Thursday, January 23, 2025
No menu items!
HomeNewsLabor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು...

Labor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ!

- Advertisement -
- Advertisement -
- Advertisement -
- Advertisement -

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ವತಿಯಿಂದ(Scholarship from Labor Department) ಕಾರ್ಮಿಕ ಕಾರ್ಡ ಹೊಂದಿರುವ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯಡಿ ಬರುವ ಕಾರ್ಮಿಕ ಮಂಡಳಿಯಿಂದ(Labor Welfare Board) ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅರ್ಥಿಕ ನೆರವು ನೀಡಲು ಶೈಕ್ಷಣಿಕ ಧನ ಸಹಾಯ ಯೋಜನೆಯ ಅಡಿಯಲ್ಲಿ ಈ ಪ್ರತಿ ವರ್ಷದಂತೆ ಈ ವರ್ಷವು ಸಹ ಈ ಯೋಜನೆಯಡಿ ಪ್ರಯೋಜನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನ(Scholarship from Labor Department) ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ ಇರುತ್ತದೆ ಆದ್ದರಿಂದ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂದು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Gold Rate-ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

Last Date to Apply Online for Labor Department Salary- ಆನ್ಲೈನ್ ಮೂಲಕ ಕಾರ್ಮಿಕ ಇಲಾಖೆಯ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2024

ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?

Procedure to Apply for Labor Department Salary- ಕಾರ್ಮಿಕ ಇಲಾಖೆಯ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನಕ್ಕಾಗಿಯೇ ಅಭಿವೃದ್ದಿಪಡಿಸಿರುವ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯ ಆಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Step-1: ಮೊದಲಿಗೆ Labour department scholarship ಈ link ಮೇಲೆ click ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಮೊದಲ ಭಾರಿಗೆ ಈ SSP ಜಾಲತಾಣವನ್ನು ಪ್ರವೇಶ ಮಾಡುವವರು ಮೊದಲು User ID ಮತ್ತು Password ಅನ್ನು ಸಿದ್ದ ಮಾಡಿಕೊಂಡು “Login” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: Login ಬಟನ್ ಮೇಲೆ Click ಮಾಡಿ ಕಾರ್ಮಿಕ ಇಲಾಖೆ ಮಂಡಳಿಯನ್ನು ಆಯ್ಕೆ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Best Insurance Plan-2024: ಸಾರ್ವಜನಿಕರಿಗೆ ಭರ್ಜರಿ ಆಫರ್! ಕೇವಲ ₹599ರೂಗೆ ₹5 ಲಕ್ಷ ವಿಮೆ ಪಡೆಯಲು ಅರ್ಜಿ!

Important Information for Applicants-ಅರ್ಜಿ ಸಲ್ಲಿಸುವವರಿಗೆ ಮುಖ್ಯ ಮಾಹಿತಿ:

ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರುವಿದ್ಯಾರ್ಥಿಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31-12- 2024
ಅರ್ಜಿ ಸಲ್ಲಿಸಲು ಲಿಂಕ್Apply Now
ಕಾರ್ಮಿಕ ಮಂಡಳಿ ವೆಬ್ಸೈಟ್Click here

Documents required to apply for labor department salary-ಕಾರ್ಮಿಕ ಇಲಾಖೆಯ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

(1) ವಿದ್ಯಾರ್ಥಿಯ ಆಧಾರ್ ಕಾರ್ಡ/Student’s Aadhaar Card
(2) ವಿದ್ಯಾರ್ಥಿಯ ಕಾರ್ಮಿಕ ಕಾರ್ಡ ಪ್ರತಿ/Student’s labor card copy
(3) ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ/Copy of student’s bank pass book
(4) ವಿದ್ಯಾರ್ಥಿಯ ಶಾಲಾ ದಾಖಲಾತಿ ಪ್ರಮಾಣ ಪತ್ರ/Student’s school enrollment certificate
(5) ವಿದ್ಯಾರ್ಥಿಯ ಮೊಬೈಲ್ ನಂಬರ್/Mobile number of the student

ಇದನ್ನೂ ಓದಿ: Snake bite-ಹಾವು ಕಚ್ಚಿದಾಗ ಯಾವ ಕ್ರಮ ಅನುಸರಿಸಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ!

Who is eligible to apply for Labor Department Salary-ಕಾರ್ಮಿಕ ಇಲಾಖೆಯ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಸಮರ್ಥರು:

(1) ಕಾರ್ಮಿಕ ಕಾರ್ಡ ಹೊಂದಿರುವ ಪೋಷಕರ ವಿದ್ಯಾರ್ಥಿಯರು ಈ ಧನ ಸಹಾಯವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

(2) ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹಾಗೂ ಒಂದು ಕುಟುಂಬದಲ್ಲಿ ಎರಡು ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

(3) ಈ ಹಿಂದೆ ಈ ಯೋಜನೆಯ ಧನ ಸಹಾಯ ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Digital Ration Card-ಅಧಿಕೃತ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಅಪ್ಲಿಕೇಶನ್ ಬಿಡುಗಡೆ!

Karnataka Labour department-ಕಾರ್ಮಿಕರ ಮಂಡಳಿಯ ವಿಶೇಷ ಪ್ರಕಟಣೆಗಳು:

(1) ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಇ-ಕಾರ್ಡ್ ಪಡೆಯಲು https://kbocwwb. karnataka.gov.in ಜಾಲತಾಣದಲ್ಲಿ ನೊಂದಣಿ ಸಂಖ್ಯೆ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31 December 2024 ರ ಒಳಗೆ ಆಧಾ‌ರ್ ಕಾರ್ಡ್ ಸಂಖ್ಯೆಯನ್ನು Link ಮಾಡಬೇಕಾಗಿ ಸೂಚಿಸಲಾಗಿದೆ.

(2) ಇದಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

(3) ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಸೇವಾ ಸಿಂಧು ಪೋರ್ಟಲ್ ನ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ SSP ಜಾಲತಾಣದಲ್ಲಿ ಸ್ವೀಕರಿಸುವುದರಿಂದ ಮತ್ತೆ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

- Advertisement -
RELATED ARTICLES
- Advertisment -

Most Popular

Recent Comments