Friday, October 10, 2025
No menu items!
HomeNewsScholorship Application-DXC ಟೆಕ್ನಾಲಜಿಯ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholorship Application-DXC ಟೆಕ್ನಾಲಜಿಯ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

2025-2026 ನೇ ಸಾಲಿನ DXC ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್‌ಶಿಪ್ ವತಿಯಿಂದ DXC ಟೆಕ್ನಾಲಜಿಯ(Progressing Minds Scholarship) ಅಡಿಯಲ್ಲಿ ಹಿಂದುಳಿದ ವರ್ಗಗಳ ಪದವಿ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ಕೇವಲ ಆರ್ಥಿಕ ನೆರವು ಮಾತ್ರವಲ್ಲ, ಬದಲಿಗೆ ಶಿಕ್ಷಣದ ಮೂಲಕ ತಮ್ಮ(National-level scheme)ಕನಸುಗಳನ್ನು ನನಸು ಮಾಡಲು ಈ ವಿದ್ಯಾರ್ಥಿವೇತನವು ಒಂದು ಅವಕಾಶವಾಗಿದೆ. ಈ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ನೆರವನ್ನು ನೀಡಲು ಸಹಾಯವಾಗಿದೆ.

ಇದನ್ನೂ ಓದಿ: Karmika Card Benefits-ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಪ್ರಯೋಜನ ಪಡೆಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

ಪ್ರಸ್ತುತ ಇಂದಿನ ಈ ಲೇಖನದಲ್ಲಿ ಈ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ಹಂತಗಳಾವುವು? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ಸಲ್ಲಿಸಬೇಕು? ಈ ವಿದ್ಯಾರ್ಥಿವೇತನವನ್ನು ಜಾರಿಗೆ ತರಲು ಉದ್ದೇಶವೇನು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಕಾರ್ಯಕ್ರಮದ ಬಗ್ಗೆ ವಿವರಣೆ:

DXC ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್‌ಶಿಪ್ 2025-26 ಎಂಬುದು DXC ಟೆಕ್ನಾಲಜಿಯ ಒಂದು ಉಪಕ್ರಮವಾಗಿದ್ದು, ಇಲ್ಲಿ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ, STEM ಕೋರ್ಸ್‌ಗಳನ್ನು ಅನುಸರಿಸುವ ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ₹50,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ! ಪ್ರತಿ ಕ್ವಿಂಟಾಲ್‌ಗೆ ₹8,110/- ರಂತೆ ಹತ್ತಿ ಖರೀದಿಗೆ ನೋಂದಣಿ ಆರಂಭ!

DXC ತಂತ್ರಜ್ಞಾನದ ಬಗ್ಗೆ ಮಾಹಿತಿ:

DXC ತಂತ್ರಜ್ಞಾನ (NYSE: DXC) ಜಾಗತಿಕ ಕಂಪನಿಗಳಿಗೆ ತಮ್ಮ ಪ್ರಮುಖ ವ್ಯವಸ್ಥೆಗಳು ಮತ್ತು ಕಾರ್ಯಾಚರಣೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, IT ಯನ್ನು ಆಧುನೀಕರಿಸುತ್ತದೆ, ಡೇಟಾ ಆರ್ಕಿಟೆಕ್ಚರ್‌ಗಳನ್ನು ಉತ್ತಮಗೊಳಿಸುತ್ತದೆ ಮತ್ತು ಸಾರ್ವಜನಿಕ, ಖಾಸಗಿ ಮತ್ತು ಹೈಬ್ರಿಡ್ ಕ್ಲೌಡ್‌ಗಳಲ್ಲಿ ಭದ್ರತೆ ಮತ್ತು ಸ್ಕೇಲೆಬಿಲಿಟಿಯನ್ನು ಖಾತರಿಪಡಿಸುತ್ತದೆ. ವಿಶ್ವದ ಪ್ರಮುಖ ಕಂಪನಿಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ತಮ್ಮ IT ಎಸ್ಟೇಟ್‌ಗಳಲ್ಲಿ ಉನ್ನತ ಕಾರ್ಯಕ್ಷಮತೆ, ಸ್ಪರ್ಧಾತ್ಮಕತೆ ಮತ್ತು ಗ್ರಾಹಕ ಅನುಭವವನ್ನು ಒದಗಿಸುವ ಸೇವೆಗಳಿಗಾಗಿ DXC ಮೇಲೆ ಭರವಸೆ ಇಡುತ್ತವೆ.

Last Date To Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025

ಇದನ್ನೂ ಓದಿ: U-Go Scholarship-ಯು-ಗೋ ವಿದ್ಯಾರ್ಥಿವೇತನ ಅಡಿಯಲ್ಲಿ ₹60,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Who Can Apply For Scholorship-ವಿದ್ಯಾರ್ಥಿವೇತನವನ್ನು ಪಡೆಯಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು?

ಭಾರತದಲ್ಲಿ ವಾಸಿಸುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿದಾರರು ಕಳೆದ ವರ್ಷದಲ್ಲಿ/ಸೆಮಿಸ್ಟರ್‌ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರರ ವಾರ್ಷಿಕ ಕುಟುಂಬದ ಆದಾಯವು 4,00,000 ಲಕ್ಷ ಮೀರಿರಬಾರದು.

STEM-ಸಂಬಂಧಿತ ಕ್ಷೇತ್ರದಲ್ಲಿ ಯಾವುದೇ ವರ್ಷದಲ್ಲಿ ಪದವಿ ಪಡೆಯುತ್ತಿರುವ ಮಹಿಳೆಯರು ಮತ್ತು ಟ್ರಾನ್ಸ್ಜೆಂಡರ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

DXC ಟೆಕ್ನಾಲಜಿ ಹಾಗೂ Buddy4Study ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಂಗವಿಕಲ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: Degree Scholarship 2025-ಪದವಿ ವಿದ್ಯಾಭ್ಯಾಸಕ್ಕೆ 5.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ! ಇನ್ನೂ 2 ದಿನ ಬಾಕಿ!

ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?

DXC ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್‌ಶಿಪ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳವ ಅರ್ಹ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: ವಿದ್ಯಾರ್ಥಿವೇತನದ ಮೊತ್ತವು ಶಿಕ್ಷಣಕ್ಕೆ ಸಂಬಂಧಿಸಿದ ವೆಚ್ಚಗಳನ್ನು ಒಳಗೊಂಡಿದೆ, ಇದರಲ್ಲಿ ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಊಟದ ಶುಲ್ಕಗಳು, ಪ್ರಯಾಣ ವೆಚ್ಚಗಳು, ಪುಸ್ತಕಗಳು, ಲೇಖನ ಸಾಮಗ್ರಿಗಳು, ಸಾಧನಗಳು/ಡೇಟಾ, ವೈದ್ಯಕೀಯ ವಿಮೆ ಇತ್ಯಾದಿ ಸೇರಿವೆ.

Documents Required-ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳು?

  • ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar Card.
  • ಪ್ಯಾನ್ ಕಾರ್ಡ್/Pan Card.
  • 12ನೇ ತರಗತಿಯ ಅಂಕಪಟ್ಟಿ/12 Marks Card.
  • ಹಿಂದಿನ ವರ್ಷದ ಅಂಕಪಟ್ಟಿ/Marks Card.
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ/Income Certificate.
  • ಶುಲ್ಕದ ರಶೀದಿ/Fee Recept.ಫೋಟೊ/Photocopy.
  • ಬ್ಯಾಂಕ್ ಪಾಸ್‌ಬುಕ್/Bank Passbook.
  • ಅಂಗವಿಕಲ ಪತ್ರ(ಅಗತ್ಯವಿದ್ದರೆ)/Disability Letter.

ಇದನ್ನೂ ಓದಿ: Labour Marriage Subsidy-ಕಾರ್ಮಿಕ ಇಲಾಖೆಯಡಿ ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

How To Apply Online Application-ಅರ್ಜಿ ಸಲ್ಲಿಸುವುದು ಹೇಗೆ?

Step-1: ಅರ್ಜಿಯನ್ನು ಸಲ್ಲಿಸಲು ಆಸಕ್ತ ಇರುವ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ “Online Application” ಮೇಲೆ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪೇಜ್ ನಲ್ಲಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ನಂತರ “Create an account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಹಾಕಿ ಬಳಕೆದಾರರ ID ಮತ್ತು Password ಅನ್ನು ರಚನೆ ಮಾಡಿಕೊಂಡು “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ಒಪನ್ ಆಗುತ್ತದೆ ಅಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Reliance Foundation Scholarship-ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಈ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ:

ಅಧಿಕೃತ ವೆಬ್ಸೈಟ್ ಲಿಂಕ್: Click Here

RELATED ARTICLES
- Advertisment -

Most Popular

Recent Comments