Sunday, December 22, 2024
No menu items!
HomeAgricultureSprinkler set Subsidy- ರೈತರಿಗೆ ಭರ್ಜರಿ ಗುಡ್ ನ್ಯೂಸ್: ಅತೀ ಕಡಿಮೆ ದರದಲ್ಲಿ ಕೃಷಿ ಇಲಾಖೆಯಿಂದ...

Sprinkler set Subsidy- ರೈತರಿಗೆ ಭರ್ಜರಿ ಗುಡ್ ನ್ಯೂಸ್: ಅತೀ ಕಡಿಮೆ ದರದಲ್ಲಿ ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

ಕರ್ನಾಟಕ ರಾಜ್ಯ ಕೃಷಿ ಇಲಾಖೆವತಿಯಿಂದ ಸೂಕ್ಷ್ಮ ನೀರಾವರಿ ಯೋಜನೆ ಅಡಿಯಲ್ಲಿ ಶೇ 90% ರಷ್ಟು ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಕೃಷಿ ಮತ್ತು ರೈತರಿಗೆ ಸಂಬಂಧಿತ ಬೆಂಬಲವನ್ನು ನೀಡುವ ಅತಿ ಮುಖ್ಯವಾದ ಇಲಾಖೆ ಇದಾಗಿದ್ದು, ನೀರಾವರಿ ಬೆಳೆಗಳನ್ನು ಬೆಳೆಯುವ ರೈತರಿಗೆ ನೆರವಾಗಲು ಹಾಗೂ ನೀರಿನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಬೆಳೆಯನ್ನು ಬೆಳೆಯ ಇಲಾಖೆಯಿಂದ ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಅನ್ನು ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: Ration card-ರೇಷನ್ ಕಾರ್ಡಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ!

ಸೂಕ್ಷ್ಮ ನೀರಾವರಿ ಯೋಜನೆಯ ಅಡಿಯಲ್ಲಿ ಎಲ್ಲಾ ವರ್ಗದ ರೈತರಿಗೂ ಸಹ ಶೇ 90% ಸಹಾಯಧನ ಪಡೆಯಲು ಅವಕಾಶವಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಾಗೂ ಅರ್ಜಿ ಸಲ್ಲಿಸಲು ಯಾರು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇದಕ್ಕೆ ಸಂಬಂಧಿತ ದಾಖಲೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಹೆಚ್ಚಿನ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Who can apply for Sprinkler Set Yojana-ಅರ್ಜಿ ಸಲ್ಲಿಸಲು ಅರ್ಹರು:

(A) ಅರ್ಜಿದಾರರು ಈ ಯೋಜನೆಯ ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ತಮ್ಮ ಹೆಸರಿನಲ್ಲಿ ಕೃಷಿ ಜಮೀನನ್ನು ಹೊಂದಿರಬೇಕು.

(B)ಅರ್ಜಿದಾರರು ಸಣ್ಣ ಮತ್ತು ಅತೀ ಸಣ್ಣ ರೈತರ ವರ್ಗಕ್ಕೆ ಸೇರಿದವರಾಗಿರಬೇಕು.

(C) ಕಳೆದ 7 ವರ್ಷದಲ್ಲಿ ಈ ಯೋಜನೆಯಡಿ ಸಹಾಯಧನ ಪಡೆದಿರಬಾರದು.

ಇದನ್ನೂ ಓದಿ: Labor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ!

Sprinkler Set Subsidy

Last date-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:

ಕೃಷಿ ಇಲಾಖೆಯಿಂದ ಮೊದಲು ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಸ್ಪಿಂಕ್ಲರ್ ಸೆಟ್ ಗಳನ್ನು ನೀಡಲಾಗುತ್ತದೆ ಪ್ರಸ್ತುತ ಯಾವುದೇ ಕೊನೆಯ ದಿನಾಂಕ ಎಂದು ನಿಗದಿಪಡಿಸಿರುವುದಿಲ್ಲ ಸಾಮಾನ್ಯವಾಗಿ ಡಿಸೆಂಬರ್ ತಿಂಗಳ ಒಳಗಾಗಿ ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ ಉತ್ತಮ.

Sprinkler Set Scheme application-ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ರೈತರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹೋಬಳಿಯ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Gold Rate-ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

What are the documents required to get a sprinkler set-ಸ್ಪಿಂಕ್ಲರ್ ಸೆಟ್ ಪಡೆಯಲು ಬೇಕಾಗುವ ದಾಖಲೆಗಳಾವುವು?

(A) ಅರ್ಜಿದಾರರ ಆಧಾರ್ ಕಾರ್ಡ/Applicant’s Aadhaar Card
(B) ಅರ್ಜಿದಾರರ ಜಮೀನಿನ ಪಹಣಿ/RTC of the applicant’s land
(C) ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ/Copy of applicant’s bank pass book
(D) ಅರ್ಜಿದಾರರ ಪೋಟೊ/Applicant’s photo copy
(E) ಅರ್ಜಿದಾರರ ಹಿಡುವಳಿ ಪ್ರಮಾಣ ಪತ್ರ/Applicant’s Tenancy Certificate
(F) ಅರ್ಜಿದಾರರ ಕೊಳವೆ ಬಾವಿ ಪ್ರಮಾಣ ಪತ್ರ/Applicant’s tube well certificate
(G) ಅರ್ಜಿದಾರರ ಮೊಬೈಲ್ ನಂಬರ್/Mobile number of the applicant

ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?

Opportunity to apply online for sprinkler set-ಸ್ಪಿಂಕ್ಲರ್ ಸೆಟ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ:

ಕೃಷಿ ಇಲಾಖೆಯ ಕೆ-ಕಿಸಾನ್ ಜಾಲತಾಣವನ್ನು ಭೇಟಿಮಾಡಿ ರೈತರು ತಮ್ಮ ಮೊಬೈಲ್ ಮೂಲಕ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Sprinkler Set Online application link-ಅರ್ಜಿ ಸಲ್ಲಿಸಲು ಲಿಂಕ್- Apply Now

ಇನ್ನು ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ವೆಬ್ಸೈಟ್ ನ್ನು ಭೇಟಿಮಾಡಿ- CLICK HERE

RELATED ARTICLES
- Advertisment -

Most Popular

Recent Comments