Sunday, August 3, 2025
No menu items!
HomeNewsLabour Scholorship-ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholorship-ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕವಾಗಿ ಸಹಾಯವನ್ನು ಮಾಡಲು ಆನ್ಲೈನ್ ಮೂಲಕ ಅರ್ಜಿ ಹಾಕಿ ಸಹಾಯಧನವನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: Constable Recruitment 2025-SSLC & ITI ಪಾಸಾದವರಿಗೆ 3,588 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!

ಪ್ರಸ್ತುತ ಈ ಲೇಖನದಲ್ಲಿ ಕಾರ್ಮಿಕ ಮಂಡಳಿಯ ಅಡಿಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಯೋಜನೆ ಜಾರಿಗೆ ತರರು ಉದ್ದೇಶವೇನು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last Date For Application-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31-10-2025

Scholorship Amount-ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು?

ಪ್ರೌಢ ಶಾಲಾ ವಿದ್ಯಾರ್ಥಿಗಳು: ₹3000

PUC/Diplima/ITI ವಿದ್ಯಾರ್ಥಿಗಳು: ₹4000

ಪದವಿ ವಿದ್ಯಾರ್ಥಿಗಳು: ₹5000

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು: ₹5000

ಇಂಜಿನೀಯರಿಂಗ್ ವಿದ್ಯಾರ್ಥಿಗಳು: ₹10,000

ಇದನ್ನೂ ಓದಿ: Labour Department-ಕಾರ್ಮಿಕ ಇಲಾಖೆಯಡಿ ಕಾರ್ಮಿಕರ ಪರಿಹಾರ ಮೊತ್ತವು 1.5 ಲಕ್ಷಕ್ಕೆ ಏರಿಕೆ!

Who Can Apply For Scholorship-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರರ ಅಭ್ಯರ್ಥಿಯು ಕರ್ನಾಟಕದ ಪ್ರಜೆಯಾಗಿರಬೇಕು.

ಅರ್ಜಿದಾರರ ಅಭ್ಯರ್ಥಿಯು ಕಾರ್ಮಿಕರ ಮಕ್ಕಳಾಗಿರಬೇಕು.

ಅಭ್ಯರ್ಥಿಯು ಕನಿಷ್ಠ ಪ್ರಾಥಮಿಕ ವಿದ್ಯಾಭ್ಯಾಸದಿಂದ ಹಿಡಿದು ಸ್ನಾತಕೋತ್ತರ ಮಟ್ಟದವರೆಗೆ ಇರಬೇಕು.

ಕಟ್ಟಡ ಮತ್ತು ಇತರೆ ನಿರ್ಮಾಣ ಇಲಾಖೆಯ 2025 ನೇ ಮೇ 31ರ ಪೂರ್ವದಲ್ಲಿ ನೊಂದಾಯಿತರಾದ ಕಾರ್ಮಿಕ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿದಾರ ಅಭ್ಯರ್ಥಿಯು ಕಳೆದ ಸಾಲಿನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: PM Surya Ghar Scheme-ಪಿಎಂ ಸೂರ್ಯ ಘರ್ ಯೋಜನೆಯಡಿ ಎಲ್ಲರಿಗೂ ಉಚಿತ ವಿದ್ಯುತ್ ಮತ್ತು ಸಬ್ಸಿಡಿಗೆ ಅರ್ಜಿ!

Required Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಆಧಾರ್ ಕಾರ್ಡ/Aadhar Card

ವ್ಯಾಸಂಗ ಪ್ರಮಾಣ ಪತ್ರ/Education Certificate

ಪೋಷಕರ ಕಾರ್ಮಿಕ ಕಾರ್ಡ ಪ್ರತಿ/Copy of parents’ labor card

ಬ್ಯಾಂಕ್ ಪಾಸ್ ಬುಕ್/Bank Passbook

ಪೋಟೋ/Photocopy

ಮೊಬೈಲ್ ನಂಬರ್/Mobile Number

ಇ-ಮೇಲ್ ಐಡಿ/E mail ID

ಇದನ್ನೂ ಓದಿ: Birth & Death Certificate-ಜನನ & ಮರಣ ಪ್ರಮಾಣ ಪತ್ರ ಪಡೆಯುವುದು ಇನ್ನೂ ಭಾರಿ ಸುಲಭ!

How to Apply-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಕಾರ್ಮಿಕ ಇಲಾಖೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Scholarships-ಹೀರೋ ಗ್ರೂಪ್‌ನಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!

ಇದನ್ನೂ ಓದಿ: Infosys Scholarship-ಇನ್ಫೋಸಿಸ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು 15 ಸೆಪ್ಟೆಂಬರ್ ಕೊನೆಯ ದಿನಾಂಕ!

Step-1: ಮೊದಲು ಈ ಲಿಂಕ್ “Scholarship Application” ಮೇಲೆ ಕ್ಲಿಕ್ ಮಾಡಿ ಅಧಿಕೃತ SSP ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು ಮುಖಪುಟದಲ್ಲಿ ಕಾಣುವ “ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ರಿಜಿಸ್ಟರ್ ಮಾಡಬೇಕು.

Step-3: ಬಳಿಕ ಅಗತ್ಯ ವಿವರವನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ Log In ಆದರೆ ಅಧಿಕೃತ ಅರ್ಜಿ ನಮೂನೆ ಒಪನ್ ಆಹುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: PM Yasasvi Scholarship-ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

More Information-ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಾರ್ಮಿಕ ಮಂಡಳಿಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Read Now

 

 

RELATED ARTICLES
- Advertisment -

Most Popular

Recent Comments