ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಯಲ್ಲಿ ರಾಜ್ಯಾದ್ಯಂತ ನಾಳೆ ಎಲ್ಲಾ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಿಗೆ ಕಚೇರಿಗಳಿಗೆ ರಜೆ ಘೋಷಣೆ(Government holiday) ಮಾಡಿ ರಾಜ್ಯ ಸರಕಾರಾದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ನಾಳೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರದಿಂದ ಸಿದ್ದತೆಯನ್ನು ನಡೆಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಅಂತಿಮ ಸಂಸ್ಕಾರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ಪ್ರಾರಂಭವಾಗಿರುತ್ತದೆ.
ಇದನ್ನೂ ಓದಿ: PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!
karnataka government holiday-ಅಧಿಕೃತ ಆದೇಶದ ಪ್ರತಿ:
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10-12-2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.
ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 11-12-2024 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ: 11-12-2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
ಇದನ್ನೂ ಓದಿ: Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!
ದಿನಾಂಕ: 10-12-2024 ರಿಂದ ದಿನಾಂಕ:12-12-2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10-12-2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ದಿನಾಂಕ: 10-12-2024 ರಿಂದ 12-12-2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು.
ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ: Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!
ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಆಡಿದ ಮಾತುಗಳ ಹೈಲೈಟ್ಸ್:
ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.
ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.
ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.
ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.
ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ವಿಧಿ-ವಿಧಾನಕ್ಕೆ ಸಕಲ ಸಿದ್ಧತೆ:
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಅಂತಿಮ ಸಂಸ್ಕಾರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ಪ್ರಾರಂಭವಾಗಿರುತ್ತದೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.