ಡಾ. ರೆಡ್ಡೀಸ್ ಫೌಂಡೇಶನ್ ಸಶಕ್ತ ವಿದ್ಯಾರ್ಥಿವೇತನ(Scholorship) ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ವಿಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಆರ್ಥಿಕವಾಗಿ ನೆರವು ನೀಡಲು ಡಾ. ರೆಡ್ಡೀಸ್ ಫೌಂಡೇಶನ್ ಸಶಕ್ತ ವಿದ್ಯಾರ್ಥಿವೇತನ(Scholorship Application) ಯೋಜನೆಯಡಿ ಅವಕಾಶವಿದ್ದು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರಸ್ತುತ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: BMTC Tour Packages-ಬಿಎಂಟಿಸಿಯಿಂದ ಒಂದು ದಿನದ ಪ್ಯಾಕೇಜ್ ಟೂರ್ ಆರಂಭ!
ಡಾ. ರೆಡ್ಡೀಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನವನ್ನು(Scholorship Yojana) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕ ಸೇರಿದಂತೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Who Can Apply-ಅರ್ಜಿ ಸಲ್ಲಿಸಲು ಅರ್ಹರು:
ವಿದ್ಯಾರ್ಥಿನಿಯು ಭಾರತೀಯ ನಿವಾಸಿಯಾಗಿರಬೇಕು.
ವಿದ್ಯಾರ್ಥಿನಿಯರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಮಾನ್ಯತೆ ಪಡೆದ ಬೋರ್ಡ್‌ನಿಂದ 2025ರಲ್ಲಿ 12ನೇ ತರಗತಿಯನ್ನು (PCM/PCB) ಕನಿಷ್ಠ 80% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಡಾ. ರೆಡ್ಡೀಸ್ ಫೌಂಡೇಶನ್‌ನಿಂದ ಆಯ್ಕೆಯಾದ ಭಾರತದಾದ್ಯಂತದ ಪ್ರಮುಖ ಸಂಸ್ಥೆಗಳಲ್ಲಿ B.Sc., B.Tech., ಅಥವಾ M.B.B.S. ಕಾರ್ಯಕ್ರಮಕ್ಕೆ ಪ್ರವೇಶ ಪಡೆದಿರಬೇಕು.
ಕುಟುಂಬದ ವಾರ್ಷಿಕ ಆದಾಯವು ₹5 ಲಕ್ಷದಿಂದ ಕಡಿಮೆ ಇರಬೇಕು.
ಇದನ್ನೂ ಓದಿ: Diesel Pump Scheme-ಡಿಸೇಲ್ ಪಂಪ್ ಪಡೆಯಲು ಶೇ 90% ಸಬ್ಸಿಡಿಯಲ್ಲಿ ಅರ್ಜಿ ಆಹ್ವಾನ!
Last Date For Scholorship Application-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ- 1 June 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 October 2025
Scholorship Amount Details-2.4 ಲಕ್ಷದ ವರೆಗೆ ವಿದ್ಯಾರ್ಥಿವೇತನ ಪಡೆಯಬಹುದು:
ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 3 ವರ್ಷಗಳವರೆಗೆ ಒಟ್ಟು ₹2,40,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಒಂದು ವರ್ಷಕ್ಕೆ ₹80,000 ರಂತೆ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ. ಈ ಮೊತ್ತವು ಕಾಲೇಜು ಶಿಕ್ಷಣ ಶುಲ್ಕ, ಅಧ್ಯಯನ ವೆಚ್ಚಗಳು ಮತ್ತು ಮೂಲಭೂತ ಜೀವನ ವೆಚ್ಚಗಳನ್ನು ಒಳಗೊಂಡಿದ್ದು, ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ.
ಇದನ್ನೂ ಓದಿ: Free Hostel Application-ಉಚಿತ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಇದನ್ನೂ ಓದಿ: Crop Insurance-ಬೆಳೆ ವಿಮೆ ಯೋಜನೆಯ ಕುರಿತು ಇಲ್ಲಿದೆ ಅಗತ್ಯ ಮಾಹಿತಿ!
Documents For Scholorship Scheme-ಅರ್ಜಿ ಸಲ್ಲಿಸಲು ದಾಖಲೆಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ/Adhar
ಬ್ಯಾಂಕ್ ಪಾಸ್ ಬುಕ್/Pass Book
ಪೋಟೋ/Photo
12th ಅಂಕಪಟ್ಟಿ/marks card
ಆದಾಯ ಪ್ರಮಾಣ ಪತ್ರ/income certificate
ಮೊಬೈಲ್ ನಂಬರ್/mobile number
ಇದನ್ನೂ ಓದಿ: Horticulture Department- ತೋಟಗಾರಿಕೆ ಇಲಾಖೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Scholorship Online Application link-ಅನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಸ್ಕಾಲಪ್ ಶಿಪ್ ಅನ್ನು ಪಡೆಯಲು ಈ ಕೆಳಗಿನ ವಿಧಾನವನ್ನು ಅನುಸರಿಸಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ “Scholorship Online Application” ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
ಇದನ್ನೂ ಓದಿ: BPL Card Benefits- BPL Card ಕುಟುಂಬಗಳಿಗೆ ಈ ಸೇವೆ ಉಚಿತವಾಗಿ ಲಭ್ಯ!
Step-2: ಇದಾದ ಬಳಿಕ ಇಲ್ಲಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಇಲ್ಲಿ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾದಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.