Saturday, October 25, 2025
No menu items!
HomeNewsSBI Scholarship- SBI ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹75,000/-ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

SBI Scholarship- SBI ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹75,000/-ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ನ ಅಡಿಯಲ್ಲಿ SBI ಫೌಂಡೇಶನ್ ನ ವತಿಯಿಂದ 2025-2026 ನೇ ಸಾಲಿನ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನದಡಿ(SBI Foundation Scholarship) 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ₹75,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(SBI Fundation)ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ, ಅವರ ಶಿಕ್ಷಣದ ನಿರಂತರತೆಯನ್ನು ಖಚಿತಪಡಿಸುತ್ತದೆ. ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೋರಿದೆ.

ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಪಡೆಯಲು ಈ ದಾಖಲೆ ಕಡ್ಡಾಯ! ಯಾವುದು ಈ ದಾಖಲೆ ಇಲ್ಲಿದೆ ಮಾಹಿತಿ!

ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ಅರ್ಜಿಯನ್ನು ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್ 2025

Who Can Apply-ಅರ್ಜಿಯನ್ನು ಯಾರ‍ೆಲ್ಲ ಸಲ್ಲಿಸಲು ಅವಕಾಶವಿರುತ್ತದೆ?

ಅರ್ಜಿದಾರ‍ ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು.

ಅರ್ಜಿದಾರರು ಇತ್ತೀಚಿನ NIRF ಶ್ರೇಯಾಂಕಗಳ ಪ್ರಕಾರ ಟಾಪ್ 300 ಸಂಸ್ಥೆಗಳಲ್ಲಿ ಪಟ್ಟಿ ಮಾಡಲಾದ ಭಾರತದ ಪ್ರಮುಖ ವಿಶ್ವವಿದ್ಯಾಲಯ/ಕಾಲೇಜಿನಿಂದ (ಯಾವುದೇ ವರ್ಷ) ಪದವಿಪೂರ್ವ ಕೋರ್ಸ್ ಅನ್ನು ಅನುಸರಿಸುತ್ತಿರಬೇಕು.

ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು .

ಅರ್ಜಿದಾರರ ಕುಟುಂಬದ ಒಟ್ಟು ವಾರ್ಷಿಕ ಆದಾಯ 6,00,000 ಮೀರಿರಬಾರದು.

ಇದನ್ನೂ ಓದಿ: Bharti Airtel Scholarship-ಭಾರ್ತಿ ಏರ್‌ಟೆಲ್ ಫೌಂಡೇಶನ್‌ ಅಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಹೆಚ್ಚಿನ ಮಾಹಿತಿಗಾಗಿ:

ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ನಿಂದ A ಮತ್ತು ಅದಕ್ಕಿಂತ ಹೆಚ್ಚಿನ ಮಾನ್ಯತೆಗಳನ್ನು ಹೊಂದಿರುವ ವಿಶ್ವವಿದ್ಯಾಲಯಗಳು, ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳಿಗೆ ಅಗ್ರ 300 NIRF ಪಟ್ಟಿಗಳಲ್ಲಿ ಸ್ಥಾನ ಪಡೆದಿರುವ ಪ್ರಮುಖ ಶೈಕ್ಷಣಿಕ ಸಂಸ್ಥೆಗಳನ್ನು ಪರಿಗಣಿಸಲಾಗುತ್ತದೆ.

SC/ST ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಸಡಿಲಿಕೆ ಇದೆ (ಅಂಕಗಳ ಶೇಕಡಾವಾರು – 67.50%, CGPA – 6.30).

50% ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

50% SC/ST (25% SC, 25% ST) ಗೆ ಮೀಸಲಿಡಲಾಗಿದೆ.

ದಯವಿಟ್ಟು ಅರ್ಜಿ ನಮೂನೆಯಲ್ಲಿ ನಿಮ್ಮ ಎಸ್‌ಬಿಐ ಬ್ಯಾಂಕ್ ಖಾತೆಯ ಪಾಸ್‌ಬುಕ್ ಅನ್ನು ಅಪ್‌ಲೋಡ್ ಮಾಡಿ. ನೀವು ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಅರ್ಜಿಯನ್ನು ಮುಂದುವರಿಸುವ ಮೊದಲು ದಯವಿಟ್ಟು ಒಂದನ್ನು ತೆರೆಯಿರಿ (ಶಾರ್ಟ್‌ಲಿಸ್ಟ್ ಮಾಡಲು ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ).

ಇದನ್ನೂ ಓದಿ: Caste Survey 2025-ಮನೆಯಿಂದಲೇ ನಿಮ್ಮ ಮೊಬೈಲ್ ಮೂಲಕವೇ ಜಾತಿಗಣತಿ ಸಮೀಕ್ಷೆ ಮಾಡಲು ಅವಕಾಶ!

Scholorship Amount-ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

SBI ಫೌಂಡೇಶನ್ ನ ವತಿಯಿಂದ ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 75,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ಅಭ್ಯರ್ಥಿಯ ಆಧಾರ್ ಕಾರ್ಡ/Aadhar Card
  • ದ್ವಿತೀಯ ಪಿಯುಸಿ ಅಂಕಪಟ್ಟಿ/PUC Marks Card
  • ಪ್ರಸ್ತುತ ವರ್ಷದ ಶುಲ್ಕ ರಶೀದಿ/Fee Reciept
  • ಪ್ರಸ್ತುತ ವರ್ಷದ ಪ್ರವೇಶ ಪತ್ರ/Entrance Certificate
  • ಆದಾಯ ಪ್ರಮಾಣ ಪತ್ರ/Income Certificate
  • ಜಾತಿ ಪ್ರಮಾಣ ಪತ್ರ/Caste Certificate
  • ಬ್ಯಾಂಕ್ ಪುಸ್ತಕ/Bank Passbook
  • ಫೋಟೊ/Photocopy

ಇದನ್ನೂ ಓದಿ: Azim Premji Foundation-ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ₹30,000 ಸ್ಕಾಲರ್ಶಿಪ್ ಪಡೆಯಲು ಅರ್ಜಿ!

ಇದನ್ನೂ ಓದಿ: Udyogini Scheme-ಸ್ವಂತ ವ್ಯವಹಾರ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಲು ಅರ್ಜಿ!

How To Apply Online Application-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿ ಸಲ್ಲಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ “Click Here” ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಯೋಜನೆವಾರು ಅರ್ಜಿ ಸಲ್ಲಿಸಲು ಲಿಂಕ್ ಗಳಲ್ಲಿ ಪದವಿ ವ್ಯಾಸಂಗ ವಿದ್ಯಾರ್ಥಿವೇತನ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ID ಮತ್ತು Password ಅನ್ನು ಸಿದ್ದ ಮಾಡಿಕೊಂಡು ಲಾಗಿನ್ ಆಗಬೇಕು.

ಇದನ್ನೂ ಓದಿ: IDFC First Bank Scholarship-IDFC First ಬ್ಯಾಂಕ್ ನಿಂದ ₹1ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Step-3: ಲಾಗಿನ್ ಆದ ಬಳಿಕ ಅರ್ಜಿ ಸಲ್ಲಿಸುವ ಪ್ರತಿಯು ಓಪನ್ ಆಗುತ್ತದೆ. ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

RELATED ARTICLES
- Advertisment -

Most Popular

Recent Comments