ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ವೈಜ್ಞಾನಿಕ ಕುರಿ ಸಾಕಾಣಿಕೆ(Free Sheep Training) ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ.
ಕೃಷಿಯ ಜೊತೆಗೆ ರೈತರು ಕುರಿ, ಕೋಳಿ, ಹೈನುಗಾರಿಕೆಯನ್ನು ಆರಂಭಿಸುವುದರ(Scientific Sheep Rearing) ಮೂಲಕ ಉಪ ಆದಾಯದ ಮೂಲವನ್ನು ಸೃಷ್ಟಿಸಿಕೊಳ್ಳಬಹುದು ಇದ್ದರಿಂದ ರೈತರು ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ.
ಇದನ್ನೂ ಓದಿ: Mohan T Advani Scholorship-ಬ್ಲೂ ಸ್ಟಾರ್ ಫೌಂಡೇಶನ್‌ನ ವತಿಯಿಂದ 1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
ಪ್ರಸ್ತುತ ಈ ಅಂಕಣದಲ್ಲಿ ಉಚಿತ ಕುರಿ ಸಾಕಾಣಿಕೆ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕುರಿ ಸಾಕಾಣಿಕೆ ಮಾಡುಲು ಸಬ್ಸಿಡಿ ಯೋಜನೆಯ ಮಾಹಿತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: PMMVY Yojana-ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ₹11,000 ರೂ ಸಹಾಯಧನ!
Training Interview Date-ನೇರ ಸಂದರ್ಶನ ನಡೆಯುವ ದಿನಾಂಕ:
19 ಜುಲೈ 2025 ರಂದು ಮಂಗಳವಾರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ನೇರ ಸಂದರ್ಶನ ನಡೆಯಲಿದೆ.
Training Center Address-ತರಬೇತಿ ನಡೆಯುವ ಸಂಸ್ಥೆಯ ವಿಳಾಸ:
ಈ ತರಬೇತಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
Location-ತರಬೇತಿ ಕೇಂದ್ರದ ಗೂಗಲ್ ಲೋಕೇಶನ್-Click Here
ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ವ್ಯವಸ್ಥೆ:
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Infosys Foundation Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!
How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಈ Apply Now ಗೂಗಲ್ ಪಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
ಅರ್ಜಿದಾರರಿಗೆ ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Raman Kant Scholarships-ರಾಮನ್ ಕಾಂತ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!

ಇದನ್ನೂ ಓದಿ: Free Diploma Courses-ಉಚಿತವಾಗಿ ಡಿಪ್ಲೋಮಾ ಕೋರ್ಸುಗಳ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!
Poultry farm Subsidy Schemes in Karnataka -ಕೋಳಿ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಸಿಗುತ್ತದೆ?
1) ನರೇಗಾ ಯೋಜನೆಯಡಿ ಕೋಳಿ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದು.
2) ಪಶುಸಂಗೋಪನೆ ಇಲಾಖೆಯಲ್ಲಿ ಸಬ್ಸಿಡಿ ಯೋಜನೆಗಳು ಲಭ್ಯ.
3) ಕೃಷಿ ಪೂರಕ ಪದವಿಯನ್ನು ಪಡೆದಿರುವ ವಿದ್ಯಾರ್ಥಿಗಳು MANAGE ಸಂಸ್ಥೆಯಿಂದ ACABC ಯೋಜನೆಯಡಿ ಸಬ್ಸಿಡಿ ಪಡೆಯಬಹುದು.
4) ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆ(NLM).
5) PMEGP ಯೋಜನೆಯಡಿ ಸಹ ಕೋಳಿ ಸಾಕಾಣಿಕೆ ಸಬ್ಸಿಡಿ ಪಡೆಯಲು ಅವಕಾಶವಿರುತ್ತದೆ.
ಈ ಮೇಲಿನ ಯೋಜನೆಗಳ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಮ್ಮ ತಾಲೂಕಿನ ಪಶು ಸಂಗೋಪನಾ ಇಲಾಖೆ ಕಚೇರಿಯನ್ನು ಭೇಟಿ ಮಾಡಿ.
ಇದನ್ನೂ ಓದಿ: Property digitization-ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಬೃಹತ್ ಇ-ಖಾತಾ ಆಂದೋಲನ!
Documents-ಅವಶ್ಯಕ ದಾಖಲೆಗಳು:
- ಅಭ್ಯರ್ಥಿಯ ಅಧಾರ್ ಕಾರ್ಡ ಪ್ರತಿ/Aadhar.
- ಅಭ್ಯರ್ಥಿಯ ಕುಟುಂಬದ ರೇಶನ್ ಕಾರ್ಡ ಪ್ರತಿ/Ration card.
- ಅಭ್ಯರ್ಥಿಯ 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ/Photo
- ಅಭ್ಯರ್ಥಿಯ ಮೊಬೈಲ್ ನಂಬರ್/Mobile Number.
Poultry farm Subsidy Schemes-ಕುರಿ ಸಾಕಾಣಿಕೆಗೆ ಕರ್ನಾಟಕದಲ್ಲಿ ಯಾವೆಲ್ಲ ಸಬ್ಸಿಡಿ ಯೋಜನೆಗಳಿವೆ?
1) ನರೇಗಾ ಯೋಜನೆಯಡಿ ಕುರಿ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದು.
2) ಪಶುಸಂಗೋಪನೆ ಇಲಾಖೆಯಲ್ಲಿ ಸಬ್ಸಿಡಿ ಯೋಜನೆಗಳು ಲಭ್ಯ.
3) ಕೃಷಿ ಪೂರಕ ಪದವಿಯನ್ನು ಪಡೆದಿರುವ ವಿದ್ಯಾರ್ಥಿಗಳು MANAGE ಸಂಸ್ಥೆಯಿಂದ ACABC ಯೋಜನೆಯಡಿ ಸಬ್ಸಿಡಿ ಪಡೆಯಬಹುದು.
4) ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆ(NLM).
5) PMEGP ಯೋಜನೆಯಡಿ ಸಹ ಕೋಳಿ ಸಾಕಾಣಿಕೆ ಸಬ್ಸಿಡಿ ಪಡೆಯಲು ಅವಕಾಶವಿರುತ್ತದೆ.
ಇದನ್ನೂ ಓದಿ: Airtel Scholarship- ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Contact Detail’s-ಹೆಚ್ಚಿನ ಮಾಹಿತಿ ಪಡೆಯಲು:
ಸಂಪರ್ಕಿಸಿ-9505894247,9591514154,8970446644