Thursday, August 21, 2025
No menu items!
HomeNewsMuskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಪ್ರೌಢ ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಮುಸ್ಕಾನ್ ವಿದ್ಯಾರ್ಥಿವೇತನ (Muskaan Scholarship) ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-2026 ನೇ ಸಾಲಿನ ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮವು ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ ವಾಣಿಜ್ಯ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) ವರ್ಗಕ್ಕೆ ಸೇರಿದ ಮಕ್ಕಳಿಗೆ ಶೈಕ್ಷಣಿಕ ಬೆಂಬಲವನ್ನು ಒದಗಿಸಲು ಮತ್ತು ಅವರ ಶಿಕ್ಷಣದಲ್ಲಿ ನಿರಂತರತೆಯನ್ನು ಮುಂದುವರಿಸಲು ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Free Health Checkup-ಬಿಪಿಎಲ್ ಕಾರ್ಡದಾರರಿಗೆ ಗುಡ್ ನ್ಯೂಸ್!ರಾಜ್ಯ ಸರ್ಕಾರದಿಂದ ಉಚಿತ ಯೋಜನೆ ಪ್ರಕಟ!

ಈ ವಿದ್ಯಾರ್ಥಿವೇತನ ಕಾರ್ಯಕ್ರಮವು ಭಾರತದ ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ ಪ್ರೌಢ ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು 12,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇಂದಿನ ಈ ಅಂಕಣದಲ್ಲಿ ಈ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸಲು ಯಾವ ಹಂತಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳಾವುವು? ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Ambedkar Nigam subsidy-ಅಂಬೇಡ್ಕರ್ ನಿಗಮದಿಂದ ತರಕಾರಿ ಮಾರಾಟ ಮಳಿಗೆ ತೆರೆಯಲು ₹50,000 ಸಬ್ಸಿಡಿ!

Who Can Apply -ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.

ಭಾರತದ ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳ (ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಬಿಹಾರ, ಪುದುಚೇರಿ, ಛತ್ತೀಸ್‌ಗಢ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಕರ್ನಾಟಕ, ಮೇಘಾಲಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿವೇತನವು ವಾಣಿಜ್ಯ ಚಾಲಕರ ಮಕ್ಕಳು (LMV/HMV),ಯಂತ್ರಶಾಸ್ತ್ರದ ಮಕ್ಕಳು,ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವು ಉಚಿತವಾಗಿದೆ.

ವಿದ್ಯಾರ್ಥಿಯು ಕಳೆದ ವರ್ಷದ ತರಗತಿಯಲ್ಲಿ ಶೇ 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು.

ಇದನ್ನೂ ಓದಿ: Sheep farming Subsidy-ಕುರಿ ಸಾಕಾಣಿಕೆಗೆ ಶೇ 50% ಸಬ್ಸಿಡಿ ಪಡೆಯಲು ಅವಕಾಶ!

Last Date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025

What Are The Documents-ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು?

ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar card

ಪ್ರಸ್ತುತ ವರ್ಷದ ಪ್ರವೇಶ ಶುಲ್ಕ ರಶೀದಿ/Admission Fee recept

ಕಳೆದ ವರ್ಷದ ಅಂಕಪಟ್ಟಿ/Marks card

ಆದಾಯ ಪ್ರಮಾಣ ಪತ್ರ/Income Certificate

ಆದಾಯ ತೆರಿಗೆ ರಿಟರ್ನ್/ITR

ಬ್ಯಾಂಕ್ ಖಾತೆ ಪುಸ್ತಕ/Bank Passbook

ಪೋಟೊ/Photocopy

ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Corteva Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ನಡಿ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

How To Apply Online Application–ಅರ್ಜಿಯನ್ನು ಸಲ್ಲಿಸುವ ವಿಧಾನ ಈ ಕೆಳಗಿನಂತಿವೆ:

ಈ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯುವ ಅರ್ಹ ಅಭ್ಯರ್ಥಿಗಳು ಅಧಿಕೃತ www.buddy4study.com ವೆಬ್ಸೈಟ್ ಗೆ ಭೇಟಿ ಮಾಡಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಿದೆ.

Step-1: ಮೊದಲಿಗೆ ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ ಅಲ್ಲಿ ಅಧಿಕೃತ ವೆಬ್ಸೈಟ್ ಒಪನ್ ಆಗುತ್ತದೆ. ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Car Subsidy Application-ವಾಹನ/ಟ್ಯಾಕ್ಸಿ ಖರೀದಿಗೆ ರೂ 4.00 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Step-3: ಬಳಿಕ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚನೆ ಮಾಡಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

Step-4: ನಂತರ ಅರ್ಜಿ ನಮೂನೆ ಒಪನ್ ಆಗುತ್ತದೆ. ತದನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿ ವಿವರಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Scholorship Application-SSLC-PUC ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಈಗಲೇ ಅರ್ಜಿ ಹಾಕಿ!

More Information-ಈ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Read Now

 

RELATED ARTICLES
- Advertisment -

Most Popular

Recent Comments