Thursday, August 21, 2025
No menu items!
HomeNewsMobile kitchen Subsidy-ಮೊಬೈಲ್ ಕಿಚನ್ ಪ್ರಾರಂಭಿಸಲು ₹4.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mobile kitchen Subsidy-ಮೊಬೈಲ್ ಕಿಚನ್ ಪ್ರಾರಂಭಿಸಲು ₹4.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಅಭಿವೃದ್ದಿ ಕಲ್ಯಾಣ ಯೋಜನೆಗಳ(Mobile kitchen subsidy)ಉದ್ಯಮಶೀಲತಾ ಅಭಿವೃದ್ದಿ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಮೊಬೈಲ್ ಕಿಚನ್ ಸ್ಥಾಪನೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗದ ಅವಕಾಶಕ್ಕಾಗಿ ಅಲೆಯುತ್ತಿರುವ ಯುವಕ ಹಾಗೂ ಯುವತಿಯರಿಗೆ ಸಿಹಿ ಸುದ್ದಿ! ಸರ್ಕಾರದ(Mobile kitchen loan scheme)ಈ ಯೋಜನೆಯ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಅನ್ನು ಸ್ಥಾಪನೆ ಮಾಡಲು ₹4.0 ಲಕ್ಷ ಸಹಾಯಧನವನ್ನು ಪಡೆದುಕೊಳ್ಳುವ ಅವಕಾಶವಿದ್ದು, ಈ ಯೋಜನೆಯ ಮೂಲಕ ಅಭ್ಯರ್ಥಿಗಳು ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಅವರ ಜೀವನವನ್ನು ಉತ್ತಮ ರೀತಿಯಲ್ಲಿ ಜೀವಿಸಲು ಈ ಯೋಜನೆಯು ಉತ್ತಮ ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಅರ್ಜಿ ಸಲ್ಲಿಸಲು ಒದಗಿಸುವ ಅಗತ್ಯ ದಾಖಲಾತಿಗಳಾವುವು? ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Subsidy Amount Details-ಈ ಯೋಜನೆಯಡಿ ಎಷ್ಟು ಸಹಾಯಧನವನ್ನು ಪಡೆಯಬಹುದು?

ಯೋಜನೆಯಡಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಮೊಬೈಲ್ ಕಿಚನ್ ಅನ್ನು ಆರಂಭ ಮಾಡಲು ಶೇ 75% ಅಥವಾ ಗರಿಷ್ಠ 4 ಲಕ್ಷ ಸಬ್ಸಿಡಿಯನ್ನು ಪಡೆಯಲು ಅವಕಾಶವಿರುತ್ತದೆ.

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10 ಸೆಪ್ಟೆಂಬರ್ 2025

ಇದನ್ನೂ ಓದಿ: Free Health Checkup-ಬಿಪಿಎಲ್ ಕಾರ್ಡದಾರರಿಗೆ ಗುಡ್ ನ್ಯೂಸ್!ರಾಜ್ಯ ಸರ್ಕಾರದಿಂದ ಉಚಿತ ಯೋಜನೆ ಪ್ರಕಟ!

Who Can Apply This Scheme-ಮೊಬೈಲ್ ಕಿಚನ್ ಪ್ರಾರಂಭ ಮಾಡಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಯೋಜನೆಯಡಿ ಅರ್ಜಿಯನು ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಮೊಬೈಲ್ ಕಿಚನ್ ಅನ್ನು ಆರಂಭ ಮಾಡಲು ಈ ಕೆಳಗೆ ತಿಳಿಸಿರುವ ಅರ್ಹತೆಗಳನ್ನು ಹೊಂದಿರಬೇಕು.

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸಬ್ಸಿಡಿಯನ್ನು ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿದಾರರ ಅಥವಾ ಅವರ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿದ್ದರೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Ambedkar Nigam subsidy-ಅಂಬೇಡ್ಕರ್ ನಿಗಮದಿಂದ ತರಕಾರಿ ಮಾರಾಟ ಮಳಿಗೆ ತೆರೆಯಲು ₹50,000 ಸಬ್ಸಿಡಿ!

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ಅರ್ಜಿದಾರರ ಆಧಾರ್ ಕಾರ್ಡ/Aadhar Card

ಅರ್ಜಿದಾರರ ವಾಹನ ಚಾಲನಾ ಪರವಾನಗಿ/Driving Licence

ಅರ್ಜಿದಾರರ ಜಾತಿ ಪ್ರಮಾಣ ಪತ್ರ/Caste Certificate.

ಅರ್ಜಿದಾರರ ಆದಾಯ ಪ್ರಮಾಣ ಪತ್ರ/Income Certificate.

ಅರ್ಜಿದಾರರ ರೇಶನ್ ಕಾರ್ಡ/Ration Card.

ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್/Bank Pass Book.

ಅರ್ಜಿದಾರರ ಪೋಟೋ/Photo.

ಅರ್ಜಿದಾರರ ಮೊಬೈಲ್ ನಂಬರ್/Mobile Number.

ಇದನ್ನೂ ಓದಿ: Sheep farming Subsidy-ಕುರಿ ಸಾಕಾಣಿಕೆಗೆ ಶೇ 50% ಸಬ್ಸಿಡಿ ಪಡೆಯಲು ಅವಕಾಶ!

How To Apply For This Scheme-ಈ ಯೋಜನೆಯಡಿ ಅರ್ಜಿ ಸಲ್ಲಿಸುವ ವಿಧಾನ?

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳುವ ಅರ್ಹ ಫಲಾನುಭವಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Corteva Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ನಡಿ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Step-1: ಮೊದಲಿಗೆ ಈ ಲಿಂಕ್ “Online Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅಲ್ಲಿ ಕಾಣಿಸುವ “ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು ಬಳಿಕ ಅಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ಹಾಕಿ ಮೊಬೈಲ್ ಗೆ ಬರುವ OTP ಅನ್ನು ನಮೂದಿಸಿ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ”Login” ಬಟನ್ ಮೇಲೆ ಒತ್ತಿ ಲಾಗಿನ್ ಆಗಬೇಕು.

Step-3: “Login” ಆದ ನಂತರ ಅರ್ಜಿಯ ಮುಂದಿನ ಹಂತ ಒಪನ್ ಆಗುತ್ತದೆ. ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರಗಳು ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ನಮೂನೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Car Subsidy Application-ವಾಹನ/ಟ್ಯಾಕ್ಸಿ ಖರೀದಿಗೆ ರೂ 4.00 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

More Information-ಈ ಯೋಜನೆಯ ಬಗ್ಗೆ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here
Helpline Number-ಸಹಾಯವಾಣಿ- 9482300400

 

RELATED ARTICLES
- Advertisment -

Most Popular

Recent Comments