Sunday, June 22, 2025
No menu items!
HomeWeatherBangalore Rain Forecast-ರಾಜ್ಯದ ಮಳೆ ಮುನ್ಸೂಚನೆ! 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

Bangalore Rain Forecast-ರಾಜ್ಯದ ಮಳೆ ಮುನ್ಸೂಚನೆ! 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಕರ್ನಾಟಕ ಮಳೆ ಪ್ರಮಾಣ(Rain Forecast) ನಕ್ಷೆಯ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯಲ್ಲಿ ಅತ್ಯಧಿಕ 124.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಧ್ಯಮದಿಂದ ಸಾಧಾರಣ ಮಳೆ ದಾಖಲಾಗಿರುತ್ತದೆ ಎಂದು ಸೂಚಿಸಲಾಗಿದೆ.

ಪ್ರಸ್ತುತ ಈ ಅಂಕಣದಲ್ಲಿ ಕರ್ನಾಟಕ ರಾಜ್ಯದ ಮಳೆ ಮುನ್ಸೂಚನೆ(Male mahiti) ಮತ್ತು ಮುಂಗಾರು ಮಳೆ ಮಾಹಿತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: Mobile Repair Training- 30 ದಿನದ ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ!

Male mahiti-23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಭಾರತೀಯ ಹವಾಮಾನ ಇಲಾಖೆ (IMD)ಯ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಒಟ್ಟು 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು ಮೇ 17 ರಿಂದ ಮೇ 22ರವರೆಗೆ ರಾಜ್ಯದ 23 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಬೆಂಗಳೂರು, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ತಾಪುರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಮತ್ತು ರಾಯಚೂರು ಸೇರಿವೆ.

Karnataka Monsoon Update-5 ದಿನ ಮುಂಚಿತವಾಗಿ ಮುಂಗಾರು ಪ್ರವೇಶ:

ಭಾರತೀಯ ಹವಾಮಾನ ಇಲಾಖೆ (IMD)ಯ ಮುನ್ಸೂಚನೆಯ ಮಾಹಿತಿಯ ಪ್ರಕಾರ ರಾಜ್ಯಕ್ಕೆ 5 ದಿನ ಮುಂಚಿತವಾಗಿ ಮುಂಗಾರು ಮಳೆ ಪ್ರವೇಶ ಪಡೆಯಲಿದೆ ಎಂದು ಮುನ್ಸೂಚನೆಯನ್ನು ನೀಡಿದ್ದು, ಮೇ 27 ಕ್ಕೆ ಕೇರಳ ರಾಜ್ಯಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶ ಪಡೆಯಲಿದ್ದು ಇದರ ಆಧಾರದಲ್ಲಿ 5 ದಿನ ಮುಂಚಿತವಾಗಿ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 16 ವರ್ಷದ ನಂತರ ಈ ರೀತಿ ಮತ್ತೆ ಮರುಕಳಿಸುತ್ತಿದೆ ಎಂದು ಹವಾಮಾನ ಮುನ್ಸೂಚನೆ ವಿಶ್ಲೇಷಕರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Farm Pond Subsidy- ಶೇ 90% ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ!

Karnataka rain alert-ಪ್ರದೇಶವಾರು ಹವಾಮಾನ ಮುನ್ಸೂಚನೆ:

ಕರಾವಳಿ ಜಿಲ್ಲೆಗಳಲ್ಲಿ:

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು ಜಿಲ್ಲೆಗಳಲ್ಲಿ:

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಇದನ್ನೂ ಓದಿ: Diploma Textile- ಡಿಪ್ಲೋಮಾ ಟೆಕ್ಸ್‌ಟೈಲ್ ಟೆಕ್ನಾಲಜಿ ಕೋರ್ಸ್‌ಗೆ ಅರ್ಜಿ ಆಹ್ವಾನ!

male mahiti

ಒಳನಾಡು ಜಿಲ್ಲೆಗಳಲ್ಲಿ:

ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.

ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: GKVK Bengaluru-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ 59 ನೇ ಘಟಿಕೋತ್ಸವ!13 ಚಿನ್ನದ ಪದಕ ಪಡೆದ ದೀಪ್ತಿ!

ರಾಜ್ಯ ಮಳೆ ಮುನ್ಸೂಚನೆ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಲು ಉಪಯುಕ್ತ ಲಿಂಕ್:

Varunamitra Helpline-ವರುಣ ಮಿತ್ರ ಸಹಾಯವಾಣಿ:
KSNDMC, Bengalore ಟ್ವಿಟರ್ ಖಾತೆ- Click here

ಮಾಹಿತಿ ಕೃಪೆ: ಸಾಯಿಶೇಖರ್ ಬಿ ಮತ್ತು KSNDMC, Bengalore

RELATED ARTICLES
- Advertisment -

Most Popular

Recent Comments