ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊಬೈಲ್ (Free Mobile Repair Application) ಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿರುದ್ಯೋಗ ಯುವಕರು ಈ ಉಚಿತ ಮೊಬೈಲ್ ತರಬೇತಿಯನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅವಕಾಶವಿದ್ದು, ಇದಲ್ಲದೆ ಈ ತರಬೇತಿಯಲ್ಲಿ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಅಭ್ಯರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಾಗುತ್ತದೆ.
ಇದನ್ನೂ ಓದಿ: Farm Pond Subsidy- ಶೇ 90% ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ!
ಈ ತರಬೇತಿಯಲ್ಲಿ ಮೊಬೈಲ್ ರಿಪೇರಿ (Mobile Repair) ತಾಂತ್ರಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗಿದ್ದು, ಮತ್ತು ಸ್ವಯಂ ಉದ್ಯೋಗ ಮುನ್ನಡೆಸುವ ಅವಕಾಶವನ್ನು ಕಲ್ಪಿಸಲಾಗುತ್ತಿದ್ದು, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು? ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳೇನು? ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Who Can Apply- ಅರ್ಜಿಯನ್ನು ಯಾರು ಸಲ್ಲಿಸಬಹುದು?
- ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
- ಅಭ್ಯರ್ಥಿಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿದೆ.
- ಬಿ.ಪಿ.ಎಲ್ ಕಾರ್ಡ ಹೊಂದಿರುವ ಅರ್ಜಿದಾರ ಅಭ್ಯರ್ಥಿಗೆ ತರಬೇತಿಯಲ್ಲಿ ಪಾಲ್ಗೊಳಲು ಪ್ರಥಮ ಅದ್ಯತೆ್ಯನ್ನು ನೀಡಲಾಗುತ್ತದೆ.
- ಅಭ್ಯರ್ಥಿಯು ತರಬೇತಿಯನ್ನು ಮುಗಿಸಿದ ನಂತರ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿ ಹೊಂದಿರಬೇಕು.
ಇದನ್ನೂ ಓದಿ: Diploma Textile- ಡಿಪ್ಲೋಮಾ ಟೆಕ್ಸ್‌ಟೈಲ್ ಟೆಕ್ನಾಲಜಿ ಕೋರ್ಸ್‌ಗೆ ಅರ್ಜಿ ಆಹ್ವಾನ!

ವಸತಿ ಮತ್ತು ಊಟ ಸಂಪೂರ್ಣ ಉಚಿತ:
ಮೊಬೈಲ್ ರಿಪೇರಿ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಜೊತೆಗೆ, ತರಬೇತಿಯಲ್ಲಿ ಭಾಗವಹಿಸುವವರಿಗೆ ವಸತಿ ಮತ್ತು ಊಟ ವ್ಯವಸ್ಥೆಯೂ ಉಚಿತವಾಗಿದೆ.
How to apply- ಅರ್ಜಿಯನ್ನು ಸಲ್ಲಿಸುವ ವಿಧಾನ?
ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
ತರಬೇತಿಯ ಆರಂಭದ ದಿನದಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಬೇಕು.
ಇದನ್ನೂ ಓದಿ: GKVK Bengaluru-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ 59 ನೇ ಘಟಿಕೋತ್ಸವ!13 ಚಿನ್ನದ ಪದಕ ಪಡೆದ ದೀಪ್ತಿ!
Training Period: ತರಬೇತಿಯ ಅವಧಿ:
ಉಚಿತ ಮೊಬೈಲ್ ರಿಪೇರಿ ತರಬೇತಿಯು 30 ದಿನಗಳ ಕಾಲ ನಡೆಸಲಿದ್ದು ಈ ತರಬೇತಿಯಲ್ಲಿ ಮೊಬೈಲ್ ರಿಪೇರಿಯ ಸಂಪೂರ್ಣ ಮಾಹಿತಿಯ ಜೊತೆಗೆ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸುವುದರ ಕುರಿತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ತರಬೇತಿಯು ಜೂನ್-2025 ತಿಂಗಳಲ್ಲಿ ಪ್ರಾರಂಭವಾಗಲಿದೆ.
What are the Documents- ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ಅಭ್ಯರ್ಥಿಯ ಅಧಾರ್ ಕಾರ್ಡ/ Aadhar card
- ಅಭ್ಯರ್ಥಿಯ ರೇಶನ್ ಕಾರ್ಡ/ Ration card
- ಅಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್/ Bank passbook
- ಅಭ್ಯರ್ಥಿಯ ಮೊಬೈಲ್ ನಂಬರ್/ Mobile number
ತರಬೇತಿಯನ್ನು ನೀಡುವ ಕೇಂದ್ರದ ವಿಳಾಸ:
ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ, ಹಾವೇರಿ ಜಿಲ್ಲೆ.
ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು: 8660219375