Thursday, February 6, 2025
No menu items!
HomeSchemesYashasvini Card- ಯಶಸ್ವಿನಿ ಕಾರ್ಡ್ ನೋಂದಣಿಗೆ ಕೇವಲ 13 ದಿನಗಳು ಮಾತ್ರ ಬಾಕಿ!

Yashasvini Card- ಯಶಸ್ವಿನಿ ಕಾರ್ಡ್ ನೋಂದಣಿಗೆ ಕೇವಲ 13 ದಿನಗಳು ಮಾತ್ರ ಬಾಕಿ!

“ಯಶಸ್ವಿನಿ ಕಾರ್ಡ್” ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ವಿಮಾ ಯೋಜನೆಗಳಲ್ಲಿ ಅತ್ಯಂತ ಮಹತ್ವದ(Yashasvini Card)ಯೋಜನೆಯಾಗಿದ್ದು, ಈ ಯಶಸ್ವಿನಿ ಕಾರ್ಡ್ ಪಡೆಯಲು & ಈಗಾಗಲೇ ಈ ಕಾರ್ಡ ಅನ್ನು ಹೊಂದಿರುವವರು ನವೀಕರಣ(Yashasvini Card renewal) ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಈ ಯೋಜನೆಯು ಆರೋಗ್ಯ ಇಲಾಖೆಯು ನಿರ್ವಹಿಸುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಹಿಂದುಳಿದ ಬಡಕುಟುಂಬಗಳಿಗೆ(economically backward poor families) ಉತ್ತಮ ವೈದ್ಯಕೀಯ ಸೇವೆಗಳನ್ನು ಸಲ್ಲಿಸಲು ಪ್ರಾರಂಭಿಸಲಾಗಿದೆ. ಈ ಕಾರ್ಡ್ ಹೊಂದಿದ ವ್ಯಕ್ತಿಗಳು, ಔಷಧಿ, ಸರ್ಜರಿ, ಪರೀಕ್ಷೆಗಳು, ವೈದ್ಯಕೀಯ ಸಲಹೆಗಳು, ಮೊದಲಾದ ಎಲ್ಲಾ ವೈದ್ಯಕೀಯ ಸೇವೆಗಳನ್ನು, ನಿಯಮಿತ ಮೊತ್ತದಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ: Morarji Desai school- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ!

ಈ ಯೋಜನೆಯು ಸಮುದಾಯದಲ್ಲಿ ಆರೋಗ್ಯ ಸೇವೆಗಳ ಹಕ್ಕುಗಳನ್ನು(Rights to health services) ಪ್ರೋತ್ಸಾಹ ಮಾಡಲು ಸಹಾಯ ಮಾಡುತ್ತದೆ. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು? ಈ ಯೋಜನೆಯ ಮಹತ್ವವೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇನ್ನು ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

Information about Yashasvini Card-ಯಶಸ್ವಿನಿ ಕಾರ್ಡ್ ಬಗ್ಗೆ ಮಾಹಿತಿ:

ಈ ಯೋಜನೆ ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು ಇದನ್ನು ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ರಕ್ಷಣೆಯ ಸಲುವಾಗಿ ಮಾಜಿ ಮುಖ್ಯಮಂತ್ರಿ S M Krishna ಅವರು 2003ರಲ್ಲಿ ಜೂನ್ 1 ರಂದು ಜಾರಿಗೆ ತಂದರು. ಇದು ಕರ್ನಾಟಕ ರಾಜ್ಯದ ಗ್ರಾಮೀಣ ಸಹಕಾರಿ ಸಂಘಗಳಿಗೆ ರೂಪ ಕೊಂಡಿರುವ ಒಂದು ಸ್ವಯಂ ನಿಧಿ ಶಸ್ತ್ರ ಚಿಕಿತ್ಸೆ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ನೋಂದಾಯಿತವರಿಗೆ ಆಸ್ಪತ್ರೆಗಳಲ್ಲಿ ಉಚಿತವಾಗಿ ಅಥವಾ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆಗಳ ಅನುಕೂಲತೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: Aadhar card- ಉಚಿತ ಆಧಾರ್ ಕಾರ್ಡ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Yashasvini card fee-ಯಶಸ್ವಿನಿ ಕಾರ್ಡ್ ನ ಶುಲ್ಕದ ವಿವರ ಇಂತಿದೆ:

ಒಂದು ಕುಟುಂಬಕ್ಕೆ ವಾರ್ಷಿಕ ರೂ.500/-ಗಳ ವಂತಿಗೆ ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿದ್ದರೆ ಪ್ರತಿಯೊಬ್ಬರಿಗೂ ಹೆಚ್ಚುವರಿಯಾಗಿ ರೂ.100/- ಗಳನ್ನು ಪಾವತಿ ಮಾಡಬೇಕು.

ನಗರ ಸಹಕಾರ ಸಂಘಗಳ ಗರಿಷ್ಠ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.1000/- ಗಳ ವಂತಿಗೆ ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬಕ್ಕೆ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.200/-ಗಳನ್ನು ಪಾವತಿ ಮಾಡಬೇಕು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿಗೆ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ನೋಡಿಕೊಳ್ಳುವಂತೆ ಈ ವರ್ಗದವರಿಗೆ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: Agro Shop License-ರಸಗೊಬ್ಬರ ಮತ್ತು ಬೀಜ ಅಂಗಡಿಯ ಲೈಸೆನ್ಸ್ ಪಡೆಯುವುದು ಹೇಗೆ! ಇಲ್ಲಿದೆ ಉಪಯುಕ್ತ ಮಾಹಿತಿ!

Who should apply for Yashavini card-ಯಶಸ್ವಿನಿ ಕಾರ್ಡ್ ಪಡೆಯಲು ಯಾರು ಅರ್ಜಿಯನ್ನು ಸಲ್ಲಿಸಬೇಕು?

ಯಶಸ್ವಿನಿ ಕಾರ್ಡ ಪಡೆಯಲು ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿ ಬರುವ ರೈತರು, ಪರಿಶಿಷ್ಟ ವರ್ಗಗಳು, ಮಧ್ಯಮ ವರ್ಗದ ಕುಟುಂಬಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಮತ್ತು ಗ್ರಾಮೀಣ ಸ್ತ್ರೀ ಶಕ್ತಿ ಸಂಘದ ಸದಸ್ಯರು ಹಾಗೂ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರಬೇಕು ಹಾಗೂ ಸದಸ್ಯರಾಗಿ ಕನಿಷ್ಠ ಮೂರು ತಿಂಗಳು ಕಳೆದಿದ್ದರೆ ಅವರ ಕುಟುಂಬದ ಎಲ್ಲ ಸದಸ್ಯರು ಯಶಸ್ವಿ ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Kisan credit card-ರೈತರಿಗೆ ಗುಡ್ ನ್ಯೂಸ್! ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಲ ಸೌಲಭ್ಯ!

Where to apply for Yashavini card-ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಗ್ರಾಮ ಪಂಚಾಯತ್, ನಗರ ಪಂಚಾಯತ್, ಆರೋಗ್ಯ ಕೇಂದ್ರಗಳು ಮತ್ತು ಪ್ರಾದೇಶಿಕ ಆರೋಗ್ಯ ಕಚೇರಿಗಳು ಹಾಗೂ ಆಸ್ಪತ್ರೆಗಳಿಗೆ ಭೇಟಿ ಮಾಡಿ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

How to apply for Yashavini card-ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

yashasvini application

ಅಗತ್ಯ ದಾಖಲಾತಿಗಳ ಸಮೇತ ಅರ್ಹ ಅರ್ಜಿದಾರರು ಹತ್ತಿರದ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ನಿಗಧಿಪಡಿಸಿದ ಶುಲ್ಕ ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಅಧಿಕೃತ ವೆಬ್ಸೈಟ್ ನ್ನು ಭೇಟಿ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Udyogini Yojana-ಉದ್ಯೋಗಿನಿ ಯೋಜನೆಯಡಿ ₹3.0 ಲಕ್ಷ ರೂ ಬಡ್ಡಿ ರಹಿತ ಸಾಲ!

What are the required documents to get Yashavini Card-ಯಶಸ್ವಿನಿ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳಾವುವು?

  • ಆಧಾರ್ ಕಾರ್ಡ್/Aadhar card copy
  • ವೈದ್ಯಕೀಯ ಪ್ರಮಾಣಪತ್ರಗಳು/Medical Certificates
  • ಸಹಕಾರಿ ಸಂಘಗಳಲ್ಲಿ ಸದಸ್ಯತ್ವವನ್ನು ಹೊಂದಿರಬೇಕು/membership in cooperative societies.
  • ರೇಷನ್ ಕಾರ್ಡ್/Ration Card
  • ಭಾವಚಿತ್ರ/photo copy

What are the benefits of Yashaswini Card-ಯಶಸ್ವಿನಿ ಕಾರ್ಡ ಪಡೆಯುವುದರ ಲಾಭಗಳೇನು?

ಈ ಕಾರ್ಡ್ ಹೊಂದಿರುವವರು 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. ಹಾಗೂ ಈ ಕಾರ್ಡ ನ ಅಡಿಯಲ್ಲಿ 823 ಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಿದ್ದು ಕಾರ್ಡ ಸದಸ್ಯರು ಆಸ್ಪತ್ರೆಗೆ ದಾಖಲಾದರೆ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಭರಿಸಬಹುದಾಗಿದೆ.

ಇದನ್ನೂ ಓದಿ: Shri Kshetra Dharmasthala- ಧರ್ಮಸ್ಥಳದಲ್ಲಿ 52 ನೇ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ!

ಯಶಸ್ವಿನಿ ಕಾರ್ಡನಿಂದ ಹಲವು ಸೌಲಭ್ಯಗಳನ್ನು ಪಡೆಯಬಹುದು, ಪ್ರಮುಖವಾಗಿ ಆರೋಗ್ಯಕ್ಕೆ ಸಂಬಂಧಪಟ್ಟ ಸೌಲತ್ತುಗಳನ್ನು ಪಡೆಯಲು ಈ ಕಾರ್ಡ್ ಉಪಯೋಗಕಾರಿಯಾಗಿದೆ. ಯಶಸ್ವಿನಿ ಕಾರ್ಡ್ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ ವೈದ್ಯಕೀಯ ವೆಚ್ಚ ತಗ್ಗಿಸಲು ಜನರಿಗೆ ಹೆಚ್ಚು ಸಹಕಾರಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಆರೋಗ್ಯ ಇಲಾಖೆಯ ಕಚೇರಿಗೆ ಭೇಟಿ ಮಾಡಿ.
ಅಥವಾ
ಸರಕಾರವು ನಿಗದಿಪಡಿಸಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ: Click here

RELATED ARTICLES
- Advertisment -

Most Popular

Recent Comments