಗ್ ಕೋರ್ಸ್‌ಗೆ ಬೇರೆ ಯಾವುದೇ ವಿದ್ಯಾರ್ಥಿವೇತನ ಅಥವಾ ಬೋಧನಾ ಶುಲ್ಕ ವಿನಾಯಿತಿ ಪಡೆಯಬಾರದು.
IDFC FIRST ಬ್ಯಾಂಕ್ ಅಥವಾ Buddy4Study ಯ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಇದನ್ನೂ ಓದಿ: Scholorship Application-DXC ಟೆಕ್ನಾಲಜಿಯ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
What Are The Documents Required-ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳು?
ಅರ್ಜಿದಾರರ ವಿದ್ಯಾರ್ಥಿಯು ಈ ಕೆಳಕಂಡ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.
- ಜನನ ಪ್ರಮಾಣಪತ್ರ.
- ಪ್ರವೇಶ ಪುರಾವೆ (ಸಂಸ್ಥೆಯ ಹೆಸರು, ಪ್ರವೇಶ ವರ್ಷ ಮತ್ತು ಬ್ಯಾಚ್ ಸೇರಿದಂತೆ).
- ಶುಲ್ಕ ರಶೀದಿಯ ಪ್ರತಿ.
- ಅಂಗವೈಕಲ್ಯ ಪ್ರಮಾಣಪತ್ರ (ಅಗತ್ಯವಿದ್ದರೆ).
- ಆದಾಯ ಪ್ರಮಾಣ ಪತ್ರ.
- ಸಂಬಂಧಿತ ಸರ್ಕಾರಿ ಪ್ರಾಧಿಕಾರ (ತಹಶೀಲ್ದಾರ್ ಅಥವಾ ಮ್ಯಾಜಿಸ್ಟ್ರೇಟ್) ನೀಡಿದ ಆದಾಯ ಪ್ರಮಾಣಪತ್ರ.
- ಗಳಿಸುವ ಸದಸ್ಯರ ದಾಖಲೆಯ ಸೆಕ್ಷನ್ 143(1) ರ ಅಡಿಯಲ್ಲಿ ಮಾಹಿತಿ.
ಇದನ್ನೂ ಓದಿ: Karmika Card Benefits-ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಪ್ರಯೋಜನ ಪಡೆಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

ಇದನ್ನೂ ಓದಿ: Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ! ಪ್ರತಿ ಕ್ವಿಂಟಾಲ್‌ಗೆ ₹8,110/- ರಂತೆ ಹತ್ತಿ ಖರೀದಿಗೆ ನೋಂದಣಿ ಆರಂಭ!
How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ:
IDFC First Bank ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತ ಇರುವ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗೆ ಅಧಿಕೃತ buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.
Step-1: ಅರ್ಜಿಯನ್ನು ಸಲ್ಲಿಸಲು ಆಸಕ್ತ ಇರುವ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ “Scholarship Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
Step-2: ನಂತರ ಅದೇ ಪೇಜ್ ನಲ್ಲಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ನಂತರ “Create an account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಹಾಕಿ ಬಳಕೆದಾರರ ID ಮತ್ತು Password ಅನ್ನು ರಚನೆ ಮಾಡಿಕೊಂಡು “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.
Step-3: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ಒಪನ್ ಆಗುತ್ತದೆ ಅಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: U-Go Scholarship-ಯು-ಗೋ ವಿದ್ಯಾರ್ಥಿವೇತನ ಅಡಿಯಲ್ಲಿ ₹60,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
ಈ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:
ಅಧಿಕೃತ ವೆಬ್ಸೈಟ್ ಲಿಂಕ್: Click Here