ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರಾಜ್ಯದಾದ್ಯಂತ ಇಂದು ಮೋಡ ಕವಿದ ವಾತಾವರಣದೊಂದಿಗೆ(Karnataka weather Forecast) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ(Weather) ಸಾಧಾರಣ ಮಳೆ ಸೂಚಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: PMAY 2.0 Scheme- ಮನೆ ಕಟ್ಟುವ ಆಲೋಚನೆ ಇದ್ದವರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್! ಮನೆಗೆ ನಿರ್ಮಾಣಕ್ಕೆ ₹2.50 ಲಕ್ಷ ಸಹಾಯಧನ!

Karnataka Rain Forecast-28 ಡಿಸೆಂಬರ್ 2024ರ ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಕರ್ನಾಟಕ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಕರಾವಳಿ ಜಿಲ್ಲೆಗಳ ಮಳೆ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಇದನ್ನೂ ಓದಿ: Gold rate-ಕ್ರಿಸ್ ಮಸ್ ಗೂ ಮೊದಲೇ ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ಇಂದಿನ ಚಿನ್ನದ ದರ!

ಮಲೆನಾಡು ವ್ಯಾಪ್ತಿಯ ಮುನ್ಸೂಚನೆ:
ಕೊಡಗು ಸಂಜೆ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸೂಚನೆಗಳಿವೆ.
ಇದನ್ನೂ ಓದಿ: Pmkisan farmers list- ಕಿಸಾನ್ ಸಮ್ಮಾನ್ ಯೋಜನೆಯಡಿ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ!

ಒಳನಾಡು ಜಿಲ್ಲೆಗಳ ಮುನ್ಸೂಚನೆ:
ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಸಂಜೆ ಹಾಗೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಈಗಾಗಲೇ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಇದನ್ನೂ ಓದಿ: Parihara farmer list-ರೈತರ ಖಾತೆಗೆ ₹297 ಕೋಟಿ ಪರಿಹಾರ! ಹಳ್ಳಿವಾರು ಪಟ್ಟಿ ಬಿಡುಗಡೆ!
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 28ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿದ್ದು, ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಾಹಿತಿ ಕೃಪೆ: ಸಾಯಿಶೇಖರ್ ಬಿ & KSNDC, Bengalure