ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-2026(Infosys Foundation Scholarship) ವತಿಯಿಂದ ಪದವಿಪೂರ್ವ ಕೋರ್ಸ್ ಅನ್ನು ಮುಂದುವರಿಸಲು ಅರ್ಹ ವಿದ್ಯಾರ್ಥಿಗಳು 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ(Infosys Scholarship Apply) ಸಹಾಯದವನ್ನು ನೀಡುವುದರ ಉದ್ದೇಶದಿಂದ ವಿದ್ಯಾಭ್ಯಾಸ ಮುಂದುವರೆಸಲು ಹಣದ ಅಡಚಣೆ ಎದುರಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಯೋಜನೆಯು ಬೆಂಬಲವನನ್ನು ನೀಡುತ್ತದೆ.
ಇದನ್ನೂ ಓದಿ: Raman Kant Scholarships-ರಾಮನ್ ಕಾಂತ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!
ಪ್ರಸ್ತುತ ಈ ಅಂಕಣದಲ್ಲಿ ಈ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು? ಅರ್ಜಿಯನ್ನು ಸಲ್ಲಿಸುವ ವಿಧಾನ! ಈ ವೇತನದ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Information About This Scheme: ಇನ್ಫೋಸಿಸ್ ಫೌಂಡೇಶನ್ ಬಗ್ಗೆ ಮಾಹಿತಿ:
ಇನ್ಫೋಸಿಸ್ ಫೌಂಡೇಶನ್ ಸಮಾಜದ ಹಿಂದುಳಿದ ವರ್ಗಗಳ ಉನ್ನತಿಗೆ ಮೀಸಲಾಗಿರುವ ಲಾಭರಹಿತ ಸಂಸ್ಥೆಯಾಗಿದ್ದು ಈ ಯೋಜನೆಯಡಿ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಮತ್ತು ಹೆಚ್ಚು ಸಮಾನ ಮತ್ತು ಅಂತರ್ಗತ ಸಮುದಾಯವನ್ನು ಬೆಳೆಸುವ ಮೂಲಕ ಇನ್ಫೋಸಿಸ್ ಲಿಮಿಟೆಡ್‌ನ ಸಾಮಾಜಿಕ ಜವಾಬ್ದಾರಿ ಬದ್ಧತೆಗಳನ್ನು ಪೂರೈಸುತ್ತದೆ.
ಇದನ್ನೂ ಓದಿ: Property digitization-ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಬೃಹತ್ ಇ-ಖಾತಾ ಆಂದೋಲನ!
Last Date To Apply:ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್ 2025
How Can Apply For This Scheme:ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹತೆ:
ಅರ್ಜಿದಾರ ವಿದ್ಯಾರ್ಥಿಯು ಭಾರತದ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯು 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹8,00,000 ಮೀರಿರಬಾರದು.
ವಿದ್ಯಾರ್ಥಿಗಳು STEM-ಸಂಬಂಧಿತ ಕೋರ್ಸ್‌ಗಳಲ್ಲಿ ಪ್ರತಿಷ್ಠಿತ (NIRF-ಮಾನ್ಯತೆ ಪಡೆದ) ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪದವಿಪೂರ್ವ ಕೋರ್ಸ್‌ಗಳಿಗೆ ದಾಖಲಾಗಿರಬೇಕು. ಅಲ್ಲದೆ, ಎರಡನೇ ವರ್ಷದ ಬಿ.ಆರ್ಕ್ ಅಥವಾ ಐದು ವರ್ಷಗಳ ಇಂಟಿಗ್ರೇಟೆಡ್/ಡ್ಯುಯಲ್ ಪದವಿ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಸರ್ಕಾರಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿನಿಯರು ಸಹ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Airtel Scholarship- ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Subsidy Amount:ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?
ಈ ಯೋಜನಯಡಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಕೋರ್ಸ್‌ನ ಅವಧಿಗೆ ವರ್ಷಕ್ಕೆ ₹1,00,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ:
ವಿದ್ಯಾರ್ಥಿವೇತನವು ಬೋಧನಾ ಶುಲ್ಕಗಳು, ಅಧ್ಯಯನ ಸಾಮಗ್ರಿಗಳು ಮತ್ತು ಜೀವನ ವೆಚ್ಚಗಳನ್ನು ಒಳಗೊಂಡಿರುತ್ತದೆ.
ಈ ವಿದ್ಯಾರ್ಥಿವೇತನ ಬದ್ಧತೆಯು STEM ಕೋರ್ಸ್‌ನ ಗರಿಷ್ಠ ನಾಲ್ಕು ವರ್ಷಗಳವರೆಗೆ ಇರುತ್ತದೆ.
ಇದನ್ನೂ ಓದಿ: Free Diploma Courses-ಉಚಿತವಾಗಿ ಡಿಪ್ಲೋಮಾ ಕೋರ್ಸುಗಳ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!
Documenta:ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್/Aadhar card
- ಸಿಇಟಿ/ನೀಟ್ ಅಂಕಪಟ್ಟಿ/NEET Marks Card
- 12ನೇ ತರಗತಿಯ ಅಂಕಪಟ್ಟಿ/12 Marks Card
- ಆದಾಯ ಪ್ರಮಾಣಪತ್ರ/Income Certificate
- 6 ತಿಂಗಳ ವಿದ್ಯುತ್ ಬಿಲ್/Electric current bill
- ಪ್ರವೇಶದ ಶುಲ್ಕ ರಶೀದಿ/Admission Fee Recept
- ಪೋಟೊ/Photo Copy
- ಮೊಬೈಲ್ ನಂಬರ್/Mobile Number
ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
How To Apply For This Scheme-ಅರ್ಜಿಯನ್ನು ಸಲ್ಲಿಸುವ ವಿಧಾನ:
ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
ಇದನ್ನೂ ಓದಿ: Home Grant Scheme-ಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ!

ಇದನ್ನೂ ಓದಿ: Scholorship Application:1-10 ನೇ ತರಗತಿ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Step-2: ನಂತರ ಅಲ್ಲಿ ಅಧಿಕೃತ ವೆಬ್ಸೈಟ್ ಒಪನ್ ಅಗುತ್ತದೆ. ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು,
Step-3: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ಸಿದ್ದಮಾಡಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.
Step-4: ತದನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: Labour Card-ಕಾರ್ಮಿಕ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
For More Information:ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Read Now