Wednesday, February 12, 2025
No menu items!
HomeNewsRation Card Correction: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Ration Card Correction: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

ರಾಜ್ಯದಲ್ಲಿ ಪಡಿತರ ಚೀಟಿ ಸಂಬಂಧದ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಪ್ರಕ್ರಿಯೆ ಈಗ ಚಾಲನೆಯಲ್ಲಿದ್ದು, ಅರ್ಹ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆಯಬಹುದು. ಹೀಗಾಗಿ, ಪಡಿತರ ಚೀಟಿಯಲ್ಲಿ ಯಾವ ತಿದ್ದುಪಡಿ ಮಾಡಿಸಬಹುದು? ಮತ್ತು ಹೊಸ ಪಡಿತರ ಚೀಟಿಗೆ(Ration card)ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಯಾವುವು? ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ರಾಜ್ಯದಲ್ಲಿ ಬಹುತೇಕ ಜನರು ಹೊಸ ಬಿಪಿಎಲ್(Below Poverty Line) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಪಡಿತರ ಚೀಟಿಯಿಂದ ಸದಸ್ಯರನ್ನು ಹೇರಳವಾಗಿ ತೆಗೆದು ಹಾಕಿ, ಹೊಸ ಸದಸ್ಯರನ್ನು ಸೇರಿಸಲು ನಿರೀಕ್ಷಿಸಿದ್ದಾರೆ. ಈ ವೇಳೆಯಲ್ಲಿ, ರಾಜ್ಯ ಸರ್ಕಾರ ಅವರಿಗೆ ಸಂತೋಷದ ಸುದ್ದಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಈಗ ವ್ಯಾಪಕ ಕಾಲಾವಕಾಶ ಒದಗಿಸಲಾಗಿದೆ.

ಇದನ್ನೂ ಓದಿ: Power Tiller Subsidy- ಶೇ.90% ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ ಆಹ್ವಾನ!

ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಲ್ಲಿ ಪಡಿತರ ಚೀಟಿಯ ತಿದ್ದುಪಡಿ(Amendment of ration card) ಮಾಡಲು ಸುದೀರ್ಘ ಅವಧಿ ನೀಡಿತ್ತು. ಆದರೆ, ಸರ್ವರ್ ಸಮಸ್ಯೆಗಳಿಂದ ಹಲವಾರು ಜನರಿಗೆ ಪಡಿತರ ಚೀಟಿಯ ತಿದ್ದುಪಡಿ ಮಾಡುವುದು ಸಾಧ್ಯವಾಗಿರಲಿಲ್ಲ. ಇಂತಹವರಿಗಾಗಿ, ಈಗ ಮತ್ತೊಮ್ಮೆ ಜನವರಿ 31, 2025 ರವರೆಗೆ ಪಡಿತರ ಚೀಟಿ ತಿದ್ದುಪಡಿಯವರಿಗೆ ಅವಕಾಶ ನೀಡಲಾಗಿದೆ.

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಇಚ್ಛಿಸುವವರಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು, ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್‌ಲೈನ್ ಕೇಂದ್ರಗಳಿಗೆ ಭೇಟಿ ನೀಡಿ, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ರವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಸಿಗುತ್ತದೆ.

ಇದನ್ನೂ ಓದಿ: Railway jobs-2024: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ! ರೈಲ್ವೆ ಇಲಾಖೆಯಿಂದ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ!

digital ration card

What can be amended in the ration card-ಪಡಿತರ ಚೀಟಿಯಲ್ಲಿ ಏನಲ್ಲಾ ತಿದ್ದುಪಡಿ ಮಾಡಬಹುದು?

1) ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡಬಹುದು.
2) ಕುಟುಂಬದಲ್ಲಿರುವ ಮುಖ್ಯಸ್ಥರನ್ನು ಬದಲಾವಣೆ ಮಾಡಬಹುದು.
3) ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶವಿರುತ್ತದೆ.
4) ಪಡಿತರ ಚೀಟಿಯಲ್ಲಿ ಸಂಪೂರ್ಣ ವಿಳಾಸ ಬದಲಾವಣೆ ಮಾಡಬಹುದು.
5) ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಈ ಕೆವೈಸಿ ಮಾಡಿಸಲು ಅವಕಾಶವಿರುತ್ತದೆ.
6) ರೇಷನ್ ಕಾರ್ಡ್‌ನಿಂದ ಸದಸ್ಯರನ್ನು ತೆಗೆದು ಹಾಕಬಹುದು.
7) ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇತರ ಬದಲಾವಣೆಗೆ ಮಾಡಿಸಬಹುದಾಗಿದೆ.

ಇದನ್ನೂ ಓದಿ: Kashi Yatra Trip- ಸರಕಾರದಿಂದ ಕಾಶಿ ಯಾತ್ರೆಗೆ ₹5,000/- ಸಹಾಯಧನ ಪಡೆಯಲು ಅರ್ಜಿ!

How to add new member to ration card-ಪಡಿತರ ಚೀಟಿಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವುದು ಹೇಗೆ?

ಹಂತ-೧: ಮೊದಲು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

ಹಂತ-೨: ನಂತರ ಇಲ್ಲಿ ಕಾಣುವ ಪಬ್ಲಿಕ್ ಯೂಸ್ ಎಂಬ ಮೆನು ಬಾರ್ ಕೆಳಗೆ ಜಿಲ್ಲಾವಾರು ಮಾಹಿತಿ ಇರುತ್ತದೆ. ಅಲ್ಲಿ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿ ಅಯ್ಕೆ ವಿಭಾಗಗಳು ಕಾಣಿಸುತ್ತದೆ.

ಇದನ್ನೂ ಓದಿ: Ration card list-ಆಹಾರ ಇಲಾಖೆಯಿಂದ ಪರಿಷ್ಕೃತ ಪಡಿತರ ಚೀಟಿದಾರರ ಪಟ್ಟಿ ಬಿಡುಗಡೆ!ನಿಮ್ಮ ಹೆಸರು ಇದಿಯಾ ಚೆಕ್ ಮಾಡಿಕೊಳ್ಳಿ!

ration card list

ಹಂತ-೩: ತದನಂತರ ಹೊಸ ರೇಷನ್‌ ಕಾರ್ಡ್‌ ಬೇಕಾಗಿದ್ದಲ್ಲಿ “Apply for new Ration Card” ಮತ್ತು ಪಡಿತರ ಚೀಟಿ ತಿದ್ದುಪಡಿ ಮಾಡುವವರಿದ್ದರೆ “Apply for Ration Card Correction” ಆಯ್ಕೆ ಮೇಲೆ ಸೆಲೆಕ್ಟ್ ಮಾಡಬೇಕು.

ಹಂತ-೪: ನಂತರ New page ನಲ್ಲಿ ಕಾಣಿಸುವ ಫಾರ್ಮ್‌ನಲ್ಲಿ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಅಪ್ಲೋಡ್ ಮಾಡಿ Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಷ್ಕೃತ ಪಡಿತರ ಚೀಟಿ ಹಾಗೂ ಹೊಸ ಪಡಿತರ ಚೀಟಿ ವಿತರಣೆ ಆಗುತ್ತದೆ.

ಇದನ್ನೂ ಓದಿ: Anganwadi Centre Job-ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಸೇರಿ ಒಟ್ಟು 1,143 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

What are the required documents for ration card amendment-ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗಿರುವ ಅಗತ್ಯ ದಾಖಲೆಗಳೇನು?

  • ಸದಸ್ಯರ ಆಧಾರ್ ಕಾರ್ಡ್/Aadhar Card
  • ಸದಸ್ಯರ ಜಾತಿ ಪ್ರಮಾಣ ಪತ್ರ/Cast Certificate
  • ಸದಸ್ಯರ ಆದಾಯ ಪ್ರಮಾಣ ಪತ್ರ/Income Certificate
  • ಮೊಬೈಲ್ ನಂಬರ್/Mobile Number
  • ರೇಷನ್ ಕಾರ್ಡ್/Ration Card

Ration card status check- ಆನ್ಲೈನ್ ಮೂಲಕ ರೇಷನ್ ಕಾರ್ಡ ತಿದ್ದುಪಡಿ ಸ್ಟೇಟಸ್ ಚೆಕ್ ಮಾಡಲು ಅವಕಾಶವಿರುತ್ತದೆ:

ಒಮ್ಮೆ ರೇಷನ್ ಕಾರ್ಡ ತಿದ್ದುಪಡಿಗೆ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಈ ಕೆಳಗೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಆನ್ಲೈನ್ ಮೂಲಕ ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಸ್ಥಿತಿ ಚೆಕ್ ಮಾಡಲು ವೆಬ್ಸೈಟ್ ಲಿಂಕ್- Ration card correction status check

RELATED ARTICLES
- Advertisment -

Most Popular

Recent Comments