ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-2026 ನೇ ಸಾಲಿನ ಪರಿಶಿಷ್ಟ ಜಾತಿಯವರ ಆರ್ಥಿಕ(Sheep farming Subsidy)ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಗಳು ಇದರ ಅಡಿಯಲ್ಲಿ ಕುರಿ ಸಾಕಾಣಿಕೆ ಯೋಜನೆಯಡಿ ₹50,000 ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಇಂದಿನ ಲೇಖನದಲ್ಲಿ ಈ ಯೋಜನೆಯಡಿ ₹50,000 ಸಹಾಯಧನವನ್ನು(Kuri Sakanike Subsidy) ಪಡೆಯಲು ಅರ್ಜಿಯನ್ನು ಯಾರು ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಹಂತಗಳಾವುವು? ಕೊನೆಯ ದಿನಾಂಕ ಯಾವುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Corteva Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ನಡಿ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!
Subsidy Amount Details-ಈ ಯೋಜನೆಯ ಸಬ್ಸಿಡಿ ವಿವರ:
ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಒಟ್ಟು ₹1,00,000 ಮೌಲ್ಯದ ಘಟಕ ವೆಚ್ಚವನ್ನು ನೀಡಲಾಗುವುದು. ಇದರಲ್ಲಿ ₹50,000ವನ್ನು ನಿಗಮಗಳಿಂದ ಸಬ್ಸಿಡಿ ರೂಪದಲ್ಲಿ ಒದಗಿಸಲಾಗುತ್ತದೆ ಹಾಗೂ ಉಳಿದ ₹50,000ಕ್ಕೆ ಬ್ಯಾಂಕ್ ಮೂಲಕ ಕೇವಲ ಶೇ. 4% ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.
Last Date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 10 ಸೆಪ್ಟೆಂಬರ್ 2025
ಯಾವೆಲ್ಲ ನಿಗಮಗಳ ಅಡಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ?
ಅಂಬೇಡ್ಕರ್ ಅಭಿವೃದ್ಧಿ ನಿಗಮ.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ.
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ.
ಇದನ್ನೂ ಓದಿ: Car Subsidy Application-ವಾಹನ/ಟ್ಯಾಕ್ಸಿ ಖರೀದಿಗೆ ರೂ 4.00 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ.
ಕರ್ನಾಟಕ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ.
Who Can Apply For This Scheme-ಅರ್ಜಿಯನ್ನು ಯಾರೆಲ್ಲ ಸಲ್ಲಿಸಲು ಅವಕಾಶವಿರುತ್ತದೆ?
ಅಭ್ಯರ್ಥಿಯು ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು.
ಅಭ್ಯರ್ಥಿಯು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳ ವರ್ಗಕ್ಕೆ ಸೇರಿರಬೇಕು.
ಈ ಯೋಜನೆಯ ಕಳೆದ ವರ್ಷಗಳಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದವರು ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಇದನ್ನೂ ಓದಿ: BSF constable requirement 2025-SSLC ಅಥವಾ ITI ಪಾಸಾದವರು ಕೂಡ ಅರ್ಜಿ ಹಾಕಬಹುದು!
Required Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳಾವುವು?
ಆಧಾರ್ ಕಾರ್ಡ ಪ್ರತಿ/Aadhar Card
ಜಾತಿ ಪ್ರಮಾಣ ಪತ್ರ/Caste Certificate
ಆದಾಯ ಪ್ರಮಾಣ ಪತ್ರ/Income Certificate
ರೇಶನ್ ಕಾರ್ಡ ಪ್ರತಿ/Ration Card
ಪೋಟೋ/Photo
ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
ಮೊಬೈಲ್ ನಂಬರ್/Mobile Number
ಇದನ್ನೂ ಓದಿ: Scholorship Application-SSLC-PUC ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಈಗಲೇ ಅರ್ಜಿ ಹಾಕಿ!
How To Apply For Sheep farming- ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸುವ ಹಂತಗಳು?
ಕುರಿ ಸಾಕಾಣಿಕೆ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಅರ್ಜಿರಾರರ ಅಭ್ಯರ್ಥಿಯು ಮೊದಲಿಗೆ ಈ ಲಿಂಕ್ Online Application ಮೇಲೆ ಕ್ಲಿಕ್ ಮಾಡಿ ಅಧಿಕೃತ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಗೆ ಭೇಟಿ ಮಾಡಬೇಕು.
ಇದನ್ನೂ ಓದಿ: Cattle Subsidy scheme-ಹಸು-ಎಮ್ಮೆ ಖರೀದಿ ಮಾಡಲು ಶೇ 50 ರಷ್ಟು ಸಹಾಯಧನಕ್ಕೆ ಅರ್ಜಿ!
ಇದನ್ನೂ ಓದಿ: Police Constable Training-ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
Step-2: ಬಳಿಕ ಕೆಳಗೆ ಕಾಣುವ “ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ” ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ “Seva Sindhu” ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಂತರ ಇಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ ಕ್ಯಾಪ್ಚ್ ಕೋಡ್ ಹಾಕಿ “Submit” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.
Step-4: ಅಭ್ಯರ್ಥಿಯು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿರುವ ಅಭ್ಯರ್ಥಿಗಳು “Register Here” ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಳ್ಳಬೇಕು.
Step-4: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅಗತ್ಯ ವಿವರವನ್ನು ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಓದಿ: Land Ownership Scheme-ಭೂಮಿ ಖರೀದಿಸಲು 25 ಲಕ್ಷ ರೂ ಸಹಾಯಧನ! ಇಲ್ಲಿದೆ ಸಂಪೂರ್ಣ ಮಾಹಿತಿ!
For More Information- ಈ ಯೋಜನೆಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here
ಇಲಾಖೆಯ ಸಹಾಯವಾಣಿ- 9482300400