2025-2026 ನೇ ಸಾಲಿನ B.Sc NURSING ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ(Scholarship for Nursing Students) ಕರ್ನಾಟಕ ರಾಜ್ಯದ ಅರ್ಹ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ(Government Nursing Stipend) ಉಚಿತ ಶಿಕ್ಷಣದ ಜೊತೆ ಆರ್ಥಿಕ ಸಹಾಯಕ್ಕೆ ಅತ್ಯಂತ ಸಹಾಯಕಾರಿಯಾಗಿದೆ. ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನರ್ಸಿಂಗ್ ಕೋರ್ಸ್ನ್ನು ಯಶಸ್ವಿಯಾಗಿ ಮುಂದುವರಿಸಲು ನೆರವಾಗುತ್ತದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಈ ವಿದ್ಯಾರ್ಥಿವೇತನಗಳನ್ನು ಒದಗಿಸುವ ಮೂಲಕ ಯುವ ನರ್ಸಿಂಗ್ ವಿದ್ಯಾರ್ಥಿಗಳಿಗೆ ಭವಿಷ್ಯದ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತವೆ.
ಇದನ್ನೂ ಓದಿ: IDFC Bank Scholarship-ಐಡಿಎಫ್ಸಿ ಬ್ಯಾಂಕ್ ನಿಂದ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ!
ಈ ವಿದ್ಯಾರ್ಥಿವೇತನಗಳು ವಿದ್ಯಾರ್ಥಿಗಳಿಗೆ ಕೇವಲ ಆರ್ಥಿಕ ಸಹಾಯವನ್ನು ಮಾಡುವುದಲ್ಲದೆ, ಅವರ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಒಂದು ದಾರಿಯನ್ನೂ ಸಹ ಮಾಡಿದ್ದು, ಈ ಪ್ರಯೊಜನವನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು? ಅರ್ಜಿಯನ್ನು ಸಲ್ಲಿಸುವ ವಿಧಾನ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇನ್ನು ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Important Dates-ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 13.06.2025
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30.09.2025
ಇದನ್ನೂ ಓದಿ: Mobile Canteen Scheme-₹5 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟಿನ್ ತೆರೆಯಲು ಅರ್ಜಿ!
Who Can Apply-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
1) ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2) ವಿದ್ಯಾರ್ಥಿಯು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ, ಜನಾಂಗಕ್ಕೆ ಸೇರಿದವರಾಗಿರಬೇಕು.
3) ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷ ಮೀರಿರಬಾರದು.
4) ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Girl child scheme-18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1.50 ಲಕ್ಷ ಸಹಾಯಧನ!
5) ವಿದ್ಯಾರ್ಥಿಯು ಕಳೆದ ವರ್ಷ ಕನಿಷ್ಟ 50% ಕಿಂತ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳ ಅರ್ಜಿಯನ್ನು ಸಹ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.
6) ವಿದ್ಯಾರ್ಥಿಗಳು ಸದರಿ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸತಕ್ಕದ್ದು.
7) ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸೊಕೊಳ್ಳತಕ್ಕದ್ದು.
ಇದನ್ನೂ ಓದಿ: Fasal Bhima Yojane-ಬೆಳೆ ವಿಮೆ ನೊಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ!
Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar card
- ವಿದ್ಯಾರ್ಥಿಯ SSLC ಹಾಗೂ PUC ಅಂಕ ಪಟ್ಟಿ/Marks card
- ನರ್ಸಿಂಗ್ ಕೋರ್ಸ್ನ ಫೀಸ್ ರಸೀದಿ/fee receipt
- ಜಾತಿ ಪ್ರಮಾಣ ಪತ್ರ/Cast Certificate
- ಆದಾಯ ಪ್ರಮಾಣ ಪತ್ರ/Income Certificate
- ನಿವಾಸ ಪ್ರಮಾಣ ಪತ್ರ/Residence certificate
- ಬ್ಯಾಂಕ್ ಪಾಸ್ ಬುಕ್/Bank passbook
- ಮೊಬೈಲ್ ನಂಬರ್/Mobile number
How To Apply-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ “Click Here” ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
Step-2: ನಂತರ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು ಈ ಪೇಜ್ ನಲ್ಲಿ ಕಾಣುವ “Register Here” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಐಡಿಯನ್ನು ರಚಿಸಿಕೊಳ್ಳಬೇಕು. ನಂತರ ಅರ್ಜಿದಾರರ ಐಡಿ ಮತು OTP ಅನ್ನು ನಮೂದಿಸಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
Step-3: ತದನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಅಗತ್ಯ ವಿರುವ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಮುಕ್ತಾಯಗೊಳ್ಳುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Read Now