Saturday, August 30, 2025
No menu items!
HomeNewsRaman Kant Scholarships-ರಾಮನ್ ಕಾಂತ್ ಫೌಂಡೇಶನ್‌ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!

Raman Kant Scholarships-ರಾಮನ್ ಕಾಂತ್ ಫೌಂಡೇಶನ್‌ ವತಿಯಿಂದ ಪದವಿ ವಿದ್ಯಾಭ್ಯಾಸಕ್ಕೆ ₹5.5 ಲಕ್ಷ ಸಹಾಯಧನ!

2025-26 ನೇ ಸಾಲಿನ ಹೀರೋ ಗ್ರೂಪ್‌ನ ಉಪಕ್ರಮವಾದ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್(Raman Kant Foundation) ವತಿಯಿಂದ ಪದವಿ ಕೋರ್ಸ ಗಳ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳ ಮುಂದಿನ ಶಿಕ್ಷಣವನ್ನು ಪೂರ್ಣಗೊಳಿಸಲು 5,50,000 ದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ, ಪ್ರಸ್ತುತ ಬಿಬಿಎ, ಬಿಎಫ್‌ಐಎ, ಬಿ.ಕಾಂ. (ಎಚ್, ಇ), (UG Students Support)ಬ್ಯಾಚುಲರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ, ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್), ಅಥವಾ ಯಾವುದೇ ಇತರ ಹಣಕಾಸು-ಸಂಬಂಧಿತ ಪದವಿ ಕೋರ್ಸ್‌ಗಳ ಮೊದಲ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ವರ್ಷಕ್ಕೆ 5,50,000 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ಪಡೆಯುವ ಅವಕಾಶವನ್ನು ಹೊಂದಿರುತ್ತಾರೆ.

ಇದನ್ನೂ ಓದಿ: Property digitization-ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಬೃಹತ್ ಇ-ಖಾತಾ ಆಂದೋಲನ!

ಪ್ರಸ್ತುತ ಈ ಅಂಕಣದಲ್ಲಿ ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ? ರಾಮನ್ ಕಾಂತ್ ಕಾರ್ಯಕ್ರಮದ ಬಗ್ಗೆ ಮಾಹಿತಿ, ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸುವ ವಿಧಾನ? ಅವಶ್ಯಕ ದಾಖಲಾತಿಗಳೇನು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಬಗ್ಗೆ ಮಾಹಿತಿ:

ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಇದು ಹೀರೋ ಗ್ರೂಪ್‌ನ ಉಪಕ್ರಮವಾದ, ಬಡ ಕುಟುಂಬಗಳಿಗೆ ಸಹಾಯ ಮಾಡುವ ಮೂಲಕ ಜೀವನವನ್ನು ಶ್ರೀಮಂತಗೊಳಿಸಲು ಮತ್ತು ಚೈತನ್ಯ ತುಂಬಲು ಸಮರ್ಪಿತವಾಗಿದೆ ಮತ್ತು ಇದರಿಂದಾಗಿ ಅವರು ಸಂತೋಷದಾಯಕ ಮತ್ತು ಆರೋಗ್ಯಕರ ಸಮುದಾಯ ಮತ್ತು ಸಮಾಜವನ್ನು ನಿರ್ಮಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: Airtel Scholarship- ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಈ ಪ್ರತಿಷ್ಠಾನವು ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸಮುದಾಯ ಅಭಿವೃದ್ಧಿ ಮತ್ತು ಪರಿಸರದಲ್ಲಿ ಹಲವಾರು ಉಪಕ್ರಮಗಳನ್ನು ನಡೆಸುತ್ತದೆ. ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನ 2025-26 ಸಹ ಹಿಂದುಳಿದವರ ಶಿಕ್ಷಣವನ್ನು ಬೆಂಬಲಿಸುವ ಅದರ ಉಪಕ್ರಮಗಳಲ್ಲಿ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಕೂಡ ಒಂದಾಗಿದೆ.

Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2025

Who Can Apply-ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು:

  • ಅರ್ಜಿದಾರ ಅಭ್ಯರ್ಥಿಯು ಭಾರತೀಯ ಪ್ರಜೆಗಳಾಗಿರಬೇಕು.
  • ಅರ್ಜಿದಾರರು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.
  • ಪಿಡಬ್ಲ್ಯೂಡಿ ವಿದ್ಯಾರ್ಥಿಗಳಿಗೆ, ಕನಿಷ್ಠ ಶೇಕಡಾವಾರು 70% ಅಂಕಗಳು ಅಗತ್ಯವಿದೆ.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.
  • ಬಿಬಿಎ, ಬಿಎಫ್‌ಐಎ, ಬಿ.ಕಾಂ,ಬಿಎಂಎಸ್, ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ), ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ಅಥವಾ ಯಾವುದೇ ಇತರ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳ ಮೊದಲ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ಈ ಪಟ್ಟಿಯಲ್ಲಿ ನೀಡಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಪಟ್ಟಿಯನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ Click Here

ಇದನ್ನೂ ಓದಿ: Free Diploma Courses-ಉಚಿತವಾಗಿ ಡಿಪ್ಲೋಮಾ ಕೋರ್ಸುಗಳ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ!

Scholorship-ಈ ವಿದ್ಯಾರ್ಥಿವೇತನದ ಮೊತ್ತವೆಷ್ಟು:

ಪ್ರತಿ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ವರ್ಷಕ್ಕೆ 40,000 ನಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Documents-ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು:

  1. ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar card
  2. 10 ಮತ್ತು 12 ನೇ ತರಗತಿಯ ಅಂಕಪಟ್ಟಿ/10 & 12 marks card
  3. ಪೋಷಕರ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್
  4. ಆದಾಯ ಪ್ರಮಾಣಪತ್ರ/Income Certificate
  5. ಪ್ರಸ್ತುತ ವರ್ಷದ ಪ್ರವೇಶ ಪತ್ರ/Entrance Certificate
  6. ಪೋಷಕರ ಬ್ಯಾಂಕ್ ಖಾತೆ ಪ್ರತಿ/Bank Passbook
  7. ಕಾಲೇಜು ಶುಲ್ಕ ರಶೀದಿ/College Fee Recept
  8. ಪೋಟೊ/Photocopy

ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ! 

How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ:

ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ನ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲು ಈ ಲಿಂಕ್ Click Here ಮೇಲೆ ಕ್ಲಿಕ್ ಮಾಡಿ ಅಧಿಕೃತ www.buddy4study.com ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Home Grant Scheme-ಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ!

scholorship apllication

ಇದನ್ನೂ ಓದಿ: Scholorship Application:1-10 ನೇ ತರಗತಿ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Step-2: ನಂತರ ಅಲ್ಲಿ ಅಧಿಕೃತ ವೆಬ್ಸೈಟ್ ಒಪನ್ ಅಗುತ್ತದೆ. ಅದೇ ಪೇಜ್ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು,

Step-3: ನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ಸಿದ್ದಮಾಡಿಕೊಂಡು ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

ಇದನ್ನೂ ಓದಿ: Labour Card-ಕಾರ್ಮಿಕ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Step-4: ತದನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

RELATED ARTICLES
- Advertisment -

Most Popular

Recent Comments