ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅನರ್ಹ ರೇಶನ್ ಕಾರ್ಡ ಪಟ್ಟಿಯನ್ನು(Ration Card List-2025) ಬಿಡುಗಡೆ ಮಾಡಲಾಗಿದ್ದು ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ಈ ಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದು.
ಭಾರತದ ಪೌರತ್ವದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪಡಿತರ ವ್ಯವಸ್ಥೆಯು ವರ್ಷಗಳಿಂದ ಲಕ್ಷಾಂತರ ಬಡವರ ಜೀವನಾಧಾರವಾಗಿದೆ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆಯನ್ನು ಕಾಪಾಡುವುದು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಪಡಿತರ ಸೌಲಭ್ಯ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವು ನಿರಂತರ ಪಡಿತರ ಚೀಟಿದಾರರ ಪಟ್ಟಿಯನ್ನು(Ration Card) ಪರಿಷ್ಕರಣೆಯನ್ನು ಕೈಗೊಂಡು. ಈ ಪಟ್ಟಿಯನ್ನು ಕರ್ನಾಟಕ ಆಹಾರ ಇಲಾಖೆಯು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: Karnataka Dam Water Level-ಪ್ರಸ್ತುತ ರಾಜ್ಯದ ಡ್ಯಾಂ ಗಳಲ್ಲಿ ಎಷ್ಟು ನೀರು ಸಂಗ್ರಹವಾಗಿದೆ?
ಈ ಅಂಕಣದಲ್ಲಿ ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ಅನರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು(Ahara ilake) ಚೆಕ್ ಮಾಡುವುದು ಹೇಗೆ? ಮತ್ತು ರೇಶನ್ ಕಾರ್ಡ ಇ-ಕೆವೈಸಿ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
NFSM Scheme-ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಪ್ರತಿ ತಿಂಗಳು ಅಕ್ಕಿ, ರಾಗಿ, ಗೋಧಿ ಮತ್ತು ಇನ್ನಿತರೆ ದವಸ ಧಾನ್ಯಗಳನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತದೆ. ಒಂದು ಕುಟುಂಬಕ್ಕೆ ಅವರ ಅರ್ಹತೆಗೆ ಅನುಗುಣವಾಗಿ ನಿಗದಿತ ಪ್ರಮಾಣದ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಈ ಯೋಜನೆಯ ಉದ್ದೇಶವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸುವುದಾಗಿದೆ.
ಇದನ್ನೂ ಓದಿ: Poultry farming-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!
ಇದಕ್ಕಾಗಿ, ಹಳ್ಳಿ ಮಟ್ಟದಲ್ಲಿ ಆಹಾರ ಇಲಾಖೆಯ ನೇತೃತ್ವದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಸೌಲಭ್ಯ ಸಿಗುವುದನ್ನು ಖಾತ್ರಿಪಡಿಸಲು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಲು ಇಲಾಖೆಯ ಅಧಿಕಾರಿಗಳು ಪ್ರತಿ ತಿಂಗಳು ಮಾರ್ಗಸೂಚಿಗಳ ಪ್ರಕಾರ ಪರಿಶೀಲನೆ ನಡೆಸುತ್ತಾರೆ. ಈ ಪರಿಶೀಲನೆಯಲ್ಲಿ ಅನರ್ಹರೆಂದು ಕಂಡುಬಂದ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತದೆ.
Ineligible Ration Card List-2025: ಅನರ್ಹ ರೇಷನ್ ಕಾರ್ಡ್ ಪಟ್ಟಿಯನ್ನು ಮೊಬೈಲ್‌ನಲ್ಲಿ ಚೆಕ್ ಮಾಡುವ ವಿಧಾನ:
ರೇಷನ್ ಕಾರ್ಡ್ ಹೊಂದಿರುವ ಗ್ರಾಹಕರು ಆಹಾರ ಇಲಾಖೆಯ ಅಧಿಕೃತ ಜಾಲತಾಣವನ್ನು ಪ್ರವೇಶಿಸಿ, ತಮ್ಮ ಮನೆಯಲ್ಲಿ ಕುಳಿತೇ ಅನರ್ಹ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳಬಹುದು. ಪ್ರತಿ ತಿಂಗಳು ತಾಲೂಕುವಾರು ಅನರ್ಹ ರೇಷನ್ ಕಾರ್ಡ್‌ದಾರರ ಪಟ್ಟಿಯನ್ನು ಈ ತಂತ್ರಾಂಶದಲ್ಲಿ ಪ್ರಕಟಿಸಲಾಗುತ್ತದೆ. ಕೆಳಗಿನ ಹಂತಗಳನ್ನು ಅನುಸರಿಸಿ:
ಇದನ್ನೂ ಓದಿ: Gruha Arogya Yojane-ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ ಜಾರಿ!
Step-1: ಮೊಟ್ಟಮೊದಲು Ineligible Ration Card List ಲಿಂಕ್ ಮೇಲೆ ಕ್ಲಿಕ್ ಮಾಡಿ ಆಹಾರ ಇಲಾಖೆಯ ಅಧಿಕೃತ ತಂತ್ರಾಂಶವನ್ನು ಪ್ರವೇಶಿಸಿ.
Step-2: ಮುಖಪುಟದಲ್ಲಿ ಗೋಚರಿಸುವ “ಇ-ಸೇವೆಗಳು” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರಿಯಿರಿ.
Step-3: “ಇ-ಸೇವೆಗಳು” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ, ಎಡಬದಿಯಲ್ಲಿ ಕಾಣುವ “ಇ-ಪಡಿತರ ಚೀಟಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ತದನಂತರ “ರದ್ದುಗೊಳಿಸಲಾದ/ತಡೆಹಿಡಿಯಲಾದ ಪಟ್ಟಿ” ಬಟನ್ ಮೇಲೆ ಕ್ಲಿಕ್ ಮಾಡಿ.
Step-4: ಈ ಪುಟದಲ್ಲಿ ನಿಮ್ಮ ಜಿಲ್ಲೆ, ತಾಲೂಕು, ತಿಂಗಳು ಮತ್ತು ವರ್ಷವನ್ನು ಆಯ್ಕೆ ಮಾಡಿ, “Go” ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ತಾಲೂಕಿನಲ್ಲಿ ಆ ತಿಂಗಳಿನಲ್ಲಿ ಅನರ್ಹ ಅಥವಾ ರದ್ದುಗೊಳಿಸಲಾದ ರೇಷನ್ ಕಾರ್ಡ್‌ದಾರರ ಪಟ್ಟಿ ತೆರೆದುಕೊಳ್ಳುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂದು ಪರಿಶೀಲಿಸಿ.
ಗಮನಿಸಿ: ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಕಂಡುಬಂದರೆ, ಹೆಚ್ಚಿನ ಮಾಹಿತಿ ಮತ್ತು ಸರಿಪಡಿಸುವ ಕ್ರಮಗಳಿಗಾಗಿ ಹತ್ತಿರದ ಆಹಾರ ಇಲಾಖೆ ಕಚೇರಿ ಅಥವಾ ನ್ಯಾಯಬೆಲೆ ಅಂಗಡಿಯನ್ನು ಸಂಪರ್ಕಿಸಿ.
ಇದನ್ನೂ ಓದಿ: Free Hostel- ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!
Ration Card e-KYC: ಇ-ಕೆವೈಸಿ ಮಾಡಿಸುವುದು ಕಡ್ಡಾಯ:
ಆಹಾರ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ರೇಷನ್ ಕಾರ್ಡ್‌ನಲ್ಲಿ ನಮೂದಿಸಲಾದ ಎಲ್ಲ ಸದಸ್ಯರು ತಮ್ಮ ಅಗತ್ಯ ವಿವರಗಳನ್ನು ಮತ್ತು ಬೆರಳಚ್ಚನ್ನು ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡದಿದ್ದರೆ, ಪ್ರತಿ ತಿಂಗಳು ನೀಡಲಾಗುವ ರೇಷನ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

Ration Card e-KYC-ಇ-ಕೆವೈಸಿ ಏಕೆ ಮುಖ್ಯ?
ಇ-ಕೆವೈಸಿ ಮೂಲಕ ಅರ್ಹ ಫಲಾನುಭವಿಗಳನ್ನು ಮಾತ್ರ ಗುರುತಿಸಿ, ಸೌಲಭ್ಯವನ್ನು ಸರಿಯಾದ ವ್ಯಕ್ತಿಗಳಿಗೆ ತಲುಪಿಸಲಾಗುತ್ತದೆ.
ಅನರ್ಹ ವ್ಯಕ್ತಿಗಳು ರೇಷನ್ ಸೌಲಭ್ಯವನ್ನು ಪಡೆಯುವುದನ್ನು ತಪ್ಪಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.
ರೇಷನ್ ಕಾರ್ಡ್ ದಾರರ ಮಾಹಿತಿಯನ್ನು ಡಿಜಿಟಲ್ ಮಾಡುವ ಮೂಲಕ ದಾಖಲೆಗಳನ್ನು ನವೀಕರಿಸಲು ಇ-ಕೆವೈಸಿ ಅಗತ್ಯ.
ನಕಲಿ ರೇಶನ್ ಕಾರ್ಡಗಳನ್ನು ಪತ್ತೆ ಮಾಡಲು ಇ-ಕೆವೈಸಿ ಮಾಡಲು ಆಹಾರ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Scholorship-B.Sc ಮತ್ತು B.Tec ವಿದ್ಯಾರ್ಥಿನಿಯರಿಗೆ 2.4 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
How To Apply For Ration Card e-KYC: ಇ-ಕೆವೈಸಿ ಮಾಡಿಸುವ ವಿಧಾನ:
ನ್ಯಾಯಬೆಲೆ ಅಂಗಡಿಗೆ ಭೇಟಿ: ಕಚೇರಿ ಸಮಯದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ನೇರವಾಗಿ ಭೇಟಿ ನೀಡಿ.
ವಿವರಗಳನ್ನು ನೀಡಿ: ರೇಷನ್ ಕಾರ್ಡ್‌ನ ಎಲ್ಲ ಸದಸ್ಯರ ವಿವರಗಳನ್ನು ಮತ್ತು ಬೆರಳಚ್ಚನ್ನು ಸಲ್ಲಿಸಿ.
ಪ್ರಕ್ರಿಯೆ ಪೂರ್ಣಗೊಳಿಸಿ: ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಮುಗಿಸಿ.
ಗಮನಿಸಿ: ಎಲ್ಲ ಸದಸ್ಯರ ಇ-ಕೆವೈಸಿ ಪೂರ್ಣಗೊಳ್ಳದಿದ್ದರೆ, ರೇಷನ್ ವಿತರಣೆಯಲ್ಲಿ ತೊಂದರೆಯಾಗಬಹುದು. ಆದ್ದರಿಂದ, ತಕ್ಷಣವೇ ಕ್ರಮ ಕೈಗೊಳ್ಳಿ.
ಇದನ್ನೂ ಓದಿ: BMTC Tour Packages-ಬಿಎಂಟಿಸಿಯಿಂದ ಒಂದು ದಿನದ ಪ್ಯಾಕೇಜ್ ಟೂರ್ ಆರಂಭ!
Ration Card e-KYC Status: ಇ-ಕೆವೈಸಿ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:
ಈಗಾಗಲೇ ಇ-ಕೆವೈಸಿ ಮಾಡಿಸಿರುವವರು ತಮ್ಮ ಸ್ಥಿತಿಯನ್ನು ಮೊಬೈಲ್‌ನಲ್ಲೇ ಪರಿಶೀಲಿಸಿಕೊಳ್ಳಬಹುದು:
Step-1: ಮೊದಲಿಗೆ Ration Card E-KYC Status ಲಿಂಕ್ ಮೇಲೆ ಕ್ಲಿಕ್ ಮಾಡಿ ಆಹಾರ ಇಲಾಖೆಯ ಅಧಿಕೃತ ತಂತ್ರಾಂಶವನ್ನು ಭೇಟಿ ಮಾಡಿ.
Step-2: ನಂತರ “ಇ-ಸ್ಥಿತಿ” ಕಾಲಂನಲ್ಲಿ ಕಾಣುವ “ಹಾಲಿ ಪಡಿತರ ಚೀಟಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ನಮೂದಿಸಿ ನಿಮ್ಮ ರೇಶನ್ ಕಾರ್ಡನ “e-KYC Status” ಅನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: Diesel Pump Scheme-ಡಿಸೇಲ್ ಪಂಪ್ ಪಡೆಯಲು ಶೇ 90% ಸಬ್ಸಿಡಿಯಲ್ಲಿ ಅರ್ಜಿ ಆಹ್ವಾನ!
Karnataka Food Department: ಹೆಚ್ಚಿನ ಮಾಹಿತಿಗಾಗಿ:
ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಥವಾ ಯಾವುದೇ ತಾಂತ್ರಿಕ ಮಾಹಿತಿಯನ್ನು ಪಡೆಯಲು ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ Click Here ಭೇಟಿ ನೀಡಿ. ಇಲ್ಲವೇ, ನಿಮ್ಮ ಹತ್ತಿರದ ಆಹಾರ ಇಲಾಖೆ ಕಚೇರಿ ಅಥವಾ ನ್ಯಾಯಬೆಲೆ ಅಂಗಡಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಿ.