Tuesday, March 11, 2025
No menu items!
HomeAgricultureKrushi Honda - ಶೇ 80% ರಷ್ಟು ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

Krushi Honda – ಶೇ 80% ರಷ್ಟು ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಇಲಾಖೆಯ ವತಿಯಿಂದ ಶೇ 80% ರಿಂದ ಶೇ 90% ಸಹಾಯಧನದಲ್ಲಿ ಕೃಷಿ ಹೊಂಡವನ್ನು(Krishi Honda) ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಏನಿದು ಕೃಷಿ ಹೊಂಡ? “ಕೃಷಿ ಹೊಂಡ” ಇದು ರೈತರ ಕೃಷಿಗೆ ಅಗತ್ಯವಿರುವ ನೀರನ್ನು ಶೇಖರಣೆ(Farm Pond Subsidy amount) ಮಾಡಲು ಬಳಸುವ ಒಂದು ಪ್ರಮುಖ ಆಧಾರದ ವಿಧಾನ. ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮತ್ತು ನೀರಿನ ಉಳಿತಾಯ ಹಾಗೂ ರೈತರಿಗೆ ಸಮಯಕ್ಕೆ ಸರಿಯಾದ ನೀರಿನ ಅವಶ್ಯಕತೆಯನ್ನು ಪೂರೈಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: Life Insurance Plan – ₹20 ರೂ ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

ಕೃಷಿ ಹೊಂಡಗಳನ್ನು ಸಾಮಾನ್ಯವಾಗಿ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ(Krishi Bhagya Yojane) ನಿರ್ಮಾಣ ಮಾಡಲಾಗುತ್ತದೆ. ಆದ್ದರಿಂದ ಕೃಷಿ ಹೊಂಡವನ್ನು ಸಬ್ಸಿಡಿಯ ರೂಪದಲ್ಲಿ ನಿರ್ಮಾಣ ಮಾಡಲು ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ನಿರ್ಮಾಣ ಮಾಡಲು ಕಾರಣಗಳೇನು? ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಬಹುದಾದ ಅಳತೆಗಳು(ಮೀಟರ್ ಗಳಲ್ಲಿ):

A) 10 x 10 x 3 ಮೀ
B) 12 x 12 x 3 ಮೀ
C) 15 x 15 x 3 ಮೀ
D) 18 x 18 x 3 ಮೀ
E) 21 x 21 x 3 ಮೀ

krushi honda chart

ಇದನ್ನೂ ಓದಿ: Property Devision- ಪಿತ್ರಾರ್ಜಿತ ಆಸ್ತಿಯ ಮಾರಾಟ ಆಧಾರದ ಮೇಲೆ ಸುಪ್ರೀಂ ಕೋರ್ಟ್ ತೀರ್ಪು!

Farm Pond Subsidy- ಕೃಷಿ ಭಾಗ್ಯ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ:

ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಸಾಮಾನ್ಯ ವರ್ಗಕ್ಕೆ ಸೇರಿದ ಎಲ್ಲಾ ರೈತರಿಗೆ ಶೇ 80% ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಅರ್ಜಿದಾರರಿಗೆ ಶೇ 90% ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

What are the are Benifits-ಈ ಯೋಜನೆಯಡಿ ವದಗುವ ಸವಲತ್ತುಗಳು?

೧) ನೀರು ಸಂಗ್ರಹಾಣ ರಚನೆ (ಕೃಷಿ ಹೊಂಡ)
೨) ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ
೩) ಹೊಂಡದಿಂದ ನೀರು ಎತ್ತಲು ಡಿಸೇಲ್ ಪಂಪ್ ಸೆಟ್
೪) ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ
೫) ಕೃಷಿ ಹೊಂಡದ ಸುತ್ತಲೂ ನೆರಳು ಪರದೆ

ಇದನ್ನೂ ಓದಿ: Annabhagya Scheme- ಜನವರಿ ತಿಂಗಳ ಅನ್ನಭಾಗ್ಯ ಹಣ ನಿಮ್ಮ ಮೊಬೈಲ್ ನಲ್ಲೆ ಚೆಕ್ ಮಾಡುವುದು ಹೇಗೆ!

Who can apply-ಕೃಷಿ ಹೊಂಡ ನಿರ್ಮಾಣ ಮಾಡಲು ಯಾರು ಅರ್ಜಿ ಸಲ್ಲಿಸಬಹುದು?

1) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2) ಕಳೆದ ಹಿಂದಿನ ವರ್ಷಗಳಲ್ಲಿ ಈ ಯೋಜನೆಯಡಿ ಕೃಷಿ ಹೊಂಡವನ್ನು ಸಹಾಯಧನವನ್ನು ಪಡೆದುಕೊಂಡಿರಬಾರದು.
3) ಅರ್ಜಿದಾರರ ಹೆಸರಿನಲ್ಲಿ ಕೃಷಿ ಜಮೀನನ್ನು ಹೊಂದಿರಬೇಕು.
4) ಸಣ್ಣ ಮತ್ತು ಅತೀ ಸಣ್ಣ ರೈತರ ವರ್ಗಕ್ಕೆ ಸೇರಿದವರಾಗಿರಬೇಕು.

Where to apply-ಕೃಷಿ ಹೊಂಡ ನಿರ್ಮಾಣ ಮಾಡಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Ayushman Bharat- ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಆಹ್ವಾನ! ಯಾರೆಲ್ಲಾ ಅರ್ಜಿ ಸಲ್ಲಿಸಬಹುದು!

  • ಅರ್ಜಿಯನ್ನು ಸಲ್ಲಿಸಲು ಎಲ್ಲಾ ದಾಖಲೆಗಳನ್ನು ಸಿದ್ದಮಾಡಿಕೊಂಡು ನಿಮ್ಮ ಜಿಲ್ಲೆಯಲ್ಲಿರುವ ಕೃಷಿ ಇಲಾಖೆಗೆ ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಗ್ರಾಮ ಪಂಚಾಯಿತಿ ಅಥವಾ ತಹಶೀಲ್ದಾರ್ ಕಚೇರಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
  • ಸರ್ಕಾರವು ನಿಗದಿಪಡಿಸಿರುವ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್‍ಗೆ ಭೇಟಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

What are the Documents – ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ದಾಖಲೆಗಳು?

  • ಆಧಾರ್ ಕಾರ್ಡ/Aadhar Card
  • ಬ್ಯಾಂಕ್ ಪಾಸ್ ಬುಕ್/Bank Passbook
  • ಪಹಣಿ/RTC
  • ಪೋಟೋ/Photo copy
  • ರೇಶನ್ ಕಾರ್ಡ/Ration Card
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ Cast & Income Certificate
  • ಮೊಬೈಲ್ ನಂಬರ್/Mobile number

ಇದನ್ನೂ ಓದಿ: Milk Rate- ಭರ್ಜರಿ ಗುಡ್ ನ್ಯೂಸ್! ಹಾಲಿನ ದರ ಹೆಚ್ಚಳ ಮಾಡಿದ KMF!

ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್- CLICK HERE

 

RELATED ARTICLES
- Advertisment -

Most Popular

Recent Comments