Thursday, February 6, 2025
No menu items!
HomeAgricultureKarnataka weather- ಮಳೆ ಮುನ್ಸೂಚನೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಇಲ್ಲಿದೆ ರಾಜ್ಯದ ಹವಾಮಾನ ವರದಿ!

Karnataka weather- ಮಳೆ ಮುನ್ಸೂಚನೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಇಲ್ಲಿದೆ ರಾಜ್ಯದ ಹವಾಮಾನ ವರದಿ!

ಭಾರತೀಯ ಹವಾಮಾನ ಇಲಾಖೆಯ(Karnataka weather News) ಮುನ್ಸೂಚನೆಯ ಪ್ರಕಾರ ದಕ್ಷಿಣಕನ್ನಡ, ಕೊಡಗು, ಉಡುಪಿ, ಮೈಸೂರು, ದಾವಣಗೆರೆ, ಹಾಸನ, ಮಂಡ್ಯ, ಕೋಲಾರ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಕಲ್ಬುರಗಿ, ಬೆಳಗಾವಿ, ಚಾಗಲಕೋಟೆ, ಬಳ್ಳಾರಿ, ಶಿವಮೊಗ್ಗ, ರಾಮನಗರ, ಚಿಕ್ಕಬಳ್ಳಾಪುರ,

ರಾಯಚೂರು, ವಿಜಯನಗರ, ಕೊಪ್ಪಳ, ಬೀದರ್, ಯಾದಗಿರಿ, ಚಿತ್ರದುರ್ಗ, ಗದಗ, ಹಾವೇರಿ, ಧಾರವಾಡ(IMD) ಮತ್ತು ಉತ್ತರಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಲ್ಪ ಪ್ರಮಾಣ ಮಳೆ ಮತ್ತು ಮೋಡ ಕವಿದ(male munsuchane) ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Gold rate-ಕ್ರ‍ಿಸ್ ಮಸ್ ಗೂ ಮೊದಲೇ ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ಇಂದಿನ ಚಿನ್ನದ ದರ!

Next 5 Days Karnataka Weather-ಮುಂದಿನ 5 ದಿನಗಳ ಮಳೆ ಮುನ್ಸೂಚನೆ ಮಾಹಿತಿ:

ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

Benaglure Weather-ನಾಳೆ(27 ಡಿಸೆಂಬರ್ 2024)ರ ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ವಿವರ:

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ(rain forecast) ಇದ್ದು, ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಸಹ ಇರುತ್ತದೆ.

ಈಗಿನಂತೆ ಡಿಸೆಂಬರ್ 27ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು 28ರಿಂದ ಒಂದೆರಡು ದಿನಗಳ ಕಾಲ ಮೋಡವಿದ್ದರೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಇದನ್ನೂ ಓದಿ: Pmkisan farmers list- ಕಿಸಾನ್ ಸಮ್ಮಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ!

rain forecast

ಮಲೆನಾಡು ಭಾಗದ ಮುನ್ಸೂಚನೆ:

ಕೊಡಗು ಮತ್ತು ಹಾಸನ ಜಿಲ್ಲೆಗಳ ಬಹುತೇಕ ತಾಲ್ಲೂಕುಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇರುತ್ತದೆ.

ಪ್ರಸ್ತುತ ಹವಾಮಾನದಲ್ಲಿನ ಬದಲಾವಣೆಯನ್ವಯ ಡಿಸೆಂಬರ್ 27ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 28ರಿಂದ ಮೋಡ ಹಾಗೂ ಮತ್ತೆರಡು ದಿನಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ: Parihara farmer list-ರೈತರ ಖಾತೆಗೆ ₹297 ಕೋಟಿ ಪರಿಹಾರ! ಹಳ್ಳಿವಾರು ಪಟ್ಟಿ ಬಿಡುಗಡೆ!

ಒಳನಾಡು ಜಿಲ್ಲೆಗಳ ಮುನ್ಸೂಚನೆ:

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.

ಈಗಿನಂತೆ ಡಿಸೆಂಬರ್ 27ರಂದು ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, 28ರಿಂದ ಕಡಿಮೆಯಾಗಿ ಒಂದೆರಡು ದಿನಗಳ ಕಾಲ ಮೋಡ ಮಾತ್ರ ಇರಬಹುದು. ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.

ಇದನ್ನೂ ಓದಿ: Gruhalakshmi Status- ನಿಮ್ಮ ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

male mahiti

ವಾಯುಭಾರ ಕುಸಿತದ ಮಾಹಿತಿ:

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಾಹಿತಿ ಕೃಪೆ: ಸಾಯಿಶೇಖರ್ ಬಿ & KSNDMC, Bengalore

RELATED ARTICLES
- Advertisment -

Most Popular

Recent Comments